Skip to main content

3Kaala News

ಸುಭಾಷಿತ 

ಬದುಕೆಂಬುದು ಚೈನಿನ ಸರಪಳಿ ಇದ್ದ ಹಾಗೆ. ಪ್ರತಿಕೊಂಡಿಯೂ ಗಟ್ಟಿಯಾಗಿರಬೇಕು. ಕೊಂಡಿಗಳ ನಡುವೆ ಬಿರುಕು ಬಿಟ್ಟಾಗ ಗಟ್ಟಿಯಾದ ಬೆಸುಗೆಗಳನ್ನು ನಿರಂತರವಾಗಿ ಹಾಕುತ್ತಿರಬೇಕು. ನಮ್ಮ ದೌರ್ಬಲ್ಯಗಳನ್ನು ಮೆಟ್ಟಿನಿಂತು; ಆದಮ್ಯ ಆತ್ಮವಿಶ್ವಾಸದಿಂದ ನಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಂಸದ ಯದುವೀರ್ ಒಡೆಯರ್‍ರಿಂದ ಇಂದು ಕೇಂದ್ರ ಸರ್ಕಾರದ ಯೋಜನೆಗಳ ಮೇಳ ಆಯೋಜನೆ

ಮೈಸೂರು: ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ನೇರವಾಗಿ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಸರ್ಕಾರದ ಯೋಜನೆಗಳ ಮೇಳವನ್ನು ಜೂನ್ 23 ರಂದು ಬೆಳಿಗ್ಗೆ 9:30 ಗಂಟೆಯಿಂದ ಕಾಡಾ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಆಯೋಜಿಸಿದ್ದಾರೆ.ಈ ಮೇಳದಲ್ಲಿ ಕೇಂದ್ರ ಸರ್ಕಾರದ ಹಲವು ಪ್ರಮುಖ ಯೋಜನೆಗಳ ಕುರಿತು ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿದ್ದು, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿದ್ದು, ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿ, ಯೋಜನೆಗಳ ಪ್ರಯೋಜನಗಳನ್ನು ಹೇಗೆ ಪಡೆಯಬಹುದು ಎಂಬುದರ ಕುರಿತು…

Read More

ಫುಟ್ ಪಾತ್‍ನಲ್ಲಿ ನಿತ್ರಾಣಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ ಸಾವು

ಮೈಸೂರು: ನಗರದ ನಜರ್‍ಬಾದ್ ಪೆÇಲೀಸ್ ಠಾಣೆ ವ್ಯಾಪ್ತಿಯ ರೇಸ್ ಕೋರ್ಸ್ ರಸ್ತೆಯ ಫುಟ್ ಪಾತ್‍ನಲ್ಲಿ ನಿತ್ರಾಣಗೊಂಡು ಬಿದ್ದಿದ್ದ 60 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ.ನಿತ್ರಾಣಗೊಂಡು ಬಿದ್ದಿದ್ದ ಈ ವ್ಯಕ್ತಿಯನ್ನು ಚಿಕಿತ್ಸೆಗಾಗಿ, ಮೈಸೂರು ನಗರದ ಸಂಚಲನ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಪ್ರಕರಣ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೃತನ ಹೆಸರು ಶಿವಕುಮಾರ್ (ಅಪರಿಚಿತ ಗಂಡಸು), ಆಗಿದ್ದು, 5.8 ಅಡಿ ಎತ್ತರ, . ಈತನ ಕೋಲು ಮುಖ, ಸಣ್ಣ ಶರೀರ, ಎಣಗೆಂಪು ಮೈಬಣ್ಣ, ತಲೆಯ ಮುಂಭಾಗ ಕೂದಲು ಉದುರಿಹೋಗಿದ್ದು,…

Read More

ಗೌಡತಿಯರ ಬಳಗದಿಂದ ನಾಲ್ಕನೇ ವರ್ಷದ ವಾರ್ಷಿಕೋತ್ಸವ

ಮೈಸೂರು; ಇಲ್ಲಿನ ವಿಜಯನಗರ ಹೆಬ್ಬಾಳು ಎರಡನೇ ಹಂತದಲ್ಲಿರುವ ಸಾಧನ ಯೋಗ ಕೇಂದ್ರದಲ್ಲಿ ಗೌಡತಿಯರ ಬಳಗದಿಂದ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಸಮಾರಂಭವನ್ನು ಆಚರಣೆ ಮಾಡಲಾಯಿತು4ವರ್ಷದ ವಾರ್ಷಿಕೋತ್ಸವದ ಸವಿನೆನಪಿಗಾಗಿ ಪರಿಸರ ಉಳಿಸಿ ಎನ್ನುವ ವಾಕ್ಯಡೊಡನೆ ಗಿಡ ನೆಡುವ ಮೂಲಕ ವಿನೂತನವಾಗಿ ಆಚರಣೆ ಮಾಡಲಾಯಿತುಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ನಾಗಮಣಿ ಸುಬ್ರಮಣ್ಯ. ರಾಜೇಶ್ವರಿ ನಾಗರಾಜ್. ರಾಣಿ ಮಹೇಶ್. ಸವಿತ ರವಿ ಕುಮಾರ್. ಆಶಾ ದೇವರಾಜ್. ಜಯಂತಿ. ಮೀನಾ ಸುಬ್ರಮಣ್ಯ. ಲಲಿತಕೃಷ್ಣೆ ಗೌಡ ವನಜ ಶಶಿಕಲಾ ಸುವರ್ಣ ಲಕ್ಷ್ಮೇ ಗೌಡ. ಹಾಗೂ ಬಳಗದ…

Read More

ಮಣ್ಣಿನ ಪರೀಕ್ಷೆ ಆಧರಿಸಿ ರೈತರು ಸಮತೋಲಿತ ಗೊಬ್ಬರ ಬಳಕೆ ಮಾಡಬೇಕು; ಮಧುಲತಾ ಹೆಚ್.ಬಿ.

ಮೈಸೂರು: ಮಣ್ಣು, ನೀರಿನ ಸಂರಕ್ಷಣೆ ಸುಸ್ಥಿರ ಕೃಷಿಗೆ ಬುನಾದಿ ಹಾಗೂ ಮಣ್ಣಿನ ಪರೀಕ್ಷೆ ಆಧರಿಸಿ ರೈತರು ಸಮತೋಲಿತ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕಿ ಮಧುಲತಾ ಹೆಚ್.ಬಿ ತಿಳಿಸಿದರು.ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನಾಗನಹಳ್ಳಿ, ವತಿಯಿಂದ 2026-27ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿಯ ತುರಗನೂರು ಗ್ರಾಮದಲ್ಲಿ “ಭತ್ತದಲ್ಲಿ ಸಮತೋಲಿತ ರಸಗೊಬ್ಬರ ಬಳಕೆ ಮತ್ತು ಸಮಗ್ರ ಪೀಡೆ ನಿರ್ವಹಣೆ’’ ಕುರಿತು ಸೋಮವಾರ…

Read More

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವಿಶ್ವ ಸಂಗೀತ ದಿನದ ಸಂಭ್ರಮ

ಮೈಸೂರು; ಇಲ್ಲಿನ ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಮತ್ತು ವಿಶ್ವ ಸಂಗೀತ ದಿನವನ್ನು ಉತ್ಸಾಹದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಯೋಗ ಅಧಿವೇಶನದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳು, ಪ್ರಾಣಾಯಾಮ ಮತ್ತು ಧ್ಯಾನವನ್ನು ಅಭ್ಯಸಿಸಿದರು. ದೈಹಿಕ ಮತ್ತು ಮಾನಸಿಕ ಆರೋಗ್ಯದ ಮಹತ್ವವನ್ನು ಈ ಕಾರ್ಯಕ್ರಮ ಒತ್ತಿ ಹೇಳಿತು. ನಂತರ, ವಿಶ್ವ ಸಂಗೀತ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ಗಾಯನ ಮತ್ತು ವಾದ್ಯ ಸಂಗೀತ ಪ್ರೌಢಿಮೆಯನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮವು ಶಾಲಾ ಆವರಣದಲ್ಲಿ…

Read More

ಮೈಸೂರು ರೈಲು ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದ 34 ಮಂದಿ ಬಿಡುಗಡೆ

*ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯ ವಿರುದ್ಧ ಕೇಸ್ ದಾಖಲುಮೈಸೂರು; ಶಂಕಿತ ಬಾಂಗ್ಲಾ ಪ್ರಜೆಗಳೆಂದು ಮೈಸೂರು ರೈಲು ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದ 34 ಮಂದಿಯನ್ನು ವಿಚಾರಣೆ, ದಾಖಲೆಗಳ ಪರಿಶೀಲನೆಯ ಬಳಿಕ ಬಿಡುಗಡೆ ಮಾಡಲಾಗಿದೆ.ಜೂನ್ 21 ರಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ, ರೈಲು ಸಂಖ್ಯೆ 22817 (ಹೌರಾ-ಮೈಸೂರು ಎಕ್ಸ್‍ಪ್ರೆಸ್) ಮೂಲಕ ಕೆಲವು ಶಂಕಿತ ವ್ಯಕ್ತಿಗಳು ಪ್ರಯಾಣಿಸುತ್ತಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ಮೈಸೂರು ಸರ್ಕಾರಿ ರೈಲ್ವೆ ಪೆÇಲೀಸ್ ಹಾಗೂ ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ರೈಲಿನಲ್ಲಿ ಪ್ರಯಾಣಿಕರ ಗುರುತಿನ…

Read More

ಯುವಕನೊಬ್ಬ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರು: ಯುವಕನೊಬ್ಬ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂರು ಜನರು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ದಂಪತಿ ಶಿವಣ್ಣ-ನಾಗರತ್ನ ಹಾಗೂ ಅವರ ಮಗಳು ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡವರು. ಇದೇ ಗ್ರಾಮದ ಯುವಕ ಉಲ್ಲಾಸ್ ಗೌಡ ಎಂಬಾತ ಮಾನಸಿಕವಾಗಿ ಈ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದ ಆರೋಪಿ.ಮುಂದಿನ ಎರಡು ದಿನಗಳಲ್ಲಿ ಯುವತಿಯ ಮದುವೆಗೆ ಸಕಲ ಸಿದ್ಧತೆ…

Read More