Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಯೋಗ ಮತ್ತು ಧ್ಯಾನ ಸಕಲರಿಗೂ ಅತೀ ಅವಶ್ಯವಾಗಿದೆ; ಶ್ರೀಹರಿ


ಮೈಸೂರು; ನಗರದ ಶಾರದಾ ವಿಲಾಸ ಫಾರ್ಮಸಿ ಕಾಲೇಜು ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ 12 ದಿನಗಳ ಯೋಗ ಶಿಬಿರದ ಸಮಾರೋಪ ಸಮಾರಂಭವನ್ನು ನಗರದ ಶಾರದಾ ವಿಲಾಸ ಮೈದಾನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಗೌರವ ಅಥಿತಿಗಳಾಗಿ ಆಗಮಿಸಿದ್ದ ಜಿಎಸ್‍ಎಸ್ ಸಂಸ್ಥೆಯ ಮುಖ್ಯಸ್ಥ ಶ್ರೀಹರಿ ಮಾತನಾಡಿ, ಯೋಗ ಮತ್ತು ಧ್ಯಾನ ಸಕಲರಿಗೂ ಅತೀ ಅವಶ್ಯವಾಗಿದೆ. ಭಾರತದಲ್ಲಿ ಮಾತ್ರವಲ್ಲ ಬೇರೆ ದೇಶಗಳಲ್ಲೂ ವ್ಯಾಪಕವಾಗಿ ಯೋಗ ಅಭ್ಯಾಸ ಮಾಡಲಾಗುತ್ತಿದ್ದು ಆರೋಗ್ಯ ವರ್ಧನೆಗೆ ತುಂಬಾ ಅನುಕೂಲ ಆಗಿದೆ. ಇದು ಕೇವಲ ದೈಹಿಕ ಕಸರತ್ತಾಗದೆ ಮನಸ್ಸು ಮತ್ತು ಮಸ್ತಿಷ್ಕದ ಸ್ಥಿಮಿತಕ್ಕೆ ಸಹಾಯ ಮಾಡುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಹನುಮಂತಾಚಾರ್ ಜೋಶಿ ಮಾತನಾಡಿ, ಯೋಗಾಭ್ಯಾಸವು ದೇಹದ ಆರೋಗ್ಯದ ಜೊತೆಗೆ ನಮ್ಮ ಮೆದುಳಿನಲ್ಲಿ ಉತ್ಪತ್ತಿಯಾಗುವ , ನಮ್ಮ ಮಾನಸಿಕ ಆರೋಗ್ಯ, ನೆನಪುಗಳು ಮತ್ತು ಸಂಯಮವನ್ನು ಉಳಿಸಲು ಸಹಾಯಕವಾಗುವ ರಾಸಾಯನಿಕಗಳನ್ನು ಸರಿಯಾದ ಪ್ರಮಾಣದಲ್ಲಿ ನಿಯಂತ್ರಣ ಮಾಡಲು ಸಹಾಯಕವಾಗುತ್ತವೆ ಎಂದು ತಿಳಿಸಿದರು. ನಿಯಮಿತವಾಗಿ ಯೋಗಾಭ್ಯಾಸ ಮಾಡುವವರಿಗೆ ಮರೆಗುಳಿ ರೋಗ – ಅಲ್ಜೆಮರ್ಸ್ , ಜemeಟಿಣiಚಿ ಬರುವ ಸಾಧ್ಯತೆಗಳು ಕಡಿಮೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಯುಕ್ತ ಯೋಗಾಶ್ರಮದ ರಾಕೇಶ್, ದಿನೇಶ್, ನೂರಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.