Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕುಡಿಯುವ ನೀರಿಗೆ ತೊಂದರೆಯಾದರೆ ಪಿಡಿಓಗಳೇ ಹೊಣೆ: ಕೆ.ವೆಂಕಟೇಶ್ ಖಡಕ್ ಎಚ್ಚರಿಕೆ!

ಪಿರಿಯಾಪಟ್ಟಣ: ಈ ಬಾರಿ ಮುಂಗಾರು ಕ್ಷೀಣಿಸಿದ ಹಿನ್ನಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಆಹಕಾರ ಎದುರಾಗಿದ್ದು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಕೆ.ವೆಂಕಟೇಶ್ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಅಂಬಲಾರೆ, ಹಾರನಹಳ್ಳಿ, ಅಡಗೂರು, ಬಿಲಗುಂದ, ಹಳಿಯೂರು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ಈ ವರ್ಷ ಮುಂಗಾರು ಕ್ಷೀಣಿಸಿ ವಾಡಿಕೆಗಿಂತ ಕಡಿಮೆ ಮಳೆಯಾಗಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಹಾಗಾಗಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ವಹಿಸಬೇಕು ಈ ಬಗ್ಗೆ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಿಸಿ ನಡೆಸಬೇಕು ಎಂದು ತಾಪಂ ಇಓ ಸುನೀಲ್ ಕುಮಾರ್ ಅವರಿಗೆ ಸೂಚನೆ ನೀಡಿದರು.  

ಸಾಮಾನ್ಯವಾಗಿ ಈ ಭಾಗದಲ್ಲಿ ಏಪ್ರಿಲ್ -ಮೇ ತಿಂಗಳಲ್ಲೇ ಅವಧಿಗೂ ಮುನ್ನ ಮುಂಗಾರು ಆರಂಭವಾಗುತ್ತದೆ ಆದರೆ ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಮಳೆ ಸಮರ್ಪಕವಾಗಿ ಬೀಳದೆ ಕಾರಣ ಕುಡಿಯುವ ನೀರಿನ ಸಮಸ್ಯೆಗಳು ಉದ್ಭವವಾಗಿವೆ, ಅವುಗಳ ಪರಿಹಾರಕ್ಕೆ ಅಗತ್ಯವಿರುವ ಕ್ರಮಗಳು ಯಾವುವು ಎಂಬುದರ ಬಗ್ಗೆ ಪಿಡಿಓಗಳು ಚಿಂತಿಸಬೇಕು. ಕುಡಿಯುವ ನೀರು ಪೂರೈಸಲು ಮೇಲಾಧಿಕಾರಿಗಳ ಜತೆ ಸಮನ್ವಯ ಸಾಧಿಸಬೇಕು. ಕೆಲವೆಡೆ ಈಗಾಗಲೇ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ ಅದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಎಲ್ಲೆಲ್ಲಿ ಸಮಸ್ಯೆಗಳು ಆವರಿಸಬಹುದು ಎಂಬುದನ್ನು ಅಧಿಕಾರಿಗಳು ಪಟ್ಟಿ ತಯಾರಿಸಬೇಕು. ಜನರಿಗೆ ಅಗತ್ಯ ಬಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು. ಬೋರ್‌ವೆಲ್‌ಗಳನ್ನು ದುರಸ್ತಿ ಮಾಡಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಗ್ರಾಮಗಳಲ್ಲಿ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಸಮರ್ಪಕ ಬಸ್ ವ್ಯವಸ್ಥೆ, ಜಮೀನಿಗೆ ರಸ್ತೆ, ಗ್ರಾಮಗಳಿಗೆ ವಿದ್ಯುತ್ ಸೌಲಭ್ಯ, ರಸ್ತೆ ಮತ್ತು ಚರಂಡಿ ವ್ಯವಸ್ಥೆ, ದೇವಾಲಯಗಳಿಗೆ ಅನುದಾನ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮೈಮುಲ್ ನಿರ್ದೇಶಕ ಬಿ.ಎ.ಪ್ರಕಾಶ್, ತಾಪಂ ಇಓ ಸುನೀಲ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಕುಸುಮ, ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಯೋಗಾನಂದ, ದಿನೇಶ್, ನಿರ್ಮಿತಿ ಕೇಂದ್ರದ ಅಧಿಕಾರಿ ರಕ್ಷಿತ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ,  ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.