Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದಸರಾ ಹಬ್ಬದಲ್ಲಿ ಸರ್ಕಾರ ಕಂಬಳ ಕ್ರೀಡೆ ಆಯೋಜಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆ ತೀವ್ರ ವಿರೋಧ


ಮೈಸೂರು; ವಿಶ್ವ ವಿಖ್ಯಾತ ನಾಡ ಹಬ್ಬ ದಸರಾ ಹಬ್ಬದ ಸಂದರ್ಭದಲ್ಲಿ ಸರ್ಕಾರವು ಕಂಬಳ ಕ್ರೀಡೆ ಆಯೋಜಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈ ಕುರಿತು ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಹಾಗೂ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬವು ಐತಿಹಾಸಿಕ ಹಿನ್ನೆಲೆ, ಭವ್ಯ ಪರಂಪರೆ, ಸಾಂಸ್ಕöÈತಿಕ ವೈಶಿಷ್ಟ÷್ಯಗಳು ಮತ್ತು ಧಾರ್ಮಿಕ ಆಚರಣೆಗಳನ್ನು ಹೊಂದಿದೆ. ಪ್ರತಿ ವರ್ಷ ನವರಾತ್ರಿ ಸಮಯದಲ್ಲಿ ನಡೆಯುವ ಈ ವೈಭವದ ಹಬ್ಬಕ್ಕೆ ದೇಶ ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ.
ಇತ್ತೀಚಿನ ವರ್ಷಗಳಲ್ಲಿ ಯುವದಸರಾ ಇತ್ಯಾದಿ ಹೊಸ ಕಾರ್ಯಕ್ರಮಗಳ ಸೇರ್ಪಡೆಯಾಗಿ ದಸರಾ ಸಮಯದಲ್ಲಿ ವಿಪರೀತ ಜನಜಂಗುಳಿ, ವಾಹನ ಸಂಚಾರ ದಟ್ಟಣೆ, ವಾಯು ಮಾಲಿನ್ಯ, ಶಬ್ದ ಮಾಲಿನ್ಯಗಳು ಜನರಲ್ಲಿ ರೇಜಿಗೆ ಹುಟ್ಟಿಸುತ್ತಿವೆ ಮತ್ತು ಬಸವಳಿಯುವಂತೆ ಮಾಡುತ್ತಿವೆ.
ಇಂತಹ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಜನರು ಸೇರುವ ಕಂಬಳ ಕ್ರೀಡೆಯ ಆಯೋಜನೆ ಮೈಸೂರಿನ ಲಕ್ಷಾಂತರ ಜನರಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶ ಮೂಡಿಸಲು ಕಾರಣವಾಗುತ್ತದೆ ಎಂದು ಹೇಳಿದರು.
ಕಂಬಳ ಕ್ರೀಡೆ ಕರಾವಳಿ ಪ್ರದೇಶದ (ತುಳುನಾಡಿನ) ಜನಪ್ರಿಯ ಗ್ರಾಮೀಣ ಕ್ರೀಡೆ. 800 ವರ್ಷಗಳ ಹಿಂದೆ ತುಳುನಾಡಿನ ರೈತರು ಭತ್ತದ ಸುಗ್ಗಿ ಕೊಯ್ದು ಮಾಡಿದ ನಂತರ ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ಕೆಸರು ಗದ್ದೆ ಓಟ ಪ್ರಾರಂಭಿಸಿದರು. ಇಲ್ಲಿನ ಭೌಗೋಳಿಕ ಅಂಶಗಳು ಈ ಕ್ರೀಡೆ ಹುಟ್ಟಲು ಪ್ರಮುಖ ಕಾರಣ. ಈ ಕ್ರೀಡೆಯು ಕರಾವಳಿಯ ಪ್ರಾದೇಶಿಕ ಸೊಗಡನ್ನು, ಸಾಂಸ್ಕöÈತಿಕ ವೈಶಿಷ್ಟ÷್ಯಗಳನ್ನು, ಧಾರ್ಮಿಕ ಆಚರಣೆಗಳನ್ನು ಹೊಂದಿರುತ್ತದೆ. ತುಂಬಾ ನೇಮ ನಿಷ್ಠೆಯಿಂದ ಕಂಬಳವನ್ನು ನಡೆಸುತ್ತಾರೆ ಎಂದು ಕಂಬಳ ಕ್ರೀಡೆಯ ಬಗ್ಗೆ ಹೆಚ್ಚಿನ ತಿಳುವಳಿಕೆ ಉಳ್ಳವರು ಹೇಳುತ್ತಾರೆ.
ಇಂತಹ ಕಂಬಳವನ್ನು ಕರಾವಳಿ ಪ್ರದೇಶದಿಂದ ಮೈಸೂರಿನ ದಸರಾ ಸಂದರ್ಭದಲ್ಲಿ ತಂದು ಹೇರುವುದು ಯಾವುದೇ ಕಾರಣಕ್ಕೂ ಸಮರ್ಥನೀಯ ಅಲ್ಲ. ಇದನ್ನು ಮೈಸೂರಿನ ಜನರು ವಿರೋಧಿಸುವಂತೆ ಕರಾವಳಿ ಭಾಗದ ಜನರೂ ವಿರೋಧಿಸುತ್ತಾರೆ ಎಂದು ಪರಶುರಾಮೇಗೌಡ ಹೇಳಿದರು.
ಜುಲೈ ತಿಂಗಳು ಬಂದರೂ ಮಳೆ ಬರದೆ ಹಲವು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಕೆಲವು ಕಡೆ ರೈತರು ಬಿತ್ತನೆ ಮಾಡಲಾಗುತ್ತಿಲ್ಲ ಮತ್ತು ಬಿತ್ತನೆ ಮಾಡಿರುವ ಕಡೆ ಮಳೆ ಇಲ್ಲದೆ ಬೆಳೆಗಳು ಒಣಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಸರ್ಕಾರದ ಆದ್ಯತೆಯಾಗಬೇಕು ಎಂದು ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.
ಕೇವಲ ಎರಡು ದಿನಗಳ ಕ್ರೀಡೆಗೆ 400 ಕೋಣಗಳನ್ನು, ಪ್ರತಿ ಕೋಣದ ಜವಾಬ್ದಾರಿಗೆ 50 ಜನರಂತೆ 20 ಸಾವಿರ ಜನರನ್ನು ಮೈಸೂರಿಗೆ ಕರೆತರುವುದು ; ಕೆಸರು ಗದ್ದೆ ನಿರ್ಮಾಣಕ್ಕೆ 27 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿಯುವುದು ; ನೀರಿನ ತೀವ್ರ ಅಭಾವವಿರುವಾಗ ಲಕ್ಷಾಂತರ ಲೀಟರ್ ನೀರು ಪೋಲು ಮಾಡುವುದು ವಿವೇಕದ ನಡೆಗಳಲ್ಲ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಮೈಸೂರಿನ ದಸರಾ ಹಬ್ಬದ ಆಚರಣೆಯಲ್ಲಿರುವ ನ್ಯೂನತೆಗಳನ್ನು, ಲೋಪದೋಷಗಳನ್ನು ಸರಿಪಡಿಸುವುದು, ಸ್ಥಳೀಯ ಕಲೆಗಳಿಗೆ ಮತ್ತು ಕಲಾವಿದರಿಗೆ ಅವಕಾಶ ಕೊಡುವುದು, ಕಲಾವಿದರಿಗೆ ಸೂಕ್ತ ಸಂಭಾವನೆ ಕೊಡುವುದು ಮತ್ತು ಗೌರವಯುತವಾಗಿ ನಡೆಸಿಕೊಳ್ಳುವುದು ತುಂಬಾ ಮುಖ್ಯ. ನಮ್ಮ ಸರ್ಕಾರ ಇನ್ನು ಮುಂದಾದರು ಈ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಲಿ ಎಂದು ಮ.ಗು.ಸದಾನಂದ ಹೇಳಿದರು.
ಈ ಅಂಶಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ದಸರಾ ಸಂದರ್ಭದಲ್ಲಿ ಕಂಬಳ ಕ್ರೀಡೆ ಆಯೋಜಿಸುವುದನ್ನು ಕೈಬಿಡಬೇಕೆಂದು ಆಗ್ರಹಿಸುತ್ತೇವೆ. ಒಂದು ವೇಳೆ ಸರ್ಕಾರ ಕಂಬಳ ಕ್ರೀಡೆ ಆಯೋಜನೆ ಕೈಬಿಡದಿದ್ದರೆ ರೈತ ಸಂಘಗಳು, ಪರಿಸರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಒಗ್ಗೂಡಿ ತೀವ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಭಾನು ಮೋಹನ್, ಬೆಟ್ಟಯ್ಯ ಕೋಟೆ ಮತ್ತಿತರರು ಉಪಸ್ಥಿತರಿದ್ದರು.