Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಜಯನಗರ ಉಪ ವಿಭಾಗದ ಪೊಲೀಸರಿಂದ ಜಾಗೃತಿ ಜಾಥಾ


ಮಾದಕ ವ್ಯಸನದಿಂದ ದೂರವಿರಿ; ಎಸಿಪಿ ರವಿಪ್ರಸಾದ್
ಮೈಸೂರು:
ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮಗಳನ್ನು ಉಂಟುಮಾಡುವುದರ ಜೊತೆಗೆ ಅಪರಾಧ ಚಟುವಟಿಕೆಗಳಿಗೆ ದಾರಿಮಾಡಿಕೊಡುತ್ತದೆ ಎಂದು ವಿಜಯನಗರ ಉಪವಿಭಾಗದ ಉಪ ಪೊಲೀಸ್ ಆಯುಕ್ತ ರವಿಪ್ರಸಾದ್ ಹೇಳಿದರು.
ಅಂತಾರಾಷ್ಟಿçÃಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ, ಮೈಸೂರು ನಗರ ಪೊಲೀಸ್ ಸಹಯೋಗದೊಂದಿಗೆ ವಿಜಯನಗರ ಪೊಲೀಸ್ ಠಾಣಾ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಜಾಗೃತಿ ಸಪ್ತಾಹ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು,
ಸಾರ್ವಜನಿಕರು ವಿಶೇಷವಾಗಿ ಯುವಜನತೆ ಮತ್ತು ವಿದ್ಯಾರ್ಥಿಗಳು ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಹೊಂದಿ, ಇಂತಹ ದುಷ್ಚಟಗಳಿಂದ ದೂರವಿದ್ದು, ಆರೋಗ್ಯಕರ ಹಾಗೂ ಶಿಸ್ತುಬದ್ಧ ಜೀವನವನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು.
ಪ್ರತಿ ವರ್ಷ ಜೂ.26ರಂದು ಆಚರಿಸಲಾಗುವ ಅಂತರರಾಷ್ಟಿçÃಯ ಮಾದಕ ವಸ್ತುಗಳ ದುರ್ಬಳಕೆ ಮತ್ತು ಅಕ್ರಮ ಸಾಗಣಿಕೆ ವಿರೋಧಿ ದಿನಾಚರಣೆ'' ಅಂಗವಾಗಿ ಈ ವಾರವನ್ನು ಮಾದಕ ವಸ್ತುಗಳ ವಿರೋಧಿ ಸಪ್ತಾಹ-2026 ಎಂದು ಆಚರಿಸುತ್ತಿದ್ದು,ಅಂತೆಯೇ ಇಂದು ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕರಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಡ್ರಗ್ ನಂತಹ ಮಾರಕ ವ್ಯಸನಗಳಿಗೆ ಬಲಿಯಾಗುತ್ತಿರುವ ಯುವಕರನ್ನು ರಕ್ಷಿಸುವುದು ಇದರ ಮುಖ್ಯ ಗುರಿಯಾಗಿದ್ದು,ಮಾದಕ ವಸ್ತುಗಳನ್ನು ನಾಶಪಡಿಸುವ ಮೂಲಕ ಕಠಿಣ ಸಂದೇಶವನ್ನು ರವಾನಿಸಲಾಗುತ್ತದೆ.ಹಾಗೂ ಮಾದಕ ವ್ಯಸನಿಗಳಿಗೆ ಪುನರ್ವಸತಿ ಕೇಂದ್ರಗಳ ಮೂಲಕ ಸೂಕ್ತ ಚಿಕಿತ್ಸೆ ನೀಡಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನಗಳನ್ನು ನಗರ ಪೊಲೀಸ್ ಇಲಾಖೆ ವತಿಯಿಂದ ಉತ್ತೇಜಿಸಲಾಗುತ್ತಿದೆ ಎಂದ ಅವರು, ಯುವಜನತೆ ಇಂತಹ ದುಶ್ಚಟದಿಂದ ದೂರವಿದ್ದು, ಕ್ರೀಡೆ ಮತ್ತು ಉತ್ತಮ ಶೈಲಿಯ ಜೀವನದತ್ತ ಗಮನ ಹರಿಸಬೇಕೆಂಬುದು ಇಂದಿನ ಜಾಗೃತಿ ಜಾಥಾದ ಆಶಯವಾಗಿದೆ ಎಂದು ಹೇಳಿದರು. ಮಾದಕ ವಸ್ತುಗಳ ಮಾರಾಟ, ಸಾಗಣೆ ಅಥವಾ ಬಳಕೆಯ ಬಗ್ಗೆ ಯಾವುದೇ ಮಾಹಿತಿ ಕಂಡುಬAದಲ್ಲಿ ಸಾರ್ವಜನಿಕರು ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112, ಮಾಹಿತಿ ನೀಡುವ ಮೂಲಕಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಹಕರಿಸುವಂತೆ ಕೋರಿದರು.
ಹೆಬ್ಬಾಳಿನ ಸೂರ್ಯ ಬೇಕರಿಯಿಂದ ಶುರುವಾದ ಜಾಗೃತಿ ಜಾಥಾ ಶ್ರೀಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಅಂತ್ಯಗೊAಡಿತು.
ಈ ಸಂದರ್ಭದಲ್ಲಿ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್, ಶ್ರೀನಿವಾಸನ್, ವಿಜಯನಗರ ಠಾಣಾ ಇನ್ಸ್ ಪೆಕ್ಟರ್ ಲವ, ಮೇಟಗಳ್ಳಿ ಠಾಣಾ ಇನ್ಸ್ ಪೆಕ್ಟರ್ ಅರುಣ್ ಕುಮಾರ್, ಸರಸ್ವತಿಪುರಂ ಠಾಣೆಯ ರವಿಕಿರಣ್, ಹೆಬ್ಬಾಳು ಠಾಣೆಯ ಲಕ್ಷಿ÷್ಮÃಕಾಂತ್ ಸೇರಿದಂತೆ ನೂರಕ್ಕೂ ಅಧಿಕ ಮಂದಿ ಆರಕ್ಚಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.