Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನೈರುತ್ಯ ರೈಲ್ವೆ ಮೈಸೂರು ವಿಭಾಗದಿಂದ ನೃತ್ಯ ಸ್ಪರ್ಧೆ


ಮೈಸೂರು; ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರಿನ ಚಾಮುಂಡಿ ಅಧಿಕಾರಿಗಳ ಕ್ಲಬ್‌ನಲ್ಲಿ “ಲಯ, ಏಕತೆ ಮತ್ತು ತಂಡಭಾವನೆ ಸಂಭ್ರಮ” ಎಂಬ ವಿಷಯದಡಿ ವಿಭಾಗಾಂತರ ನೃತ್ಯ ಸ್ಪರ್ಧೆಯನ್ನು ಆಯೋಜಿಸಿತು.
ಮೈಸೂರು ವಿಭಾಗದ ವಿಭಾಗೀಯ ರೈಲು ವ್ಯವಸ್ಥಾಪಕ ಮುದಿತ್ ಮಿತ್ತಲ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್ ಹಾಗೂ ವಿಭಾಗೀಯ ಅಧಿಕಾರಿಗಳು, ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನೌಕರರು ಹಾಗೂ ಅವರ ಕುಟುಂಬ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಸ್ಪರ್ಧೆಯಲ್ಲಿ ಶಾಸ್ತಿçÃಯ ಏಕವ್ಯಕ್ತಿ ಮತ್ತು ಗುಂಪು ಸ್ಪರ್ಧೆ, ಜನಪದ ಏಕವ್ಯಕ್ತಿ ಮತ್ತು ಗುಂಪು ಸ್ಪರ್ಧೆ, ಫ್ರೀಸ್ಟೆöÊಲ್ ಏಕವ್ಯಕ್ತಿ ಮತ್ತು ಗುಂಪು ನೃತ್ಯ ಸ್ಪರ್ಧೆ ವಿಭಾಗಗಳು ಒಳಗೊಂಡಿದ್ದವು.
ಶೀಲಾ ಪ್ರಭಾ ಹಾಗೂ ಪ್ರತಿಮಾ ಮೂರ್ತಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿ ಸ್ಪರ್ಧಿಗಳ ಪ್ರದರ್ಶನವನ್ನು ಪ್ರಶಂಸಿಸಿದರು.
ಈ ಸ್ಪರ್ಧೆಯಲ್ಲಿ ಪ್ರತಿ ವಿಭಾಗಗಳಲ್ಲೂ ಪ್ರತ್ಯೇಕ ಪ್ರಶಸ್ತಿ ನೀಡಲಾಯಿತು ಹಾಗೂ ಸಿಬ್ಬಂದಿ ಶಾಖೆ ಒಟ್ಟು ಚಾಂಪಿಯನ್ ಪಟ್ಟವನ್ನು ಪಡೆದುಕೊಂಡಿದ್ದು, ವಾಣಿಜ್ಯ ಶಾಖೆ ದ್ವಿತೀಯ ಸ್ಥಾನವನ್ನು ಗಳಿಸಿದೆ. ವಿಜೇತರಿಗೆ ಮುಖ್ಯ ಅತಿಥಿಗಳಿಂದ ಬಹುಮಾನ ವಿತರಿಸಲಾಯಿತು.