Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಚಾಮುಂಡೇಶ್ವರಿಯ ದರ್ಶನಕ್ಕೆ 300 ರೂ ಟಿಕೆಟ್ ಇಲ್ಲ, 2 ಸಾವಿರ ಕೊಟ್ಟು ವಿಶೇಷ ದರ್ಶನ ಪಡೆಯಿರಿ !


ಮೈಸೂರು: ನಗರದ ಚಾಮುಂಡಿ ಬೆಟ್ಟದಲ್ಲಿ ಜುಲೈ 17 ರಿಂದ ಆಷಾಢ ಮಾಸದ ಶುಕ್ರವಾರಗಳ ವಿಶೇಷ ಪೂಜೆ ಆರಂಭವಾಗಲಿದ್ದು, ಶುಕ್ರವಾರದಿಂದ ಭಾನುವಾರದ ತನಕ ಮೂರು ದಿನಗಳ ಕಾಲ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧ ಮಾಡಲಾಗಿದೆ. ಆದರೆ ಬೆಟ್ಟಕ್ಕೆ ಹೋಗಲು ಭಕ್ತರಿಗೆ ವಿಶೇಷ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲದೇ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ವಿಶೇಷ ದರ್ಶನ ಪಡೆಯುವುದಕ್ಕೆ ಬರೋಬ್ಬರಿ 2000 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ. ಬುಧವಾರ ಈ ಕುರಿತು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸುದ್ದಿಗಾರರಿಗೆ ಮಾಹಿತಿ ನೀಡಿದರು. ” ಆಷಾಢ ಮಾಸದ ಶುಕ್ರವಾರ, ಶನಿವಾರ ಮತ್ತು ಭಾನುವಾರ ಮೂರು ದಿನವೂ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧ ಮಾಡಲಾಗಿದೆ. ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ದಿನವೂ ಖಾಸಗಿ ವಾಹನಗಳ ಪ್ರವೇಶ ಇಲ್ಲ ” ಎಂದು ತಿಳಿಸಿದರು.
ಆಷಾಢ ಶುಕ್ರವಾರಗಳಂದು ವಿಐಪಿ ಹಾಗೂ ವಿವಿಐಪಿಗಳಿಗೆ ಪ್ರತ್ಯೇಕ ಸಮಯದ ವ್ಯವಸ್ಥೆ ಮಾಡಲಾಗಿದೆ. ಮುಂಜಾನೆ 5.30ರಿಂದ 9.30ರವರೆಗೆ ಮಾತ್ರ ವಿಐಪಿ ಹಾಗೂ ವಿವಿಐಪಿಗಳು ದರ್ಶನ ಮಾಡಬಹುದು. ಹೊರತುಪಡಿಸಿ ಶಿಷ್ಟಾಚಾರದ ನಿಯಮಕ್ಕೆ ಒಳಪಟ್ಟವರು ಇದ್ದರೆ ಮಾತ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಶಿಫಾರಸು ಪತ್ರಗಳನ್ನು ತಂದವರಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಇಲ್ಲ ಎಂದು ಹೇಳಿದರು.
300 ರೂ ಟಿಕೆಟ್ ಇಲ್ಲ ;
ಭಕ್ತರ ವಿಶೇಷ ದರ್ಶನಕ್ಕೆ ಇದ್ದ 300 ರೂಪಾಯಿ ಟಿಕೆಟ್ ಅನ್ನು ಈ ಬಾರಿ ರದ್ದು ಮಾಡಲಾಗಿದೆ. 2 ಸಾವಿರ ರೂಪಾಯಿ ಟಿಕೆಟ್ ಖರೀದಿ ಮಾಡಿದರೆ, ಸರತಿ ಇಲ್ಲದೆ ದೇವರ ದರ್ಶನ ಪಡೆಯಬಹುದು. ಈ ಟಿಕೆಟ್ ಜತೆಗೆ ಚಾಮುಂಡೇಶ್ವರಿ ಫೋಟೊ, ಲಾಡು ಪ್ರಸಾದ ಒಳಗೊಂಡ ವಿಶೇಷ ಕಿಟ್‌ನ್ನು ಕೊಡಲಾಗುತ್ತದೆ.