Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಾಜ್ಯ ಮಟ್ಟದ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ವಿಜಯ ವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳ ಸಾಧನೆ


ಮೈಸೂರು; 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಜಿ.ಕೆ. ವಿನ್ಯಾಸ ಯೋಗ ಕೇಂದ್ರವು ಶ್ರೀ ಕೃಷ್ಣ ಯೋಗಸ್ ಸಹಯೋಗದೊಂದಿಗೆ ಆಯೋಜಿಸಿದ್ದ ರಾಜ್ಯ ಶಾಲಾ ಮತ್ತು ಕಾಲೇಜು ಮಟ್ಟದ ಯೋಗಾಸನ ಚಾಂಪಿಯನ್‌ಶಿಪ್-2026 ರಲ್ಲಿ ವಿಜಯ ವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.
ಈ ಚಾಂಪಿಯನ್‌ಶಿಪ್‌ನಲ್ಲಿ ವಿಜಯ ವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಶ್ಲಾಘನೀಯ ಸ್ಥಾನಗಳನ್ನು ಗಳಿಸಿದ್ದಾರೆ. ಲೇಖನಾ ಎನ್. ದ್ವಿತೀಯ ಸ್ಥಾನ, ಕನಿಷ್ಕ ತೃತೀಯ ಸ್ಥಾನ, ಕನ್ನಿಕಾ ವೈ.ಎ. ಮತ್ತು ಅದಿತಿ ಸಿ. ಚತುರ್ಥ ಸ್ಥಾನ ಹಾಗೂ ಪಾವನಿ ಗೌಡ ಸಿ. ಐದನೇ ಸ್ಥಾನವನ್ನು ಪಡೆದುಕೊಂಡು, ತಮ್ಮ ಅದ್ಭುತ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.