Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರ್ಪೊರೇಟ್ ಸಹಯೋಗ


ಮೈಸೂರು: ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಮತ್ತು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಮುದಾಯ ಮತ್ತು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಸಿ.ಸಿ.ಎಸ್.ಆರ್ ನಿಧಿಯನ್ನು ಬಳಸಿಕೊಳ್ಳುವ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಿ. ಉದಯಕುಮಾರ್ ಅವರು ಪ್ರಸಕ್ತ ಯೋಜನೆಯ ಮುಖ್ಯ ಉದ್ದೇಶಗಳು ಹಾಗೂ ಈ ಯೋಜನೆಯ ಭಾಗವಾಗಿ ಸ್ಥಾಪನೆ ಮಾಡಬೇಕಾಗಿರುವ ಸಿ.ಸಿ.ಎಸ್.ಆರ್ ಕೋಶ ಹಾಗೂ ನಮ್ಮ ಶಾಲೆ ನನ್ನಕೊಡುಗೆ – ಸಿ.ಸಿ.ಎಸ್.ಆರ್ ಪೋರ್ಟಲ್ ಇವುಗಳ ಕುರಿತಾದ ಸಮಗ್ರ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕಿ ನಾಗಮ್ಮ, ಕೈಗಾರಿಕಾಇಲಾಖೆಯ ಜಿಲ್ಲಾ ಹಂತದ ಅಧಿಕಾರಿ ನಾಸಿರ್ ,ಡಯಟ್ ಹಿರಿಯ ಉಪನ್ಯಾಸಕರಾದ ಸುರೇಶ್.ಕೆ.ವಿ, ಕುಮಾರ್.ಆರ್, ಉಪ ಯೋಜನಾ ಸಮನ್ವಯಾಧಿಕಾರಿಗಳಾದ ಶೋಭಾ.ಜಿ ಮತ್ತು ಕಮಲ, ಸಿ.ಎಸ್. ಮನೋರಮ, ಹಾಗೂ ಯೋಜನಾ ಸಮನ್ವಯಾಧಿಕಾರಿ ಸಂತೋಷ್ ಉಪಸ್ಥಿತರಿದ್ದರು.