Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜುಲೈ 1ರಿಂದ 3ರ ವರೆಗೆ 3 ದಿನಗಳ ಕಾಲ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಉದ್ಘಾಟನೆ ಹಾಗೂ ಅಮ್ಮನವರ ವಿಗ್ರಹ ಪುನರ್‌ ಪ್ರತಿಷ್ಠಾಪನೆ ಮಹೋತ್ಸವ

ಎಚ್.ಡಿ.ಕೋಟೆ : ದಾನಿಗಳು ಮತ್ತು ಅಮ್ಮನವರ ಭಕ್ತರ ಸಹಕಾರದಲ್ಲಿ ಸುಮಾರು 65 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಉದ್ಘಾಟನೆ ಹಾಗೂ ಅಮ್ಮನವರ ವಿಗ್ರಹ ಪುನರ್‌ ಪ್ರತಿಷ್ಠಾಪನೆ ಮಹೋತ್ಸವ ಜುಲೈ 1ರಿಂದ 3ರ ವರೆಗೆ 3 ದಿನಗಳ ಕಾಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಸ್ಥಾನ ಸೇವಾ ಟ್ರಸ್ಟ್ ಖಜಾಂಚಿ ಸಿ.ಎನ್. ನಾಗಣ್ಣ ತಿಳಿಸಿದರು.
ಎಚ್.ಡಿ.ಕೋಟೆ ತಾಲ್ಲೂಕು ಪತ್ರಕರ್ತರ ಸಂಘದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 1 ಮತ್ತು 2 ರಂದು ದೇವಸ್ಥಾನದಲ್ಲಿ ಹೋಮ-ಹವನಗಳು, ಕುಂಭಾಭಿಷೇಕ ಜರುಗಲಿದೆ, ಸಂಜೆ ವೇಳೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಜುಲೈ 3ರಂದು ಸುತ್ತೂರು ಶ್ರೀ ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ನೂತನ ದೇವಸ್ಥಾನ ಕಟ್ಟಡವನ್ನು ಲೋಕಾರ್ಪಣೆಮಾಡಲಿದ್ದಾರೆ.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸೋಮೇಶ್ವರನಾಥ ಸ್ವಾಮೀಜಿ ದೇವಸ್ಥಾನ ಕಳಸಾರೋಹಣ ನೆರವೇರಿಸಲಿದ್ದು, ಸರಗೂರು ಪಡವಲು ಬಿಡಗಲು ವಿರಕ್ತ ಮಠದ ಮಹದೇವ ಸ್ವಾಮೀಜಿ ಗಣಪತಿ ಮೂರ್ತಿಯನ್ನು ಉದ್ಘಾಟಿಸಿದ ಬಳಿಕ ಮಹಾಮಂಗಳಾರತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಎಲ್ಲ ಕಾರ್ಯಕ್ರಮದಲ್ಲಿ ಪಟ್ಟಣದ ಸುಮಾರು 5 ಸಾವಿರಕ್ಕೂ ಹೆಚ್ಚು ಭಕ್ತರು ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ ಬರುವ ಭಕ್ತರಿಗೆ ಮೂರು ದಿನಗಳು ಅನ್ನಸಂತರ್ಪಣೆ ನೆರವೇರಿಲಿದೆ ಎಂದ ಅವರು ಕಾರ್ಯಕ್ರಮದ ಯಶಸ್ಸಿಗೆ ಪ್ರತಿಯೊಬ್ಬರು ಕೈ ಜೋಡಿಸುವಂತೆ ಮನವಿ ಮಾಡಿದರು.
ಆದ್ದೂರಿ ಸಭಾ ಕಾರ್ಯಕ್ರಮ,
ನಂತರ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಮೈಸೂರು ಕೊಡಗು ಲೋಕಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಶಿಲಾನ್ಯಾಸ ಅನಾವರಣಗೊಳಿಸಲಿದ್ದು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಸುನಿಲ್ ಬೋಸ್ ಕಳಸಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಎಂ.ಶಿವಣ್ಣ, ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ದೇವಸ್ಥಾನದ ಗೌರವಾಧ್ಯಕ್ಷ ಎಂ.ಸಿ.ದೊಡ್ಡನಾಯಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಜಯಕುಮಾರ್ ನಾಗನಾಳ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಜಿ.ಪಂ. ಸದಸ್ಯ ಹೆಚ್.ಸಿ.ಮಂಜುನಾಥ್, ದೇವಸ್ಥಾನ ಟ್ರಸ್ಟ್ ನ ಆರ್.ನಟರಾಜು, ಡೈರಿ ಶ್ರೀಕಾಂತ್, ವಕೀಲ ಜಿ.ಎನ್. ನಾರಾಯಣಗೌಡ, ಆರ್. ರಾಮಯ್ಯ, ಸ್ಟುಡಿಯೋ ಪ್ರಕಾಶ್, ಕುಲುಮೆ ರಮೇಶ್, ನಾಗೇಗೌಡ ಇತರರು ಉಪಸ್ಥಿತರಿದ್ದರು.
ಗೋಷ್ಠಿಯಲ್ಲಿ ಮಾಜಿ ಜಿ.ಪಂ. ಸದಸ್ಯ ಹೆಚ್.ಸಿ.ಮಂಜುನಾಥ್, ದೇವಸ್ಥಾನ ಟ್ರಸ್ಟ್ ನ ಆರ್.ನಟರಾಜು, ಡೈರಿ ಶ್ರೀಕಾಂತ್, ವಕೀಲ ಜಿ.ಎನ್. ನಾರಾಯಣಗೌಡ, ಆರ್. ರಾಮಯ್ಯ, ಸ್ಟುಡಿಯೋ ಪ್ರಕಾಶ್, ಕುಲುಮೆ ರಮೇಶ್, ನಾಗೇಗೌಡ ಇತರರು ಉಪಸ್ಥಿತರಿದ್ದರು