Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಸ್‌ಐಆರ್ ಕುರಿತು ಜಾಗೃತಿ ಕಾರ್ಯಕ್ರಮ


ಮೈಸೂರು:
ಜಿಲ್ಲೆಯ ನಂಜನಗೂಡು ತಾಲ್ಲೂಕು ಪಂಚಾಯಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIಖ) 2026ರ ಹಿನ್ನೆಲೆ ದಕ್ಷಿಣಕಾಶಿ ಎಂದೇ ಪ್ರಸಿದ್ದವಾಗಿರುವ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.
ಎಸ್.ಐ.ಆರ್ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು, ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಬಿ.ಎಲ್ uಟಿಜeಜಿiಟಿeಜ ಫೆಸಿಲಿಟೇಷನ್ ಸೆಂಟರ್ ಹಾಗೂ ವೋಟರ್ ಫೆಸಿಲಿಟೇಷನ್ ಸೆಂಟರ್ ತೆರಯಲಾಗಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮತದಾರರು ಇದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಮತದಾರರ ಪಟ್ಟಿ ಶುದ್ದೀಕರಣದ ಉದ್ದೇಶದಿಂದ ನಡೆಯುತ್ತಿರುವ ಮತದಾರರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಂಪೂರ್ಣ ನೀಡುವಂತೆ ಕರೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿಯ ತಾಲ್ಲೂಕು ಯೋಜನಾಧಿಕಾರಿ ಶ್ವೇತಾ, ಸಹಾಯಕ ನಿರ್ದೇಶಕರಾದ ಜ್ಯೋತಿ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿಗಳಾದ ದಿನೇಶ್, ಕಾವ್ಯ ಹಾಗೂ ನವೀನ್ ಹಾಜರಿದ್ದರು.