Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯ:ಆಷಾಢ ಮಾಸದಲ್ಲಿ ಪ್ಲಾಸ್ಟಿಕ್ ಬಳಸದಂತೆ ಭಕ್ತರಿಗೆ ಪ್ರಾಧಿಕಾರ ಸೂಚನೆ


ಮೈಸೂರು: ನಗರದ ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯವಾಗಿದೆ. ಈ ಹಿನ್ನಲೆಯಲ್ಲಿ ಆಷಾಢ ಮಾಸದ ಶುಕ್ರವಾರಗಳು, ಪ್ರತಿ ಶನಿವಾರ, ಭಾನುವಾರ ಹಾಗೂ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವದ /ವರ್ಧಂತಿ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ, ಇಡೀಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಶ್ರೀ ಚಾಮುಂಡೇಶ್ವರಿಕ್ಷೇತ್ರಅಭಿವೃದ್ಧಿ ಪ್ರಾಧಿಕಾರವು ತೀರ್ಮಾನಿಸಿದೆ.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯ ತೀರ್ಮಾನದಂತೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧದ ಕುರಿತು ಅರಿವು ಮೂಡಿಸಲು ಉದ್ದೇಶಿಸಲಾಗಿದೆ.
ಈ ಬಾರಿಯ ವಿಶೇಷ ದಿನಗಳಾದ ಜುಲೈ 17 ರಂದು ನಡೆಯಲಿರುವ ಚಾಮುಂಡೇಶ್ವರಿ ಅಮ್ಮನವರ ಆಷಾಢ ಮಹೋತ್ಸವ, ಜುಲೈ 17 ರಂದು 1ನೇ ಆಷಾಢ ಶುಕ್ರವಾರ, ಜುಲೈ 24 ರಂದು 2ನೇ ಆಷಾಢ ಶುಕ್ರವಾರ, ಜುಲೈ 31 ರಂದು 3ನೇ ಆಷಾಢ ಶುಕ್ರವಾರ ಹಾಗೂ ಆಗಸ್ಟ್ 4ರಂದು ಜರುಗುವ ಅಮ್ಮನವರ ವರ್ಧಂತಿ ಮತ್ತು ಆಗಸ್ಟ್ 7 ರಂದು 4ನೇ ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಬರುವ ಸಾರ್ವಜನಿಕರು ಲಲಿತ್ ಮಹಲ್ ಪಾರ್ಕಿಂಗ್ ಸ್ಥಳ ಸ್ಭೆರಿದಂತೆ ಚಾಮುಂಡಿ ಬೆಟ್ಟದ ಪ್ರದೇಶದಲಿ ಪ್ಲಾಸ್ಟಿಕ್ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಚಾಮುಂಡಿ ಬೆಟ್ಟದ ಕ್ಷೇತ್ರಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.