Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಾಲಭಾದೆ ತಾಳದೆ ರೈತ ಆತ್ಮಹತ್ಯೆ


ಪಿರಿಯಾಪಟ್ಟಣ:
ಸಾಲ ಭಾದೆ ತಾಳದೆ ರೈತರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಕೊತ್ತವಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸ್ವಾಮಿ ಗೌಡ (51) ಆತ್ಮಹತ್ಯೆ ಮಾಡಿಕೊಂಡವರು.
ಇವರು ತಮ್ಮ ಜಮೀನಿನಲ್ಲಿ ತಂಬಾಕು ನಾಟಿ ಮಾಡಿದ್ದು, ಆ ತಂಬಾಕು ಸಸಿಗಳಿಗೆ ರೋಗ ಹರಡಿತ್ತು. ಅಲ್ಲದೆ ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದಿದ್ದರು. ಇವರು 20 ಲಕ್ಷ ರೂ.ಗಳಿಗೂ ಹೆಚ್ಚು ಸಾಲ ಮಾಡಿದ್ದು, ಕಿತ್ತೂರಿನ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ 5 ಲಕ್ಷ ರೂ. ಹಾಗೂ ಟ್ರಾಕ್ಟರ್ ಮೇಲೆ 5 ಲಕ್ಷ ರೂ. ಹಾಗೂ ಇನ್ನಿತರ ಕಡೆ ಕೈ ಸಾಲ ಮಾಡಿಕೊಂಡಿದ್ದು, ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬAಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಪತ್ನಿ ಹಾಗೂ ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ.