
ಮೈಸೂರು : ನಗರದಲ್ಲಿ ಪ್ರಗತಿಯಲ್ಲಿರುವ ಮೇಲುಸೇತುವೆ ನಿರ್ಮಾಣ ಕಾಮಗಾರಿಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ವಿವಿಧ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿದರು. ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಸಂಚಾರ ತೊಂದರೆ ಅಥವಾ ಅನಾನುಕೂಲ ಉಂಟಾಗದAತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಸುರಕ್ಷತೆ ಮತ್ತು ಸುಗಮ ಸಂಚಾರ ನಿರ್ವಹಣೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷಿ÷್ಮÃಕಾಂತ್ ರೆಡ್ಡಿ ಹಾಗೂ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.