Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮಾಹಿತಿ ಪಡೆದ ಸೆಲ್ವಕುಮಾರ್


ಮೈಸೂರು ; ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಪ್ರಾರಂಭಗೊAಡಿದ್ದು, ಈ ಸಂಬAಧ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ರವರು ಜಿಲ್ಲೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯದ ಪ್ರಸ್ತುತ ಹಂತದ ಗಣಿಕೆ ನಮೂನೆ ಗಳನ್ನು ಮತದಾರರಿಗೆ ಹಂಚಿಕೆ ಮಾಡುವ ಕಾರ್ಯದ ಕುರಿತು ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ಹಾಗೂ ಮತದಾರರ ನೋಂದಣಾಧಿಕಾರಿಗಳಿ0ದ ಮಾಹಿತಿಯನ್ನು ಪಡೆದುಕೊಂಡರು.
ಯಾವುದೇ ಅರ್ಹ ಮತದಾರರ ಮತದಾರರ ಪಟ್ಟಿಯಿಂದ ಕೈಬಿಟ್ಟುಹೋಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಚಾಮರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 06 ಗೋಕುಲಂಗೆ ಖುದ್ದಾಗಿ ಭೇಟಿ ನೀಡಿ ಗಣಿಕೆ ನಮೂನೆಗಳನ್ನು ವಿತರಣೆ ಮಾಡುತ್ತಿರುವ ಕಾರ್ಯದ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷಿಕಾಂತ್ ರೆಡ್ಡಿ ಹಾಗೂ ಮೈಸೂರು ಮಹಾನಗರಪಾಲಿಕೆಯ ಉಪ ಆಯುಕ್ತರು, ವಲಯ ಆಯುಕ್ತರು, ಕಂದಾಯ ಸಿಬ್ಬಂದಿ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.