
ಮೈಸೂರು: ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನಾಗನಹಳ್ಳಿ, ವತಿಯಿಂದ 2026-27ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮೈಸೂರು ತಾಲ್ಲೂಕು ಇಲವಾಲ ಹೋಬಳಿಯ ದಡದಕಲ್ಲಹಳ್ಳಿ ಗ್ರಾಮದಲ್ಲಿ “ತೆಂಗು, ಅಡಿಕೆ ಮತ್ತು ಬಾಳೆ ಬೆಳೆಗಳ ನಿರ್ವಹಣೆ’’ ಕುರಿತು ಆಯೋಜಿಸಿದ್ದ ಒಂದು ದಿನದ ಹೊರಾಂಗಣ ತರಬೇತಿಗೆ ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ರೈತರು ಉದ್ಘಾಟಿಸಿದರು.
ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಮಂಜುಳ ಎಂ.ಬಿ. ಪ್ರಾಸ್ತಾವಿಕ ನುಡಿಯಲ್ಲಿ ಮಾತನಾಡಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನೆಡೆಯುವ ತರಬೇತಿಗಳಲ್ಲಿ ರೈತರು ಹೆಚ್ಚು ಭಾಗವಹಿಸಿ, ತರಬೇತಿಯ ಪ್ರಯೋಜನ ಪಡೆಯುವಂತೆ ಮತ್ತು ತೆಂಗು, ಅಡಿಕೆ ಮತ್ತು ಬಾಳೆ ಬೆಳೆಗಳ ನಿರ್ವಹಣೆ ಮಾಡುವುದು ಹಾಗೂ ಅತಿಯಾದ ರಾಸಾಯನಿಕಗಳನ್ನು ಬಳಸುವುದರಿಂದ ಮಣ್ಣಿನ ಫಲವತ್ತತೆ ಕುಂಠಿತವಾಗುವುದನ್ನು ತಪ್ಪಿಸಲು ಹೆಚ್ಚು ಪ್ರಮಾಣದಲ್ಲಿ ಸಾವಯವ ಗೊಬ್ಬರ ಹಾಗೂ ಹಸಿರೆಲೆ ಗೊಬ್ಬರಗಳನ್ನು ಬಳಸುವಂತೆ ತಿಳಿಸಿದರು.
ಇಲವಾಲ ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಸಿದ್ದಪ್ಪ ಆರ್ ಮಾತನಾಡಿ, ತೆಂಗು, ಅಡಿಕೆ ಮತ್ತು ಬಾಳೆ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು.
ಇಲವಾಲ ತೋಟಗಾರಿಕೆ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ರಾಮೇಗೌಡ ಜಿ.ಕೆ. ಅವರು ತೆಂಗು, ಅಡಿಕೆ ಮತ್ತು ಬಾಳೆ ಬೆಳೆಯಲ್ಲಿ ಕಂಡುಬರುವ ಪ್ರಮುಖ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.
ಇಲವಾಲ ಹೋಬಳಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ರಾಜಲಕ್ಷ್ಮಿ ಮಾತನಾಡಿ, ಕೃಷಿ ಇಲಾಖೆಯಲ್ಲಿ ಅನುಷ್ಟಾನಗೊಳಿಸುವ ಯೋಜನೆಗಳಡಿ ದೊರೆಯುವ ಸಹಾಯಧನದ ಬಗ್ಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ರೈತ/ ಮಹಿಳೆಯರು ಭಾಗವಹಿಸಿ ಮಾಹಿತಿ ಪಡೆದುಕೊಂಡರು.