ಉದಯಗಿರಿಯಲ್ಲಿ ಡ್ರಗ್ಸ್ ಫ್ರೀ ಮೈಸೂರು’ ಜಾಗೃತಿ ಅಭಿಯಾನ: 350ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಭವ್ಯ ಜಾಗೃತಿ ರ‍್ಯಾಲಿ
ಮೈಸೂರು; ನಗರದ ಉದಯಗಿರಿ ಪ್ರದೇಶದಲ್ಲಿರುವ ಸಾತಗಲ್ಲಿ ಬಸ್ ನಿಲ್ದಾಣದ ಮುಂಭಾಗದ ಡೀಪಾಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಇಂದು ಡ್ರಗ್ಸ್ ಫ್ರೀ ಮೈಸೂರು’ ಜಾಗೃತಿ ಅಭಿಯಾನ ನಡೆಯಿತು.ಯುವಜನರನ್ನು ಮಾದಕ ವ್ಯಸನದಿಂದ ದೂರವಿರಿಸಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದಯಗಿರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಎಸ್. ನಾಗೇಶ್ ಅವರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮ, ಕಾನೂನು ಶಿಕ್ಷೆಗಳು ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಸಮಾಜದಲ್ಲಿ ಬದುಕುವ…