Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನರಸಿಂಹರಾಜ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಬೇಕು: ಸಂತೋಷ್ ಕುಮಾರ್ ಬಿ.ಎಂ


ಮೈಸೂರು: ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಬಿ.ಎಂ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,
ಸರ್ಕಾರದ ಮಾರ್ಗಸೂಚಿಯಂತೆ ಬೂತ್ ಮಟ್ಟದ ಅಧಿಕಾರಿಗಳು ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರಗಳೊAದಿಗೆ ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸಬೇಕು. ಪರಿಶೀಲನೆ ನಡೆಸಿದ ಮನೆಗಳಿಗೆ ಸ್ಟಿಕ್ಕರ್ ಅಳವಡಿಸುವ ಮೂಲಕ ಪ್ರಕ್ರಿಯೆ ಪೂರ್ಣಗೊಂಡಿರುವುದನ್ನು ಖಚಿತಪಡಿಸಬೇಕು. ಆದರೆ ನರಸಿಂಹರಾಜ ಕ್ಷೇತ್ರದಲ್ಲಿ ಮನೆ-ಮನೆಗೆ ತೆರಳಿ ಪರಿಶೀಲನೆ ನಡೆಸುವ ಬದಲು ಕಲ್ಯಾಣ ಮಂಟಪಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದಾರೆ
ಈ ರೀತಿಯ ಪ್ರಕ್ರಿಯೆಯಿಂದ ಅರ್ಹ ಮತದಾರರಿಗಿಂತ ಅನರ್ಹರು ಮತದಾರರ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಎಸ್ ಐ ಆರ್ ಪ್ರಕ್ರಿಯೆಯನ್ನು ನಿಯಮಾನುಸಾರ ಹಾಗೂ ಮನೆ-ಮನೆಗೆ ಭೇಟಿ ನೀಡಿ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನರಸಿಂಹರಾಜ ಕ್ಷೇತ್ರವು ಸೂಕ್ಷ÷್ಮ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಪಕ್ಷಗಳ ಬೂತ್ ಮಟ್ಟದ ಏಜೆಂಟರು ನಿರ್ಭಯವಾಗಿ ಕಾರ್ಯನಿರ್ವಹಿಸಲು ಜಿಲ್ಲಾಡಳಿತ ಮತ್ತು ಮೈಸೂರು ನಗರ ಪೊಲೀಸ್ ಇಲಾಖೆ ಸೂಕ್ತ ಭದ್ರತೆ ಒದಗಿಸಬೇಕು. ಅಗತ್ಯವಿದ್ದರೆ ಕೇಂದ್ರ ಮೀಸಲು ಪೊಲೀಸ್ ಪಡೆ (ಅಖPಈ) ನಿಯೋಜಿಸಿ ಎಸ್‌ಐಆರ್ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ನರಸಿಂಹರಾಜ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಲು ಸಾರ್ವಜನಿಕರು, ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು ಹಾಗೂ ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.