Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಸ್‌ಐಆರ್ ವಿಚಾರವಾಗಿ ಬಿಜೆಪಿ ಅನಗತ್ಯ ಹಾಗೂ ಆಧಾರ ರಹಿತ ಆರೋಪ ಮಾಡುವ ಮೂಲಕ ನಗೆಪಾಟಲಿಗೀಡಾಗಿದೆ; ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್


ಮೈಸೂರು: ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲ ದಿನಗಳಿಂದ ಅನಗತ್ಯ ಹಾಗೂ ಆಧಾರ ರಹಿತ ಆರೋಪ ಮಾಡುವ ಮೂಲಕ ನಗೆಪಾಟಲಿಗೀಡಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಲೇವಡಿ ಮಾಡಿದರು.
ಭಾನುವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದೇಶದ 13 ರಾಜ್ಯಗಳಲ್ಲಿ ಎಸ್‌ಐಆರ್ ಮಾಡಿ 6.5 ಕೋಟಿ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು, ಆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ. ಅದರಂತೆ ಕರ್ನಾಟಕ ರಾಜ್ಯದಲ್ಲೂ 1 ಕೋಟಿ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲು ಯತ್ನಿಸಿದೆ. ಆದರೆ, ಅದಕ್ಕೆ ಕಾಂಗ್ರೆಸ್ ಅವಕಾಶ ಮಾಡಿಕೊಡದೇ ಪ್ರತಿ ಮತದಾರನ ಬಳಿಗೆ ಹೋಗಿ, ಅರ್ಜಿ ಭರ್ತಿ ಮಾಡಿಸುವ ಕೆಲಸವನ್ನು ಮಾಡುತ್ತಿದೆ. ಈ ಮೂಲಕ ಅರ್ಹ ಮತದಾರ ಹೆಸರು ಪಟ್ಟಿಯಿಂದ ಹೊರಗುಳಿಯದಂತೆ ಕಾಂಗ್ರೆಸ್ ನೋಡಿಕೊಳ್ಳುತ್ತಿದೆ. ಇದನ್ನು ಸಹಿಸದ ಬಿಜೆಪಿ ಕಳೆದ ಎರಡು ದಿನಗಳಿಂದ ಆಧಾರ ರಹಿತ ಹಾಗೂ ಅನಗತ್ಯ ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದರು.
ಕರ್ನಾಟದಲ್ಲಿ 5 ಕೋಟಿ 60ಲಕ್ಷ ಮತದಾರರಿದ್ದು, ಎಸ್‌ಐಆರ್ ಮ್ಯಾಪಿಂಗ್ ವೇಳೆ 50ಲಕ್ಷ ಮತದಾರರನ್ನು ಈಗಾಗಲೇ ಹೊರಗಿಟ್ಟಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ 60 ಲಕ್ಷ ಮತದಾರರನ್ನು ಕೈಬಿಡುವ ಹುನ್ನಾರವನ್ನು ಕೇಂದ್ರ ಬಿಜೆಪಿ ಸರ್ಕಾರ ನಡೆಸಿದೆ. ಒಟ್ಟಾರೆ ರಾಜ್ಯದಲ್ಲಿ 1ಕೋಟಿಗೂ ಅಧಿಕ ಮತದಾರರನ್ನ ಮತದಾರರ ಪಟ್ಟಿಯಿಂದ ದೂರ ಇಡುವ ಗುರಿ ಹೊಂದಿದೆ ಎಂದು ಆರೋಪಿಸಿದರು.
ಎನ್ಯುಮರೇಷನ್ ಅರ್ಜಿ ಲೋಪದಿಂದ ಕೂಡಿದೆ: ದೇಶದಲ್ಲಿ ಆಡಳಿತ ನಡೆಸಿದ್ದ ಕಾಂಗ್ರೆಸ್ ಸರ್ಕಾರ ಮೂರು ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿತ್ತು. ಈ ವೇಳೆ ಮತದಾರ ಪಟ್ಟಿಯಿಂದ ದೂರ ಉಳಿದಿದ್ದ ಅರ್ಹರನ್ನು ಪಟ್ಟಿಗೆ ಸೇರಿಸುವ ಕೆಲಸವನ್ನು ಕಾಂಗ್ರೆಸ್ ಮಾಡಿತ್ತು. ಆದರೆ, ಬಿಜೆಪಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅರ್ಹರನ್ನೂ ಮತದಾರ ಪಟ್ಟಿಯಿಂದ ದೂರವಿಡುವ ಕೆಲಸ ಮಾಡುತ್ತಿದೆ. ಜತೆಗೆ ಈ ಪ್ರಕ್ರಿಯೆಗೆ ನೀಡುತ್ತಿರುವ ಎನ್ಯುಮರೇಷನ್ ಅರ್ಜಿಯೂ ಹಲವು ಲೋಪಗಳಿಂದ ಕೂಡಿದೆ. ಪದವಿ ಶಿಕ್ಷಣ ಪಡೆದವರೂ ಈ ಅರ್ಜಿಯನ್ನು ಸುಲಭವಾಗಿ ಭರ್ತಿ ಮಾಡಲಾಗುತ್ತಿಲ್ಲ. ಭರ್ತಿ ಮಾಡುವಾಗ ಸ್ವಲ್ಪ ತಪ್ಪಾದರೂ ಅವರು ಮತದಾರರ ಪಟ್ಟಿಯಿಂದ ಹೊರಗುಳಿಯಲಿದ್ದಾರೆ. ಮತ್ತೆ ಅವರು ಪಟ್ಟಿಗೆ ಸೇರ್ಪಡೆಯಾಗಬೇಕಾದರೆ ಎಲ್ಲಾ ದಾಖಲೆ ನೀಡಬೇಕಿದೆ ಎಂದು ವಿವರಿಸಿದರು.
ಗುಂಪು ಗುಂಪಾಗಿ ಅಸಿಸ್ಟ್ ಮಾಡಿದರೆ ತಪ್ಪೇನು: ಈ ಭಾಗದ ಸಂಸದರು ಎನ್.ಆರ್. ಕ್ಷೇತ್ರದಲ್ಲಿ ಎನ್ಯುಮರೇಷನ್ ಅರ್ಜಿಗಳನ್ನು ಗುಂಪು ಗುಂಪಾಗಿ ವಿತರಿಸಿ, ಭರ್ತಿ ಮಾಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಆದರೆ, ನೈಜ್ಯವಾಗಿ ಸಾಕ್ಷರತೆ ಕಡಿಮೆ ಇರುವ ಆ ಭಾಗದಲ್ಲಿ ಎನ್ಯುಮರೇಷನ್ ಅರ್ಜಿ ತುಂಬಲು ಕಾಂಗ್ರೆಸ್ ಬಿಎಲ್ ಒಗಳು ಸಹಾಯ ಮಾಡುತ್ತಿದ್ದಾರೆ. ಒಬ್ಬೊಬ್ಬರಿಗೆ ನೆರವಾಗುವ ಬದಲು ಸಾಮೂಹಿಕವಾಗಿ ಎಲ್ಲರನ್ನೂ ಒಂದೆಡೆ ಸೇರಿಸಿ ಅರ್ಜಿ ಭರ್ತಿಮಾಡುವ ಬಗ್ಗೆ ತಿಳಿಸುತ್ತಿದ್ದಾರೆ. ಇದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ, ಪ್ರಧಾನ ಕಾರ್ಯದರ್ಶಿ ಶಿವಣ್ಣ, ಮುಖಂಡರಾದ ಪಿ.ಎಂ. ರಾಮು, ಮಹೇಶ್ ಇದ್ದರು