3Kaala News

ಸುಭಾಷಿತ 

ಓಟದ ಬದುಕಿನಲ್ಲಿ ಎಲ್ಲವನ್ನು ತಕ್ಷಣವೇ ಪಡೆದುಕೊಳ್ಳಬೇಕೆಂಬ ನಿನ್ನ ಹಟವೇ ನಿನ್ನ ನೆಮ್ಮದಿಯನ್ನು ಕದಿಯುತ್ತದೆ. ಸಮಯಕ್ಕಿಂತ ಮುಂಚೆ, ಹಣೆ ಬರಕಿಂತ ಮುಂಚೆ, ಹೆಚ್ಚಿಗೆ ಯಾರಿಗೂ ಏನೂ ಸಿಗುವುದಿಲ್ಲ . ನಿನ್ನ ಪ್ರಯತ್ನ ನಿರಂತರವಾಗಿರಲಿ. ಆದರೆ, ಫಲಿತಾಂಶಕ್ಕಾಗಿ ಇಂದಿನ ಶಾಂತಿಯನ್ನು ಬಲಿ ಕೊಡಬೇಡ. ಭಗವಾನ್ ಶ್ರೀ ಕೃಷ್ಣ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಯೋಗದ ತವರೂರು ಮೈಸೂರಿನ ವಿವಿಧೆಡೆ ಸಂಭ್ರಮದಿಂದ ನಡೆದ ಯೋಗ ದಿನಾಚರಣೆ


ಮೈಸೂರು: ಯೋಗದ ತವರೂರು ಎಂದು ಹೆಸರಾಗಿರುವ ಅರಮನೆ ನಗರಿ ಮೈಸೂರಿನಲ್ಲಿ ಭಾನುವಾರ ವಿವಿಧೆಡೆ, ವಿವಿಧ ಸಂಘ, ಸಂಸ್ಥೆಗಳಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಎ.ಡಿ.ಆರ್ ಕೇಂದ್ರದ ಮುಂಭಾಗದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ ಮತ್ತು ಆಯುಷ್ ಇಲಾಖೆ ಮೈಸೂರು ಇವರ ಜಂಟಿ ಆಶ್ರಯದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಉಷಾರಾಣಿ ಅವರು, ಪ್ರತಿಯೊಬ್ಬರೂ ಯೋಗವನ್ನು ತಮ್ಮ ದಿನಚರಿಯ ಭಾಗವಾಗಿಸಿಕೊಂಡಾಗ ಮಾತ್ರ ಒಂದು ಸುದೃಢ, ಆರೋಗ್ಯವಂತ ಮತ್ತು ಶಾಂತಿಪ್ರಿಯ ಸಮಾಜವನ್ನು ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪ್ರಸ್ತುತ ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರಿಗೂ ಮಾನಸಿಕ ಶಾಂತಿ ಮತ್ತು ದೈಹಿಕ ಆರೋಗ್ಯ ಅತ್ಯಗತ್ಯವಾಗಿದ್ದು, ಯೋಗವು ಅದಕ್ಕೆ ಸೂಕ್ತ ಮಾರ್ಗವಾಗಿದೆ ಎಂದು ತಿಳಿಸಿದರು.
ಯೋಗ ಎಂಬುದು ಕೇವಲ ದೈಹಿಕ ಕಸರತ್ತಲ್ಲ, ಅದು ನಮ್ಮ ದೇಹ, ಮನಸ್ಸು ಮತ್ತು ಆತ್ಮವನ್ನು ಜೋಡಿಸುವ ಒಂದು ಅದ್ಭುತ ಕಲೆ. ಇಂದಿನ ಆಧುನಿಕ ಯುಗದಲ್ಲಿ, ಅದರಲ್ಲೂ ವಿಶೇಷವಾಗಿ ನ್ಯಾಯಾಂಗ ವಲಯದಲ್ಲಿ ಕೆಲಸ ಮಾಡುವ ನಮಗೆ, ಮಾನಸಿಕ ಒತ್ತಡ ಸಾಮಾನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಪ್ರತಿದಿನ ಯೋಗ ಮಾಡುವುದರಿಂದ ನಮ್ಮ ಮನಸ್ಸು ಪ್ರಶಾಂತಗೊಳ್ಳುತ್ತದೆ ಮತ್ತು ತಾರ್ಕಿಕ ಚಿಂತನೆ ಹೆಚ್ಚುತ್ತದೆ ಎಂದು ತಿಳಿಸಿದರು.
ಯೋಗವು ನಮಗೆ ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗುತ್ತದೆ.ನಮ್ಮ ಭಾರತ ದೇಶ ಜಗತ್ತಿಗೆ ನೀಡಿದ ಅತ್ಯಂತ ಅಮೂಲ್ಯವಾದ ಕೊಡುಗೆ ಎಂದರೆ ಅದು ಯೋಗ. ಇಂದು ಇಡೀ ವಿಶ್ವವೇ ಭಾರತದ ಈ ಯೋಗ ಪರಂಪರೆಯನ್ನು ಒಪ್ಪಿಕೊಂಡು ಆಚರಿಸುತ್ತಿದೆ ಎನ್ನುವುದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದರು.
ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಉದ್ದೇಶ ಸಮಾಜಕ್ಕೆ ನ್ಯಾಯ ಒದಗಿಸುವುದಾಗಿದೆ. ಆರೋಗ್ಯವಂತ ಶರೀರ ಮತ್ತು ಆರೋಗ್ಯವಂತ ಮನಸ್ಸಿನಿಂದ ಮಾತ್ರ ನಾವು ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯ ಎಂದು ಹೇಳಿದರು.
ನಾವೆಲ್ಲರೂ ಕೇವಲ ಇಂದೊಂದು ದಿನ ಯೋಗ ಮಾಡಿ ಮರೆಯದೆ, ಯೋಗವನ್ನು ನಮ್ಮ ದೈನಂದಿನ ಜೀವನದ ಒಂದು ಅವಿಭಾಜ್ಯ ಭಾಗವಾಗಿಸಿಕೊಳ್ಳೋಣ ಎಂದು ಸಂಕಲ್ಪ ಮಾಡೋಣ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸೋಣ ಎಂದು ತಿಳಿಸಿದರು.
ಆಯುಷ್ ಇಲಾಖೆಯ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮ ಪ್ರದರ್ಶನಗಳು ನಡೆದವು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ವಕೀಲರು, ಪೆÇಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ಜಂಟಿಯಾಗಿ ಯೋಗಾಸನಗಳನ್ನು ಮಾಡಿದರು