Skip to main content

3Kaala News

ಸುಭಾಷಿತ 

ಬದುಕೆಂಬುದು ಚೈನಿನ ಸರಪಳಿ ಇದ್ದ ಹಾಗೆ. ಪ್ರತಿಕೊಂಡಿಯೂ ಗಟ್ಟಿಯಾಗಿರಬೇಕು. ಕೊಂಡಿಗಳ ನಡುವೆ ಬಿರುಕು ಬಿಟ್ಟಾಗ ಗಟ್ಟಿಯಾದ ಬೆಸುಗೆಗಳನ್ನು ನಿರಂತರವಾಗಿ ಹಾಕುತ್ತಿರಬೇಕು. ನಮ್ಮ ದೌರ್ಬಲ್ಯಗಳನ್ನು ಮೆಟ್ಟಿನಿಂತು; ಆದಮ್ಯ ಆತ್ಮವಿಶ್ವಾಸದಿಂದ ನಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ; ಸಂಸದ ಯದುವೀರ್


ಮೈಸೂರು: ಮೈಸೂರಿನ ನರಸಿಂಹರಾಜ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.
ಶನಿವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ
ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಭಾಗದಲ್ಲಿ ಸುಸೂತ್ರವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಯಲು ಪೊಲೀಸ್ ಭದ್ರತೆಯ ಅಗತ್ಯವಿದೆ ಎಂದು ಹೇಳಿದರು. ಅಲ್ಪಸಂಖ್ಯಾತರೇ ಹೆಚ್ಚಿರುವ ಎನ್.ಆರ್. ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮಾನದಂಡದAತೆ ನಡೆಯುತ್ತಿಲ್ಲ. ಮಸೀದಿ, ಸಮುದಾಯ ಭವನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನರನ್ನು ಸೇರಿಸಿ, ಫಾರಂಗಳನ್ನು ನೀಡಿ ಭರ್ತಿ ಮಾಡಿಸಲಾಗುತ್ತಿದೆ. ಬಿಎಲ್ ಒಗಳು ಮನೆ ಮನೆಗೆ ತೆರಳಿ ಮತದಾರರ ವೈಯಕ್ತಿಕ ಮಾಹಿತಿ ಪಡೆದು ಅರ್ಜಿ ಭರ್ತಿ ಮಾಡಿಸಬೇಕು. ಆದರೆ, ಈ ಕೆಲಸ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷದ ಏಜೆಂಟರನ್ನು ಸೇರಿಸುತ್ತಿಲ್ಲ: ಬಿಜೆಪಿಯಿಂದ ಬೂತ್ ಮಟ್ಟದಲ್ಲಿ ನೇಮಕ ಮಾಡಲಾಗಿರುವ ಏಜೆಂಟರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಂತೆ ಅಲ್ಲಿನ ಜನರು ನೋಡಿಕೊಳ್ಳುತ್ತಿದ್ದಾರೆ. ಒಂದು ವೇಳೆ ಆ ಸ್ಥಳಕ್ಕೆ ನಮ್ಮವರು ಹೋದರೆ, ಬೆದರಿಕೆ ಹಾಕಲಾಗುತ್ತಿದೆ. ಆದರೆ, ಕಾಂಗ್ರೆಸ್ ಏಜೆಂಟರು ಪ್ರತಿ ಬಿಎಲ್‌ಒ ಗಳ ಬಳಿ ಮೂರು ಮಂದಿ ಇದ್ದಾರೆ. ಈ ಕ್ಷೇತ್ರದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂದು ದೂರಿದರು.
ಪೊಲೀಸ್ ಭದ್ರತೆಯೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಸಬೇಕು. ಸಿಆರ್ಪಿಎಪ್ ಪೊಲೀಸ್ ಭದ್ರತೆ ಒಡಗಿಸಿದರೆ ಮಾತ್ರ ನೈಜ್ಯ ಮತದಾರರು ಯಾರೆಂದು ತಿಳಿಯಲು ಸಾಧ್ಯ ಎಂದರು.
ಕೆಲ ದಿನಗಳ ಹಿಂದೆ ಪಶ್ಚಿಮ ಬಂಗಾಳದಿAದ ನೂರಾರು ಮಂದಿ ವಲಸಿಗರು ರೈಲು ಮೂಲಕ ಮೈಸೂರಿಗೆ ಆಗಮಿಸಿದರು. ಅವರು ಏತಕ್ಕಾಗಿ ಬಂದರು ಎಂದು ಪ್ರಶ್ನಿಸಿದವರ ಮೇಲೆಯೇ ಪ್ರಕರಣ ದಾಖಲಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಅರ್ಹ ಮತದಾರರನ್ನು ಮಾತ್ರ ಪಟ್ಟಿಗೆ ಸೇರಿಸಲು ಎಸ್‌ಐಆರ್ ಪ್ರಕ್ರಿಯರ್ನಡೆಸಲಾಗುತ್ತಿದೆ. ಇದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕಷ್ಟ. ಹಾಗಾಗಿಯೇ ರಾಜ್ಯದ ವಿವಿಧ ಭಾಗಗಳಲ್ಲಿ ವಲಸಿಗರಿಗೆ, ಮತದಾರರಲ್ಲದವರಿಗೆ ಮತದಾನದ ಅವಕಾಶ ಕಲ್ಪಿಸಿಕೊಡುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದರು.
ಜಗತ್ತಿನ ವಿವಿಧ ದೇಶಗಳಲ್ಲಿ ವಲಸಿಗರಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀಗಿದ್ದರೂ ಕಾಂಗ್ರೆಸ್ ಸರ್ಕಾರ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರು ಅಲ್ಲದವರಿಗೂ ಮತದಾನದ ಹಕ್ಕು ಕೊಡಿಸುತ್ತಿದೆ. ಮತದಾರರ ಪಟ್ಟಿಗೆ ಸೇರಲು 12 ದಾಖಲೆ ನೀಡಬೇಕು. ಅದಕ್ಕಾಗಿ ಕೆಲವರು ಅಡ್ಡ ಮಾರ್ಗ ಹಿಡಿದಿದ್ದು, ನಕಲಿ ಟಿಸಿಯನ್ನು ಪಡೆದು ಬಿಎಲ್ ಒಗಳಿಗೆ ಕೊಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು. ಹಾಗೆಯೇ ಹೋರಾಟವನ್ನು ಮಾಡಲಾಗುವುದು ಎಂದು ಹೇಳಿದರು.
ಒಂದು ಲಕ್ಷ ಮತದಾರರು ಹೆಚ್ಚಳ: ಜಿಲ್ಲೆಯ ಎಲ್ಲಾ 11 ಕ್ಷೇತ್ರಗಳ ಪೈಕಿ ನರಸಿಂಹರಾಜ ಕ್ಷೇತ್ರವೊಂದರಲ್ಲೇ ಒಂದು ಲಕ್ಷ ಮತದಾರರು ಹೆಚ್ಚಾಗಿದ್ದಾರೆ. ಇದು ಹೇಗೆ ಸಾಧ್ಯ? ಇಷ್ಟು ಮತದಾರರು ಹೆಚ್ಚಾಗಲು ಕಾರಣ ಏನು? ಎಂಬುದನ್ನು ತಿಳಿಯಲು ಎಸ್‌ಐಆರ್ ಅಗತ್ಯವಿದೆ. ಆದರೆ, ಅಧಿಕಾರಿಗಳು ರಾಜ್ಯ ಸರ್ಕಾರದೊಂದಿಗೆ ಶಾಮೀಲಾಗಿ ನಿಯಮ ಬಾಹಿರವಾಗಿ ಪ್ರಕ್ರಿಯೆ ನಡೆಸುತ್ತಿದ್ದಾರೆ. ಇಲ್ಲಿ ದಾಖಲೆಗಳ ನಕಲಿಕರಣವೂ ನಡೆಯುತ್ತಿದೆ. ಒಟ್ಟಾರೆ ಎನ್‌ಆರ್ ಕ್ಷೇತ್ರದ ಮತದಾರರ ಪರಿಷ್ಕರಣೆ ಕ್ರಮ ಬದ್ದವಾಗಿಲ್ಲ. ಅಕ್ರಮ ಬಾಂಗ್ಲಾ ವಲಸಿಗರು ಕೂಡ ಮತದಾರರಾಗುವ ಅಪಾಯ ಸೃಷ್ಟಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದಸರಾದಲ್ಲಿ ಕಂಬಳ ಬೇಡ ;
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದೆ. ಮುಖ್ಯಮಂತ್ರಿಗಳೇ ಬೆಳೆ ಬೆಳೆಯಬೇಡಿ ಎನ್ನುತ್ತಿದ್ದಾರೆ. ಹೀಗಿದ್ದರೂ 2 ದಿನಗಳ ಕಂಬಳ ಉತ್ಸವಕ್ಕೆ 8 ಕೋಟಿ ವೆಚ್ಚ ಮಾಡಲು ಹೊರಟಿರುವುದು ಎಷ್ಟು ಸರಿ ? ಮಳೆಯಿಲ್ಲದೇ ಜನ ಸಂಕಷ್ಟದಲ್ಲಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಸರ್ಕಾರ ದಸರಾ ಮಾಡಬೇಕು. ಮೈಸೂರು ದಸರಾದಲ್ಲಿ ಕಂಬಳ ಮಾಡುವುದು ಬೇಡ. ಕಂಬಳಕ್ಕೆ ತನ್ನದೇ ಆದ ಗೌರವ ಮತ್ತು ಹಿನ್ನೆಲೆ ಇದೆ. ಜತೆಗೆ ದಸರಾಕ್ಕೂ ಅದರದ್ದೇ ಆದ ಧಾರ್ಮಿಕ ಹಿನ್ನೆಲೆ ಇದೆ. ಇಲ್ಲಿಗೆ ಕಂಬಳವನ್ನು ಹೇರುವುದು ಬೇಡ. ಅಲ್ಲಿನ ಸಂಸ್ಕöÈತಿಗಳು ಅಲ್ಲಲ್ಲಿಯೇ ಆಚರಣೆ ಆಗಬೇಕು. ದಸರಾವನ್ನು ದಕ್ಷಿಣ ಕನ್ನಡದವರು ನಾವು ಮಾಡುತ್ತೇವೆ ಎಂದರೆ ಅದಕ್ಕೆ ಅರ್ಥ ಇದೆಯಾ. ಅಲ್ಲಿಯ ಆಚರಣೆ ಅಲ್ಲಿಯೇ ನಡೆಯಬೇಕು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಂದೇಶ್ ಸ್ವಾಮಿ, ನಗರ ಪ್ರಧಾನಕಾರ್ಯದರ್ಶಿ ಸೋಮಸುಂದರ್, ಕೆ.ಸಿ. ರುದ್ರಮೂರ್ತಿ, ನಗರ ಉಪಾಧ್ಯಕ್ಷ ರಾಜೇಶ್, ನಗರ ವಕ್ತಾರ ಮೋಹನ್, ನಗರ ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ರವಿ, ಸಂತೋಷ್ ಇದ್ದರು.

  • ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದರು