Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಂಸದ ಯದುವೀರ್ ಒಡೆಯರ್‍ರಿಂದ ಇಂದು ಕೇಂದ್ರ ಸರ್ಕಾರದ ಯೋಜನೆಗಳ ಮೇಳ ಆಯೋಜನೆ


ಮೈಸೂರು: ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ನೇರವಾಗಿ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಸರ್ಕಾರದ ಯೋಜನೆಗಳ ಮೇಳವನ್ನು ಜೂನ್ 23 ರಂದು ಬೆಳಿಗ್ಗೆ 9:30 ಗಂಟೆಯಿಂದ ಕಾಡಾ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಆಯೋಜಿಸಿದ್ದಾರೆ.
ಈ ಮೇಳದಲ್ಲಿ ಕೇಂದ್ರ ಸರ್ಕಾರದ ಹಲವು ಪ್ರಮುಖ ಯೋಜನೆಗಳ ಕುರಿತು ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿದ್ದು, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿದ್ದು, ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿ, ಯೋಜನೆಗಳ ಪ್ರಯೋಜನಗಳನ್ನು ಹೇಗೆ ಪಡೆಯಬಹುದು ಎಂಬುದರ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.
ಈ ಕುರಿತು ಸಂಸದ ಯದುವೀರ್ ಒಡೆಯರ್ ಮಾತನಾಡಿ, `ಕೇಂದ್ರ ಸರ್ಕಾರದ ಅನೇಕ ಯೋಜನೆಗಳು ಜನರ ಕಲ್ಯಾಣಕ್ಕಾಗಿ ಜಾರಿಗೆ ಬಂದಿದ್ದು, ಅವು ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ತಲುಪುವುದು ಅತ್ಯಂತ ಮುಖ್ಯ. ಇದೇ ಉದ್ದೇಶದಿಂದ ಈ ಯೋಜನೆಗಳ ಮೇಳವನ್ನು ಆಯೋಜಿಸಿದ್ದೇನೆ. ಪ್ರತಿ ತ್ರೈಮಾಸಿಕದಲ್ಲೂ ಇಂತಹ ಮೇಳಗಳನ್ನು ಆಯೋಜಿಸುವ ಯೋಜನೆ ಇದೆ, ಇದರಿಂದ ಯೋಜನೆಗಳು ನೇರವಾಗಿ ಜನರಿಗೆ ತಲುಪಲಿವೆ. ಮುಂದಿನ ದಿನಗಳಲ್ಲಿ ಇದು ಇನ್ನೂ ದೊಡ್ಡ ಮಟ್ಟದಲ್ಲಿ ಬೆಳೆಯಲಿದೆ ಎಂಬ ವಿಶ್ವಾಸವಿದೆ,'' ಎಂದರು. ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬರಿಗೂ ಉಪಯೋಗವಾಗುವ ಉದ್ದೇಶದಿಂದ, ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ನನ್ನ ಕ್ಷೇತ್ರದ ಜನರು ಮತ್ತು ಕೇಂದ್ರ ಸರ್ಕಾರದ ನಡುವೆ ಸೇತುವೆಯಾಗಿ ಈ ಮೇಳವನ್ನು ಆಯೋಜಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ,” ಎಂದು ಹೇಳಿದರು.
ಈ ಕಾರ್ಯಕ್ರಮವು ಜನರಿಗೆ ಸರ್ಕಾರದ ಯೋಜನೆಗಳ ಅರಿವು ಹೆಚ್ಚಿಸುವುದರ ಜೊತೆಗೆ, ಅವುಗಳ ಲಭ್ಯತೆ ಮತ್ತು ಪ್ರಯೋಜನವನ್ನು ಇನ್ನಷ್ಟು ಸುಲಭಗೊಳಿಸುವ ಮಹತ್ವದ ಹೆಜ್ಜೆಯಾಗಿದೆ.
ಸಾರ್ವಜನಿಕರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಪ್ರಯೋಜನ ಪಡೆಯುವಂತೆ ತಿಳಿಸಿದರು.