Skip to main content

3Kaala News

ಸುಭಾಷಿತ 

ಬದುಕೆಂಬುದು ಚೈನಿನ ಸರಪಳಿ ಇದ್ದ ಹಾಗೆ. ಪ್ರತಿಕೊಂಡಿಯೂ ಗಟ್ಟಿಯಾಗಿರಬೇಕು. ಕೊಂಡಿಗಳ ನಡುವೆ ಬಿರುಕು ಬಿಟ್ಟಾಗ ಗಟ್ಟಿಯಾದ ಬೆಸುಗೆಗಳನ್ನು ನಿರಂತರವಾಗಿ ಹಾಕುತ್ತಿರಬೇಕು. ನಮ್ಮ ದೌರ್ಬಲ್ಯಗಳನ್ನು ಮೆಟ್ಟಿನಿಂತು; ಆದಮ್ಯ ಆತ್ಮವಿಶ್ವಾಸದಿಂದ ನಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರೋಟರಿ ಕ್ಲಬ್ ಗೆ ನೂತನ ಪದಾಧಿಕಾರಿಗಳ ಆಯ್ಕೆ  

ಪಿರಿಯಾಪಟ್ಟಣ : ರೋಟರಿ ಕ್ಲಬ್ ಪಿರಿಯಾಪಟ್ಟಣ ಮಿಡ್ ಟೌನ್ 2026-27 ನೇ ಸಾಲಿನ ನೂತನ ಅಧ್ಯಕ್ಷ ರಾಗಿ ಬಲರಾಮ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್. ಬಿ.ಎಸ್, ಜೋನಲ್ ಲೆಫ್ಟಿನೆಂಟ್ ಆಗಿ ರಾಜೇಗೌಡ. ಎಂ.ಎಂ ಆಯ್ಕೆಯಾಗಿದ್ದಾರೆ.ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ಜುಲೈ 5ರ ಭಾನುವಾರ ಸಂಜೆ 6 ಗಂಟೆಗೆ ಪಟ್ಟಣದ ಕನಕ ಸಮುದಾಯದ ಭವನದಲ್ಲಿ ಜರುಗಲಿದ್ದು ಈ ಸಮಾರಂಭಕ್ಕೆ ಮಾಜಿ ಅಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರುಗಳು ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು  ನೂತನ ಜೋನಲ್ ಲಿಫ್ಟಿನೆಂಟ್ ಆಗಿ ಆಯ್ಕೆಯಾದ ರಾಜೇಗೌಡ ಎಂ ಎಂ  ತಿಳಿಸಿದರು.

ರೋಟರಿ ಕ್ಲಬ್ ನ ಆಶಯಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುವುದರ ಮೂಲಕ ನಮ್ಮ ಕ್ಲಬ್ ಹಿಂದಿಗಿಂತಲೂ ಹೆಚ್ಚು ಹೆಚ್ಚು ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಸಮಾಜಕ್ಕೆ ನಮ್ಮದೇ ಆದ ಕೊಡುಗೆ ನೀಡಲು ನಮ್ಮ ತಂಡ ಉಸ್ತುಕವಾಗಿದೆ ಈ ನೂತನ ತಂಡವು ತಮ್ಮ ಅವಧಿಯಲ್ಲಿ ಸಮಾಜದ ವಿವಿಧ ವರ್ಗಗಳಿಗೆ ಅಗತ್ಯವಿರುವ ಸೇವೆಯನ್ನು ತ್ವರಿತ ಗತಿಯಲ್ಲಿ ಒದಗಿಸುವ ಮೂಲಕ ಅವರ ಆಸೆಗಳಿಗೆ ನೀರುಣಿಸುವ ಕೆಲಸ ಮಾಡಲು ಕಂಕಣಬದ್ಧವಾಗಿದ್ದೇವೆ ಎಂದು ಹೇಳಿದರು