Skip to main content

3Kaala News

ಸುಭಾಷಿತ 

ಬದುಕೆಂಬುದು ಚೈನಿನ ಸರಪಳಿ ಇದ್ದ ಹಾಗೆ. ಪ್ರತಿಕೊಂಡಿಯೂ ಗಟ್ಟಿಯಾಗಿರಬೇಕು. ಕೊಂಡಿಗಳ ನಡುವೆ ಬಿರುಕು ಬಿಟ್ಟಾಗ ಗಟ್ಟಿಯಾದ ಬೆಸುಗೆಗಳನ್ನು ನಿರಂತರವಾಗಿ ಹಾಕುತ್ತಿರಬೇಕು. ನಮ್ಮ ದೌರ್ಬಲ್ಯಗಳನ್ನು ಮೆಟ್ಟಿನಿಂತು; ಆದಮ್ಯ ಆತ್ಮವಿಶ್ವಾಸದಿಂದ ನಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಜಯ ವಿಠ್ಠಲದಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ


ಮೈಸೂರು; ನಗರದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸರಸ್ವತಿಪುರಂ ಪೋಲೀಸ್ ಠಾಣೆಯವರು ಆಯೋಜಿಸಿದ್ದರು. ಕಾರ್ಯಕ್ರಮವನ್ನು ಸರಸ್ವತಿಪುರಂ ಪೋಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಭವ್ಯ ಮತ್ತು ಸಾಮಾಜಿಕ ಕಾರ್ಯಕರ್ತ ಮಹೇಶ್‌ರವರು ಉದ್ಘಾಟಿಸಿದರು. ಬಳಿಕ ಮಹೇಶ್ ಮಾತನಾಡಿ, ವಿದ್ಯಾರ್ಥಿ ಜೀವನವು ಅತ್ಯಂತ ಅಮೂಲ್ಯವಾದದ್ದು. ಈ ಸಮಯದಲ್ಲಿ ಸರಿಯಾದ ಮಾರ್ಗವನ್ನು ಆರಿಸಿಕೊಂಡರೆ, ಜೀವನ ಯಶಸ್ವಿಯಾಗುತ್ತದೆ. ಆದರೆ ಕೆಲವೊಮ್ಮೆ ಕೆಟ್ಟ ಸ್ನೇಹ, ಕುತೂಹಲ, ಒತ್ತಡ ಮತ್ತು ಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದ ಕೆಲವು ಯುವಕರು ಮಾದಕ ವಸ್ತುಗಳ ಕಡೆ ಆಕರ್ಷಿತರಾಗುತ್ತಾರೆ. ಇದು ಆರಂಭದಲ್ಲಿ ಸಂತೋಷ ಮತ್ತು ಒತ್ತಡ ನಿವಾರಣೆ ಮಾಡುವಂತೆ ಕಂಡರೂ ಅದು ನಂತರ ವ್ಯಕ್ತಿಯ ಜೀವನವನ್ನೇ ಹಾಳು ಮಾಡುತ್ತದೆ. ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಮಾದಕ ವಸ್ತುಗಳು ಶ್ವಾಸಕೋಶ, ಹೃದಯ, ಮೆದುಳು ಮತ್ತು ರಕ್ತಪರಿಚಲನೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ನೆನಪಿನ ಶಕ್ತಿ ಕಡಿಮೆಯಾಗಿ ಮಾನಸಿಕ ಖಿನ್ನತೆ ಮತ್ತು ಆತಂಕ ಹೆಚ್ಚಾಗುತ್ತದೆ. ದೇಹದ ರೋಗನಿರೋಧಕ ಶಕ್ತಿಯು ಕುಂದುತ್ತದೆ. ಈ ರೀತಿ ವಿದ್ಯಾರ್ಥಿಗಳ ಭವಿಷ್ಯದ ಗುರಿಯು ನಾಶವಾಗಿ ಆರ್ಥಿಕ ಸಮಸ್ಯೆಗಳು ಉಂಟಾಗಿ ಸಮಾಜದಲ್ಲಿ ಗೌರವ ಕಳೆದುಕೊಳ್ಳುತ್ತಾರೆ. ಹಾಗಾಗಿ ವಿದ್ಯಾರ್ಥಿಗಳು ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಕ್ರೀಡೆ, ಯೋಗ ಮತ್ತು ಧ್ಯಾನದಲ್ಲಿ ಭಾಗವಹಿಸಿ ಜೀವನದ ಗುರಿಯೆಡೆಗೆ ಮುನ್ನುಗ್ಗಿ ಬದುಕನ್ನು ಸಾರ್ಥಕಪಡಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.
ಆರಕ್ಷಕ ಉಪ ನಿರೀಕ್ಷಕರಾದ ಭವ್ಯ ಮಾತನಾಡಿ, ವಿದ್ಯಾರ್ಥಿಗಳಿಗೆ ಸಿಗುವ ಉತ್ತಮ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿ ಯಶಸ್ವಿಯಾಗಬೇಕೆಂದು ನುಡಿದರು. ಕಾರ್ಯಕ್ರಮದಲ್ಲಿ ಆರಕ್ಷಕ ಸಹ ಉಪನಿರೀಕ್ಷಕ ಶೇಷಾದ್ರಿ, ವಿಜಯ ವಿಠಲ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಚ್. ಸತ್ಯಪ್ರಸಾದ್, ಉಪನ್ಯಾಸಕರು, ಸರಸ್ವತಿಪುರಂ ಪೋಲೀಸ್ ಠಾಣೆಯ ಸಿಬ್ಬಂದಿ ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.