
*ಮನೆ ಬಾಗಿಲಿಗೆ ಬರಲಿದ್ದಾರೆ ಮೀಟರ್ ರೀಡರ್, ಸಿಬ್ಬಂದಿ; ಅಗತ್ಯ ದಾಖಲೆ ಸಿದ್ಧವಿಟ್ಟುಕೊಳ್ಳಿ
ಮೈಸೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹಣೆ ಕಾರ್ಯ ಬುಧವಾರದಿಂದ ಆರಂಭಗೊAಡಿದ್ದು, ಗ್ರಾಹಕರು ಸಹಕರಿಸುವಂತೆ ಸೆಸ್ಕ್) ಕೋರಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಸೆಸ್ಕ್, 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದ್ದು, ಸೆಸ್ಕ್ ನ ಮೀಟರ್ ರೀಡರ್ಗಳು ಹಾಗೂ ಸಿಬ್ಬಂದಿ, ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಹಾಗೂ ಮಾಹಿತಿ ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ.
ಸೆಸ್ಕ್ ಸಿಬ್ಬಂದಿ ಮನೆ-ಮನೆ ಭೇಟಿ ಸಂದರ್ಭದಲ್ಲಿ ಆಧಾರ್ ಕಾರ್ಡ್, ಫಲಾನುಭವಿಯ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಬಾಡಿಗೆ ಒಪ್ಪಂದದ ಪತ್ರಗಳು (ಅನ್ವಯಿಸುವಲ್ಲಿ ಮಾತ್ರ), ರೇಷನ್ ಕಾರ್ಡ್ ಜಾತಿ ಪ್ರಮಾಣ ಪತ್ರ (ಅನ್ವಯಿಸುವಲ್ಲಿ ಮಾತ್ರ) ದಾಖಲೆಗಳನ್ನು ನೀಡಬೇಕು.
ಈ ಪ್ರಕ್ರಿಯೆಗೆ ಮೀಟರ್ ರೀಡರ್ಗಳ ಮೂಲಕ ಸ್ಥಳದಲ್ಲೇ ಪರಿಶೀಲನೆ ಮಾಡುವುದು ಏಕೈಕ ಮಾರ್ಗವಾಗಿದ್ದು, ಗ್ರಾಹಕರು ಮತ್ತು ಫಲಾನುಭವಿಗಳು ಸೆಸ್ಕ್ನ ಅಧಿಕೃತ ಮೀಟರ್ ರೀಡರ್ಗಳ ಗುರುತಿನ ಚೀಟಿಯನ್ನು ಪರಿಶೀಲಿಸಿ, ಸಂಪೂರ್ಣ ಸಹಕಾರ ನೀಡಿ, ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತಿಳಿಸಿದೆ.
ಗ್ರಾಹಕರ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆ ಪರಿಶೀಲನೆ;
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹಣ ಕಾರ್ಯ ಆರಂಭಗೊAಡ ಹಿನ್ನೆಲೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಎಂ.ಎಸ್. ಅರ್ಚನಾ ಅವರು, ಖುದ್ದಾಗಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕ ಎಲ್. ಲೋಕೇಶ್, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಪ್ರಧಾನ ವ್ಯವಸ್ಥಾಪಕ ಆರ್. ರಾಮಸ್ವಾಮಿ, ಅಧೀಕ್ಷಕ ಇಂಜಿನಿಯರ್ ಸುನಿಲ್ ಕುಮಾರ್, ಅಧಿಕಾರಿಗಳಾದ ಸುಭಾಷ್, ರಮೇಶ್, ಇಂದ್ರಾಣಿ ಇತರರಿದ್ದರು.