Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದೇಶಕ್ಕೆ ಆಹಾರ ಭದ್ರತೆಯನ್ನು ಹಾಕಿಕೊಟ್ಟರು ಬಾಬು ಜಗಜೀವನ್ ರಾಮ್; ಎಸ್.ಜಯಪ್ರಕಾಶ್


ಮೈಸೂರು; ದೇಶಕ್ಕೆ ಆಹಾರ ಭದ್ರತೆಯನ್ನು ಹಾಕಿಕೊಟ್ಟರು ಬಾಬು ಜಗಜೀವನ್ ರಾಮ್ ರವರು ಎಂದು ಚಿತ್ರ ನಟ ಹಾಗೂ ಬಿಜೆಪಿ ಮುಖಂಡ ಎಸ್.ಜಯಪ್ರಕಾಶ್ (ಜೆಪಿ) ಹೇಳಿದರು.
ಬಾಬು ಜಗಜೀವನ್ ರಾಮ್ ರವರ ಜಯಂತಿ ಪ್ರಯುಕ್ತ ಸೋಮವಾರ ನಗರದ ರೈಲು ನಿಲ್ದಾಣದ ಬಳಿಯಿರುವ ಬಾಬು ಜಗಜೀವನ್ ರಾಮ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಆಹಾರ ಕೊರತೆ ತೀವ್ರವಾಗಿದ್ದ ಕಾಲದಲ್ಲಿ ದೇಶದ ಉಪಪ್ರದಾನಿಯಾಗಿದ್ದ ಬಾಬು ಜಗಜೀವನ್ ರಾಮ್ ಅವರು ದೇಶದ್ಯಾಂತ ಹಸಿರು ಕ್ರಾಂತಿಯನ್ನು ನಡೆಸುವ ಮೂಲಕ ದೇಶದ ಆಹಾರ ಕೊರತೆ, ಸಮಸ್ಯೆಯನ್ನು ನಿವಾರಿಸಿ, ಆಹಾರದಲ್ಲಿ ಸ್ವಾವಲಂಬನೆ ಸಾಧಿಸುವಂತೆ ಮಾಡಿದರು. ಆ ಮೂಲಕ ದೇಶಕ್ಕೆ ಆಹಾರ ಭದ್ರತೆಯನ್ನು ಹಾಕಿಕೊಟ್ಟರು. ಅವರು ಇನ್ನೂ ಅನೇಕ ಕೊಡುಗೆಗಳನ್ನು ದೇಶಕ್ಕೆ ನೀಡಿದ್ದಾರೆ. ಅವರ ತತ್ವ, ಸಿದ್ಧಾಂತ, ಆದರ್ಶಗಳನ್ನು ಎಲ್ಲರೂ ಅನುಸರಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಈ ವೇಳೆ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ ಗಿರೀಶ್, ಪದಾಧಿಕಾರಿಗಳಾದ ಕಿರಣ್, ಸೋಮೇಶ್ ಕುಮಾರ್, ರಾಜು ಹಾಗೂ ಮತ್ತಿತರರು ಹಾಜರಿದ್ದರು.