Skip to main content

3Kaala News

ಸುಭಾಷಿತ 

ಬದುಕೆಂಬುದು ಚೈನಿನ ಸರಪಳಿ ಇದ್ದ ಹಾಗೆ. ಪ್ರತಿಕೊಂಡಿಯೂ ಗಟ್ಟಿಯಾಗಿರಬೇಕು. ಕೊಂಡಿಗಳ ನಡುವೆ ಬಿರುಕು ಬಿಟ್ಟಾಗ ಗಟ್ಟಿಯಾದ ಬೆಸುಗೆಗಳನ್ನು ನಿರಂತರವಾಗಿ ಹಾಕುತ್ತಿರಬೇಕು. ನಮ್ಮ ದೌರ್ಬಲ್ಯಗಳನ್ನು ಮೆಟ್ಟಿನಿಂತು; ಆದಮ್ಯ ಆತ್ಮವಿಶ್ವಾಸದಿಂದ ನಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಸ್‌ಐಆರ್ ಕಾರ್ಯಾಚರಣೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸದ ಬಿ.ಎಲ್.ಒಗಳು; ಮಾಜಿ ಮೇಯರ್ ಸಂದೇಶ್‌ಸ್ವಾಮಿ


ಮೈಸೂರು; ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ಎಸ್‌ಐಆರ್ ಕಾರ್ಯಾಚರಣೆ ನಡೆಸುತ್ತಿರುವ ಕೆಲವು ಬಿ.ಎಲ್.ಒ. ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ ಎಂದು ಮಹಾನಗರಪಾಲಿಕೆಯ ಮಾಜಿ ಮೇಯರ್ ಸಂದೇಶ್‌ಸ್ವಾಮಿ ಆರೋಪಿಸಿದರು.
ಶುಕ್ರವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಚುನಾವಣಾ ಆಯೋಗದ ಸೂಚನೆಯಂತೆ ಮನೆ-ಮನೆಗೆ ತೆರಳಿ ಮತದಾರರನ್ನು ಸಂಪರ್ಕಿಸಿ ಪರಿಶೀಲನೆ ನಡೆಸಬೇಕಾದ ಬದಲಾಗಿ, ಕೆಲವು ಬಿ.ಎಲ್.ಒ. ಅಧಿಕಾರಿಗಳು ಶಾಲೆಗಳು ಹಾಗೂ ಇತರೆ ಗೌಪ್ಯ ಸ್ಥಳಗಳಲ್ಲಿ ಗುಂಪು-ಗುAಪಾಗಿ ಕುಳಿತುಕೊಂಡು, ಬಿ.ಎಲ್.ಎ.-2ರ ಉಪಸ್ಥಿತಿಯಿಲ್ಲದೆ ಮಧ್ಯವರ್ತಿಗಳ ಮೂಲಕ ದಾಖಲೆಗಳನ್ನು ಸ್ವೀಕರಿಸಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿ ಮತ್ತು ಸಾಕ್ಷ÷್ಯಗಳು ನಮ್ಮ ಬಳಿ ಲಭ್ಯವಿವೆ ಎಂದು ಅವುಗಳನ್ನು ಇದೇ ವೇಳೆ ಪ್ರದರ್ಶಿಸಿ ಬಿಡುಗಡೆ ಮಾಡಿದರು.
ಈ ಕುರಿತು ಛಾಯಾಚಿತ್ರಗಳು ಹಾಗೂ ವಿಡಿಯೋ ಸಾಕ್ಷ÷್ಯಗಳೂ ನಮ್ಮ ಬಳಿ ಇದ್ದು, ಅಗತ್ಯವಿದ್ದಲ್ಲಿ ತನಿಖೆಗೆ ಸಲ್ಲಿಸಲು ಸಿದ್ಧರಾಗಿದ್ದೇವೆ.
ಅದ್ದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ, ಚುನಾವಣಾ ಆಯೋಗದ ನಿಯಮಾವಳಿಗಳಂತೆ ಮನೆ-ಮನೆಗೆ ತೆರಳಿ ಪಾರದರ್ಶಕವಾಗಿ ಕಾರ್ಯನಿರ್ವಹಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇಂತಹ ಕ್ರಮಗಳು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಗೆ ಧಕ್ಕೆ ತರುವಂತಿದ್ದು, ಭಾರತೀಯ ಜನತಾ ಪಾರ್ಟಿ, ನರಸಿಂಹರಾಜ ವಿಧಾನಸಭಾ ಕ್ಷೇತ್ರ ಈ ರೀತಿಯ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ
ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಬಿಜೆಪಿ ಅಧ್ಯಕ್ಷ ಸ್ಮಾರ್ಟ್ ಮಂಜುನಾಥ್, ಪ್ರಧಾನ ಕಾರ್ಯದರ್ಶಿಗಳು ಪದ್ಮನಾಭ ಮಂಜು ಸಿ, ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷ ಡಾ. ಅನಿಲ್ ಥಾಮಸ್, ಎಚ್ ಜಿ ಗಿರಿಧರ್ , ವೇಲು, ಟಿ.ರಮೇಶ್, ಕಾರ್ತಿಕ್, ಮತ್ತಿತರರು ಉಪಸ್ಥಿತರಿದ್ದರು.