Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅರಸು ಕಲಾಭವನದಲ್ಲಿ ವಿಕಲಚೇತನರಿಗೆ ಸವಲತ್ತು ವಿತರಣೆ

ಪಿರಿಯಾಪಟ್ಟಣ:ವಿಕಸಿತ ಭಾರತದ ಪರಿಕಲ್ಪನೆಯಡಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುತ್ತಿದ್ದು ಈ ಮಹತ್ ಕಾರ್ಯಕ್ಕೆ ವಿಕಲಚೇತನರು ಕೈಜೋಡಿಸಬೇಕು ಎಂದು ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ತಿಳಿಸಿದರು.

ಪಟ್ಟಣದ ಡಿ.ದೇವರಾಜ ಅರಸು ಕಲಾಭವನದಲ್ಲಿ ಸಾಮಾಜಿಕ ಅಧಿಕಾರಿತ ಭಾರತ ಸರ್ಕಾರದ ಅಡಿಪ್ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಸವಲತ್ತು ವಿತರಿಸಿ ಮಾತನಾಡಿದರು.

ಮೋದಿಯವರು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಗುರಿಯೊಂದಿಗೆ ಗ್ರಾಮೀಣ ಮತ್ತು ನಗರ ಜನರ ಜೀವನ ಮಟ್ಟವನ್ನು ಸುಧಾರಿಸಲು ಬಜೆಟ್‌ನಲ್ಲಿ ವಿಶೇಷ ಚೇತನರ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ವಿಕಲಚೇತನರಲ್ಲಿ ಸಾಮಾನ್ಯರಿಗಿಂತ ಹೆಚ್ಚು ಪ್ರತಿಭೆ, ಆತ್ಮಸ್ಥೈರ್ಯ, ಸಂಕಲ್ಪ ಇದೆ. ಅವರಿಗೆ ಸಾಮಾನ್ಯ ಜನರಿಗಿಂತ ಹೆಚ್ಚಿನ ತಂತ್ರಜ್ಞಾನ ತಿಳಿದಿದೆ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ನೀಡಲು ಸವಲತ್ತು ವಿತರಿಸಲಾಗುತ್ತಿದೆ. ದೇಶದ ಜನಸಂಖ್ಯೆಯಲ್ಲಿ ಶೇ 5 ರಷ್ಟು ಜನ ವಿಕಲಚೇತನರು ಇದ್ದಾರೆ. ಸುಮಾರು 6.50 ಕೋಟಿ ಜನ ಅಂಗ ವೈಕಲ್ಯತೆಯಿಂದ ಬಳಲುತ್ತಿದ್ದಾರೆ. ಕೆಲವರಿಗೆ ಹುಟ್ಟಿನಿಂದಲೇ ಅಂಗವೈಕಲ್ಯತೆ ಕಾಣಿಸಿಕೊಳ್ಳುತ್ತದೆ. ಸಮಾಜ ಅವರಿಗೆ ಶಕ್ತಿ, ಆತ್ಮಸ್ಥೈರ್ಯ ನೀಡಿದರೆ ಉತ್ತಮ ಜೀವನ ಕಟ್ಟಿಕೊಳ್ಳುತ್ತಾರೆ ಎಂದರು.

ವಿಕಲಚೇತನರು ಸಾಮಾನ್ಯರಂತೆ ಜೀವನ ನಡೆಸಬೇಕು ಎಂಬ ಉದ್ದೇಶದಿಂದ

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ವಿಕಲಚೇತನರಿಗೆ ರೂ. 18 ಲಕ್ಷ ವೆಚ್ಚದಲ್ಲಿ ವ್ಹೀಲ್ ಚೇರ್, ಟ್ರೈಸೈಕಲ್, ಬ್ಯಾಟರಿ ಚಾಲಿತ ವಾಹನ, ವಾಕರ್, ಸ್ಟಿಕ್‌ಗಳು, ಶ್ರವಣ ಸಾಧನಗಳು ಸೇರಿದಂತೆ ಇನ್ನಿತರ ಉಪಕರಣಗಳು ವಿತರಿಸಲಾಗುತ್ತಿದ್ದು ಆ ಮೂಲಕ ವಿಶೇಷ ಚೇತನರು ಘನತೆಯ ಜೀವನವನ್ನು ರೂಪಿಸಿಕೊಳ್ಳುವ ಅವಕಾಶ ಮಾಡಿಕೊಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಲ್.ನಾಗೇಂದ್ರ, ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ ತಾಲ್ಲೂಕು ಘಟಕದ ಅಧ್ಯಕ್ಷ ವಿ.ರಾಜೇಂದ್ರ, ಬಿಜೆಪಿ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎಂ.ಎಂ.ರಾಜೇಗೌಡ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮುಖಂಡರಾದ ಆರ್.ಟಿ.ಸತೀಶ್, ಪಿ.ಜೆ.ರವಿ, ವಿಕ್ರಂ ರಾಜ್, ಪರೀಕ್ಷಿತ್ ರಾಜ್, ಕಿರಣ್ ಜಯರಾಮೇಗೌಡ ಬೂತನಹಳ್ಳಿ ವಿಶ್ವನಾಥ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರಾಘವೇಂದ್ರ, ಎಂಆರ್ಡಬ್ಲಿಯೋ ಲಕ್ಷ್ಮೀ, ಸಿಡಿಪಿಒ ವೀಣಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.