
ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾದಲ್ಲಿ ರಾಜ್ಯ ಸರ್ಕಾರ ಕಂಬಳ ಕ್ರೀಡೆ ನಡೆಸುವುದು ಬೇಡ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಭಂಡತನವನ್ನು ಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮೈಸೂರಿನ ಜನರ ಭಾವನೆಗೆ ಬೆಲೆ ಕೊಡಬೇಕು ಎಂದರು.
ಕರಾವಳಿಯಲ್ಲೇ ಕಂಬಳವನ್ನು ಸರ್ಕಾರ ಅದ್ದೂರಿಯಾಗಿ ಮಾಡಲಿ. ಅಲ್ಲಿನ ಪರಂಪರೆಯನ್ನು ಮೈಸೂರಿನ ಪರಂಪರೆಗೆ ತುರುಕಬೇಡಿ. ಕಂಬಳಕ್ಕೂ ತನ್ನದೇ ಆದ ಶ್ರೀಮಂತಿಕೆ ಇದೆ. ಅದನ್ನು ಸರ್ಕಾರ ಉಳಿಸಿಕೊಂಡು ಹೋಗಬೇಕು. ಕರಾವಳಿಯಲ್ಲಿ ಕಂಬಳವನ್ನ ಇನ್ನೂ ಅದ್ದೂರಿಯಾಗಿ ಮಾಡಲಿ, ಅದಕ್ಕೆ ನಮ್ಮ ಸಂಪೂರ್ಣ ಸಹಕಾರ ಇರುತ್ತದೆ ಎಂದು ತಿಳಿಸಿದರು.