Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪುಸ್ತಕಗಳು ಜ್ಞಾನ, ಸಂಸ್ಕಾರ, ಸೃಜನಶೀಲತೆ ಮತ್ತು ಚಿಂತನೆಯನ್ನು ಬೆಳೆಸುವ ಅತ್ಯುತ್ತಮ ಸಾಧನಗಳಾಗಿವೆ; ಸಂಸದ ಡಾ. ಸಿ.ಎನ್. ಮಂಜುನಾಥ್


ಮೈಸೂರು: ಪುಸ್ತಕಗಳು ಜ್ಞಾನ, ಸಂಸ್ಕಾರ, ಸೃಜನಶೀಲತೆ ಮತ್ತು ಚಿಂತನೆಯನ್ನು ಬೆಳೆಸುವ ಅತ್ಯುತ್ತಮ ಸಾಧನಗಳಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ್ ಹೇಳಿದರು.
ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮೈಸೂರು ಒರೇಟರ್ಸ್ ಫೋರಂ ಚಾರಿಟೇಬಲ್ ಟ್ರಸ್ಟ್ ಹಾಗೂ ಮೈಸೂರು ಬುಕ್ ಕ್ಲಬ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 10ನೇ `ಮೈಸೂರು ಸಾಹಿತ್ಯ ಸಂಭ್ರಮ 2026′ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಂತ್ರಜ್ಞಾನ ಎಷ್ಟೇ ವೇಗವಾಗಿ ಬೆಳೆಯುತ್ತಿದ್ದರೂ ಪುಸ್ತಕಗಳ ಮಹತ್ವ ಎಂದಿಗೂ ಕಡಿಮೆಯಾಗುವುದಿಲ್ಲ. ಪುಸ್ತಕಗಳು ಜ್ಞಾನ, ಸಂಸ್ಕಾರ, ಸೃಜನಶೀಲತೆ ಮತ್ತು ಚಿಂತನೆಯನ್ನು ಬೆಳೆಸುವ ಅತ್ಯುತ್ತಮ ಸಾಧನಗಳಾಗಿದ್ದು, ಸಾಹಿತ್ಯವು ಉತ್ತಮ ಸಮಾಜ ನಿರ್ಮಾಣದ ಭದ್ರ ಬುನಾದಿಯಾಗಿದೆ. ಓದುವ ಸಂಸ್ಕöÈತಿ ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ತಿಳಿಸಿದರು.
ಆರೋಗ್ಯವೇ ಅತ್ಯಂತ ದೊಡ್ಡ ಸಂಪತ್ತಾಗಿದ್ದು, ಸಮತೋಲನಯುತ ಆಹಾರ, ನಿಯಮಿತ ವ್ಯಾಯಾಮ, ಉತ್ತಮ ಜೀವನಶೈಲಿ ಹಾಗೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ್ಯದರಿಂದ, ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟಬಹುದು ಎಂದು ಸಲಹೆ ನೀಡಿದರು. ರೋಗ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ, ಮುನ್ನೆಚ್ಚರಿಕೆ ವಹಿಸುವುದೇ ಉತ್ತಮ ವೈದ್ಯಕೀಯ ಎಂದರು.
ಎರಡು ದಿನಗಳ ಸಾಹಿತ್ಯ ಸಂಭ್ರಮವು ಲೇಖಕರು, ಕವಿಗಳು, ಚಿಂತಕರು ಹಾಗೂ ಸಾಹಿತ್ಯಾಸಕ್ತರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಚಿಂತನಶೀಲ ಸಂವಾದಗಳಿಗೆ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.