ಕುಡಿಯುವ ನೀರಿಗೆ ತೊಂದರೆಯಾದರೆ ಪಿಡಿಓಗಳೇ ಹೊಣೆ: ಕೆ.ವೆಂಕಟೇಶ್ ಖಡಕ್ ಎಚ್ಚರಿಕೆ!
ಪಿರಿಯಾಪಟ್ಟಣ: ಈ ಬಾರಿ ಮುಂಗಾರು ಕ್ಷೀಣಿಸಿದ ಹಿನ್ನಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಆಹಕಾರ ಎದುರಾಗಿದ್ದು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಕೆ.ವೆಂಕಟೇಶ್ ಎಚ್ಚರಿಕೆ ನೀಡಿದರು. ತಾಲ್ಲೂಕಿನ ಅಂಬಲಾರೆ, ಹಾರನಹಳ್ಳಿ, ಅಡಗೂರು, ಬಿಲಗುಂದ, ಹಳಿಯೂರು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಈ ವರ್ಷ ಮುಂಗಾರು ಕ್ಷೀಣಿಸಿ ವಾಡಿಕೆಗಿಂತ ಕಡಿಮೆ ಮಳೆಯಾಗಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಹಾಗಾಗಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ…