Skip to main content

3Kaala News

ಸುಭಾಷಿತ 

ಪ್ರಯತ್ನ ಎಂಬುದು ಬೀಜದ ಹಾಗೆ ಬಿತ್ತುತ್ತಲೇ ಇರಿ ಚಿಗುರಿದರೆ ಮರವಾಗಲಿ ಇಲ್ಲವೆಂದರೆ ಮಣ್ಣಿಗೆ ಗೊಬ್ಬರವಾಗಲಿ.
ಇವತ್ತು ನಿನ್ನನ್ನು ಏನು ನೋಯಿಸುತ್ತಿದೆಯೋ ನಾಳೆ ಅದೇ ನಿನ್ನನ್ನು ಬಲಗೊಳಿಸುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ


ಮೈಸೂರು; ಇತ್ತೀಚೆಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕುತ್ತಿರುವುದು ಹೆಚ್ಚಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ನಗರದ ಎರಡು ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಹೆದರಿಸಿದ್ದ ಕಿಡಿಗೇಡಿಗಳು ಗುರುವಾರ ನಗರಿ ಮೈಸೂರಿನ ಚಾಮರಾಜಪುರಂನಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೂ ಸಹ ಬಾಂಬ್ ಬೆದರಿಕೆ ಹಾಕಿದ್ದಾರೆ. ಠಿಚಿvಚಿಟಚಿ.mಚಿಟಟi@ಚಿಣomiಛಿmಚಿiಟ ಎಂಬ ಇ-ಮೇಲ್ ಐಡಿಯಿಂದ ಬೆಳಗಿನ ಜಾವ 01:59 ಗಂಟೆಗೆ ನ್ಯಾಯಾಲಯದ ಅಧಿಕೃತ ಇ-ಮೇಲ್ ಠಿಜರಿmಥಿsuಡಿu@ಞಚಿಡಿಟಿಚಿಣಚಿಞಚಿ.gov.iಟಿ ಗೆ ಈ ಬೆದರಿಕೆ ಸಂದೇಶ ರವಾನೆಯಾಗಿದೆ. ಕೋರ್ಟ್ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್‌ನಲ್ಲಿ ಬರೆಯಲಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಬಾಂಬ್ ಪತ್ತೆ ಹಾಗೂ ನಿಷ್ಕಿçÃಯ ದಳ, ಶ್ವಾನದಳದವರು ನ್ಯಾಯಾಲಯದ ಇಡೀ ಕಟ್ಟಡ, ಆವರಣವನ್ನು ಕೂಲಂಕುಷವಾಗಿ ತಪಾಸಣೆ ನಡೆಸಿದರು. ಅಲ್ಲದೆ ನ್ಯಾಯಾಲಯಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು, ವಾಹನಗಳನ್ನು ತಪಾಸಣೆಗೆ ಒಳಪಡಿಸಿದರು. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎನ್ನುವುದನ್ನು ಖಚಿತಪಡಿಸಿದರು. ಅಲ್ಲಿಯ ತನಕ ವಕೀಲರುಗಳು, ಕಕ್ಷಿದಾರರು ಕೆಲಕಾಲ ಆತಂಕದಿAದಲೇ ಕಾಲ ಕಳೆಯುವಂತಾಯಿತು.