Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬರಗಾಲದ ರೈತರ ಸಮಸ್ಯೆಗಳು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ತುರ್ತು ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ಒತ್ತಾಯ


ಮೈಸೂರು; ಬರಗಾಲದ ರೈತರ ಸಮಸ್ಯೆಗಳು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ತುರ್ತು ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ.
ಮಂಗಳವಾರ ನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಬಣ್ಣಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೂ ಮುನ್ನ ಸರ್ಕಾರ ನಿಗದಿ ಮಾಡಿದ ಹಿಂದಿನ ವರ್ಷದ ಬಾಕಿ ಟನ್ ಕಬ್ಬಿಗೆ 50 ರು ರೈತರಿಗೆ ಪಾವತಿಸಬೇಕು
ಹಿಂದಿನ ವರ್ಷದ ಕಬ್ಬಿನ ಉಪ ಉತ್ಪನ್ನಗಳ ಲಾಭ ಸಕ್ಕರೆ ಸಿಪ್ಪೆ ಕಾಕಂಬಿ ಮಡ್ಡಿ ಲಾಭ ಲೆಕ್ಕ ಹಾಕಿ ಹೆಚ್ಚುವರಿ ಲಾಭ ರೈತರಿಗೆ ಹಂಚಿಕೆ ಮಾಡಬೇಕು. ಪ್ರಸಕ್ತ ಸಾಲಿನ 2026-27 ಕಬ್ಬಿನ ದರ ನಿಗದಿಪಡಿಸಿ ಘೋಷಣೆ ಮಾಡಬೇಕು
ಬರ ಪರಿಸ್ಥಿತಿಯ ಕಾರಣ ಕಬ್ಬಿನ ಇಳುವರಿ ಕಡಿಮೆಯಾಗುತ್ತಿದೆ ಉತ್ಪಾದನಾ ವೆಚ್ಚ ಏರಿಕೆಯಾಗುತ್ತಿದೆ ಆದ್ದರಿಂದ ಎಫ್ ಆರ್ ಪಿ ಮೇಲೆ ಹೆಚ್ಚುವರಿ ದರ ನಿಗದಿ ಮಾಡಬೇಕು. ಕಬ್ಬು ಕಟಾವು ಕೂಲಿ ಹಾಗೂ ಸಾಗಾಣಿಕೆ ವೆಚ್ಚ ಆರಂಭಕ್ಕೂ ಮೊದಲೇ ನಿರ್ಧರಿಸಬೇಕು ಹಾಗೂ ಚೇಷ್ಟತೆ ಆಧಾರದಲ್ಲಿ ಕಬ್ಬು ಕಟಾವು ಮಾಡಬೇಕು ಎಂದು ಒತ್ತಾಯಿಸಿದರು.
ಸರ್ಕಾರ ನಿಗದಿ ಮಾಡಿದ ಎಲ್ಲಾ ಆದೇಶಗಳನ್ನು ಪ್ರತಿ ಬಾರಿಯೂ ಪಾಲನೆ ಮಾಡದೆ ಸಕ್ಕರೆ ಕಾರ್ಖಾನೆಯವರು ನ್ಯಾಯಾಲಯಕ್ಕೆ ಹೋಗಿ ತಡೆಯಜ್ಞ ತರುವುದು ರೈತರನ್ನ ವಂಚಿಸುವುದು ಈ ಕಾರ್ಖಾನೆಗೆ ಮಾಮೂಲಿಯಾಗಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಕಾರ್ಖಾನೆ ಆರಂಭಕ್ಕೂ ಮೊದಲು ತಾವು ಅನುಮತಿ ನೀಡದೆ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ರೈತರ ಈ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಕ್ಕರೆ ಕಾರ್ಖಾನೆ ಆರಂಭಕ್ಕೂ ಮುನ್ನ ಜಿಲ್ಲಾಡಳಿತ ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರರ ರೈತರ ಸಭೆ ಕರೆದು ಸಮಸ್ಯೆ ಇತರ್ಥ ಪಡಿಸಬೇಕು. ಈ ಬಗ್ಗೆ ನಿರ್ಲಕ್ಷ ಮಾಡಿದರೆ ಬಣ್ಣಾರಿ ಸಕ್ಕರೆ ಕಾರ್ಖಾನೆ ಮುಂದೆ ನಿರಂತರ ಚಳುವಳಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸಭೆಯ ಬಳಿಕ ಅಪರ ಜಿಲ್ಲಾಧಿಕಾರಿ ಐಶ್ವರ್ಯ ರವರಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಒತ್ತಾಯ ಪತ್ರ ಸಲ್ಲಿಸಲಾಯಿತು
ಸಭೆಯಲ್ಲಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾಧ್ಯಕ್ಷ ಪಿ ಸೋಮಶೇಖರ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವರಕೂಡು ನಾಗೇಶ್, ಜಂಟಿ ಕಾರ್ಯದರ್ಶಿ ಪರಶಿವಮೂರ್ತಿ ತಾಲೂಕು ಅಧ್ಯಕ್ಷರಾದ ಕುರುಬೂರು ಗುರುಸ್ವಾಮಿ, ಲಕ್ಷಿ÷್ಮÃಪುರ ವೆಂಕಟೇಶ್, ದೇವನೂರು ವಿಜಯೇಂದ್ರ,ಮುಖAಡರಾದ ಕುರುಬೂರು ಸಿದ್ದೇಶ್ ಕೋಟೆ ಸುನಿಲ್,ಗೌರಿಶಂಕರ್, ನಂಜುAಡಸ್ವಾಮಿ, ಕಾಚೂರು ಮಹದೇವಸ್ವಾಮಿ, ನಾಗೇಶ್, ಕಸುವಿನಹಳ್ಳಿ ಮಂಜೇಶ್, ಶಿವಸ್ವಾಮಿ, ಕೆಂಡಗಣ್ಣಪ್ಪ,ಜಯರಾಮ್,ಸೋಮಶೇಖರ,ಅರುಣ ಕುಮಾರ್ ಮುಂತಾದವರು ಇದ್ದರು,