Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹಿರಿಯ ಲೇಖಕಿ ಸಿ.ಎನ್.ಮುಕ್ತಾ ನಿಧನ


ಮೈಸೂರು: ಖ್ಯಾತ ಲೇಖಕಿ ಸಿ.ಎನ್.ಮುಕ್ತಾ (ಕಳ್ಳಂಬೆಳ್ಳ ನರಸಿಂಹ ಮೂರ್ತಿ ಮುಕ್ತಾ) ಶುಕ್ರವಾರ ಬೆಳಗಿನ ಜಾವ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರಿಗೆ ಸೋದರ, ಸೋದರಿ ಇದ್ದಾರೆ. ಲೇಖಕರಾಗಿದ್ದ ನವರತ್ನರಾಮ್ ರಾವ್ ಅವರು ಇವರ ಚಿಕ್ಕಪ್ಪ.
ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ 25 ವರ್ಷಕ್ಕೂ ಅಧಿಕವಾಗಿ ವಿವಿಧೆಡೆ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿದ್ದರು. ಅವರ ಕಾದಂಬರಿಗಳಲ್ಲಿ ಸುಖದ ಸೋಪಾನ, ಕ್ಷಮಯಾ ಧರಿತ್ರಿ, ದಡ ಸೇರಿದ ನೌಕೆ, ಜೀವನಚಕ್ರ, ಅಮೃತಮಯಿ, ವಿಮುಕ್ತಿ ಪ್ರಸಿದ್ಧವಾದವು.
ಅವರ ಕಾದಂಬರಿಗಳು ರಾಜ್ಯದ ಪ್ರಮುಖ ವಾರಪತ್ರಿಕೆಗಳಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿವೆ. ಅಲ್ಲದೆ 75ಕ್ಕೂ ಅಧಿಕ ಕಾದಂಬರಿ, 15ಕ್ಕೂ ಅಧಿಕ ಕಥಾಸಂಕಲನಗಳು ಪ್ರಕಟವಾಗಿವೆ. ಅವರ ವಿಮುಕ್ತಿ ಕಾದಂಬರಿ ಆಧರಿಸಿ ರಾಜೇಂದ್ರಸಿAಗ್ ಬಾಬು ಅವರು ದೋಣಿ ಸಾಗಲಿ ಸಿನಿಮಾ ನಿರ್ದೇಶಿಸಿದ್ದರು. ಅಲ್ಲದೆ ಮೇಘ ಮಂದಾರ ಕಾದಂಬರಿ ಆಧರಿಸಿ ಕೋಡ್ಲು ರಾಮಕೃಷ್ಣ ಅವರು ಮಿಸ್ ಕ್ಯಾಲಿಫೋರ್ನಿಯಾ ಸಿನಿಮಾ ನಿರ್ದೇಶಿಸಿದ್ದರು.
ರಾಜ್ಯೋತ್ಸವ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.
ಅವರ ಅಂತಿಮ ದರ್ಶನವನ್ನು ಲಕ್ಷಿ÷್ಮಪುರಂನ ಆರ್.ಟಿ.ಓ ವೃತ್ತದ ಬಳಿಯ ಡಬಲ್ ಟ್ಯಾಂಕ್ ರಸ್ತೆ ಬದಿಯ ಅವರ ಮನೆಯಲ್ಲಿ ಏರ್ಪಡಿಸಲಾಗಿತ್ತು. ಅವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ನಗರದ ಚಾಮುಂಡಿ ಬೆಟ್ಟದ ತಪ್ಪಲಿನ ವಿದ್ಯುತ್ ಚಿತಾಗಾರದಲ್ಲಿ ನಡೆಯಿತು