Skip to main content

3Kaala News

ಸುಭಾಷಿತ 

ಬದುಕೆಂಬುದು ಚೈನಿನ ಸರಪಳಿ ಇದ್ದ ಹಾಗೆ. ಪ್ರತಿಕೊಂಡಿಯೂ ಗಟ್ಟಿಯಾಗಿರಬೇಕು. ಕೊಂಡಿಗಳ ನಡುವೆ ಬಿರುಕು ಬಿಟ್ಟಾಗ ಗಟ್ಟಿಯಾದ ಬೆಸುಗೆಗಳನ್ನು ನಿರಂತರವಾಗಿ ಹಾಕುತ್ತಿರಬೇಕು. ನಮ್ಮ ದೌರ್ಬಲ್ಯಗಳನ್ನು ಮೆಟ್ಟಿನಿಂತು; ಆದಮ್ಯ ಆತ್ಮವಿಶ್ವಾಸದಿಂದ ನಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜು. 7 ರ0ದು ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಎಚ್.ಡಿ.ಕೋಟೆ : ಪ್ರತಿಭಾನ್ವಿತ ಮಕ್ಕಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ತಾಲ್ಲೂಕು ಆದಿ ಕರ್ನಾಟಕ ಮಹಾಸಭಾ ಮತ್ತು ಅಂಬೇಡ್ಕರ್ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜು. 7 ರ ಮಂಗಳವಾರ ಸರಗೂರು ಪಟ್ಟಣದಲ್ಲಿ ನಡೆಯುವ 135ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿ ಸನ್ಮಾನಿಸಲಾಗುವುದು ಎಂದು ಸರಗೂರು ತಾಲ್ಲೂಕು ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಇಟ್ನಾ ರಾಜಣ್ಣ ಹೇಳಿದರು.

ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನೆರವೇರಿಸಿ ಮಾತನಾಡಿದರು.
ಅಂತರಸಂತೆ ಸಾರನಾಥ ಬುದ್ಧ ವಿಹಾರದ ಪೂಜ್ಯ ಮಾತೃಶ್ರೀ ಗೌತಮಿ ಭಂತೇಜಿ ಹಾಗೂ ಮೈಸೂರು ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ 135ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಚಾಮರಾಜನಗರ ಮೀಸಲು ಕ್ಷೇತ್ರದ ಸಂಸದ ಸುನೀಲ್ ಬೋಸ್ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳ್ಳಿ ರಥದಲ್ಲಿ ಬಾಬಾ ಸಾಹೇಬರ ಭಾವಚಿತ್ರ ಇರಿಸಿ ಸರಗೂರು ಪಟ್ಟಣ ಸೆಸ್ಕ್ ಕಚೇರಿ ಮುಂಭಾಗದಿಂದ ಕಾರ್ಯಕ್ರಮ ನಡೆಯುವ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು.
ಮುಖ್ಯ ಅತಿಥಿಗಳಾಗಿ ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ಸಮಾಜ ಸೇವಕ ಜೆಡಿಎಸ್ ಮುಖಂಡ ಕೆ.ಎಂ.ಕೃಷ್ಣನಾಯಕ, ಜೆಡಿಎಸ್ ಮುಖಂಡ ಜಯಪ್ರಕಾಶ್,
ಎಚ್.ಡಿ.ಕೋಟೆ ತಾಲ್ಲೂಕು ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಹೈರಿಗೆ ಶಿವರಾಜು, ಸರಗೂರು ತಾಲ್ಲೂಕು ಡಾ.ಬಿ.ಆರ್.ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ಚೆನ್ನಿಪುರ ನಾಗರಾಜು, ಮಾಜಿ ಜಿ.ಪಂ.ಸದಸ್ಯರಾದ ಹೆಚ್.ಸಿ. ಮಂಜುನಾಥ್, ಭಾಗ್ಯಲಕ್ಷ್ಮಿ ನಿಂಗರಾಜು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೊಷ್ಟಿಯಲ್ಲಿ ಆದಿ ಕರ್ನಾಟಕ ಮಹಾಸಭಾ ಮಾಜಿ ಪ್ರಧಾನ ಕಾರ್ಯದರ್ಶಿ ಮಲ್ಲೇಶ್, ಮಾನವ ಹಕ್ಕು ಹೋರಾಟಗಾರ ಶ್ರೀನಿವಾಸ್ ಯಶವಂತ್, ಸೂರ್ಯಕುಮಾರ್ ಇದ್ದರು.

ಸಾಧಕರಿಗೂ ಸನ್ಮಾನ : ಶಿವಣ್ಣ,
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಮಾಜದ ಸಾಧಕರನ್ನು ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಸನ್ಮಾನಿಸಿ ಗೌರವಿಸಲಿದ್ದಾರೆ.

ಸರಗೂರು ಶಿವಣ್ಣ, ಮಾಜಿ ಅಧ್ಯಕ್ಷ, ತಾಲ್ಲೂಕು ಆದಿ ಕರ್ನಾಟಕ ಮಹಾಸಭಾ