Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎರಡು ದಿನದ ಕಂಬಳಕ್ಕೆ ಕೆರೆ ಬಲಿ, 150ಕ್ಕೂ ಹೆಚ್ಚು ಮರಗಳಿಗೆ ಕತ್ತರಿ !ಅರಣ್ಯ ಇಲಾಖೆಯಿಂದ ಮೂವರ ವಿರುದ್ಧ ಎಫ್ ಐಆರ್ ದಾಖಲು

ಮೈಸೂರು: ಈ ಬಾರಿ ವಿಜೃಂಭಣೆಯಿAದ ಜರುಗಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ಕಂಬಳ ಕ್ರೀಡೋತ್ಸವವನ್ನು ಪ್ರದರ್ಶನ ಆಯೋಜಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೈಸೂರಿನ ಹೊರವಲಯದಲ್ಲಿ ಕಂಬಳಕ್ಕಾಗಿ ನಿಗದಿಪಡಿಸಲಾದ ಜಾಗದಲ್ಲಿ ಸಿದ್ಧತೆಗಳು ಭರದಿಂದ ನಡೆಯುತ್ತಿವೆ.
ಮೈಸೂರಿನ ಹೊರವಲಯದ ಸಾತಗಳ್ಳಿ ಬಳಿ ಇರುವ 20 ಎಕರೆ ವಿಸ್ತೀರ್ಣದ ಜಾಗದಲ್ಲಿ ಮಣ್ಣನ್ನು ಸಮತಟ್ಟು ಮಾಡುವ ಕಾರ್ಯ ಈಗಾಗಲೇ ಶುರುವಾಗಿದೆ. 10ಕ್ಕೂ ಹೆಚ್ಚು ಜೆಸಿಬಿ ಯಂತ್ರಗಳನ್ನು ಬಳಸಿ ಇಡೀ ಜಾಗವನ್ನು ಕಂಬಳ ನಡೆಸುವುದಕ್ಕಾಗಿ ಸಜ್ಜುಗೊಳಿಸಲಾಗುತ್ತಿದೆ.
ಕಂಬಳ ನಡೆಸಲು ಗುರುತಿಸಲಾಗಿರುವ ಸಾತಗಳ್ಳಿಯ ಈ 20 ಎಕರೆ ಪ್ರದೇಶವು ಸದ್ಯ ದಟ್ಟವಾದ ಹಸಿರಿನಿಂದ ಕೂಡಿದೆ. ಈ ಭಾಗದಲ್ಲಿ ವಿವಿಧ ಜಾತಿಯ 150ಕ್ಕೂ ಅಧಿಕ ಬೃಹತ್ ಗಾತ್ರದ ಮರಗಳಿದ್ದು, ಇಡೀ ಪ್ರದೇಶವನ್ನು ಆವರಿಸಿಕೊಂಡಿವೆ. ಆದರೆ ಕಂಬಳದ ಅಖಾಡವನ್ನು ನಿರ್ಮಿಸುವ ಸಲುವಾಗಿ ಈ ಎಲ್ಲಾ ಮರಗಳನ್ನು ಕಡಿಯಲು ಸಿದ್ಧತೆಗಳು ನಡೆದಿರುವುದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಕಂಬಳಕ್ಕಾಗಿ ಜಾಗದ ಸಿದ್ಧತೆಯಿಂದಾಗಿ ಪರಿಸರಕ್ಕೆ ಮತ್ತೊಂದು ದೊಡ್ಡ ಪೆಟ್ಟು ಬಿದ್ದಿದೆ. ಇಲ್ಲಿ ಸುಮಾರು 6 ಎಕರೆಗೂ ಹೆಚ್ಚು ವಿಸ್ತೀರ್ಣ ಹೊಂದಿರುವ ಬೃಹತ್ ಕೆರೆಯೊಂದಿದೆ. ಮಳೆಯಾದಾಗಲೆಲ್ಲಾ ಸಮೃದ್ಧವಾಗಿ ನೀರು ತುಂಬಿಕೊಳ್ಳುತ್ತಿದ್ದ ಈ ಕೆರೆಯು ಹಲವಾರು ಅಪರೂಪದ ಪಕ್ಷಿ ಪ್ರಬೇಧಗಳ ಆವಾಸಸ್ಥಾನವಾಗಿತ್ತು. ಆದರೆ ಈಗ ಕಂಬಳದ ಮೈದಾನ ನಿರ್ಮಿಸುವ ಸಲುವಾಗಿ ಈ ಜೀವಂತ ಕೆರೆಯನ್ನು ಮಣ್ಣು ಹಾಕಿ ಸಂಪೂರ್ಣವಾಗಿ ಮುಚ್ಚಲಾಗುತ್ತಿದೆ.
ಕಂಬಳ ಪ್ರದರ್ಶನ ಆಯೋಜಿಸಲು ಸಾರ್ವಜನಿಕರು, ಬಿಜೆಪಿ ಜನಪ್ರತಿನಿಧಿಗಳು ಹಾಗೂ ಪರಿಸರವಾದಿಗಳಿಂದ ಎಷ್ಟೇ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ, ರಾಜ್ಯ ಸರ್ಕಾರ ಯಾವುದಕ್ಕೂ ತಲೆಕೆಡಿಸಿಕೊಳ್ಳದೇ ಕಂಬಳ ನಡೆಸಲು ಸಿದ್ಧತೆ ನಡೆಸಿಕೊಳ್ಳುತ್ತಿದೆ.
ಮೂವರ ವಿರುದ್ಧ ಎಫ್ ಐಆರ್ ದಾಖಲು ;
ಕಂಬಳ ವಿವಾದ ನಡುವೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಂಬಳಕ್ಕಾಗಿ ಗುರುತಿಸಲಾದ ಸಾತಗಳ್ಳಿ ಪ್ರದೇಶದಲ್ಲಿ ಜಾಗ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಅನುಮತಿಯಿಲ್ಲದೆ ಮರಗಳನ್ನು ಕಡಿದ ಆರೋಪದ ಮೇಲೆ ಯುವಜನ ಸಬಲೀಕರಣ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ಮೂವರ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಾಗಿದೆ. 20 ಜಾಲಿಮರಗಳು ಸೇರಿ ಒಟ್ಟು 25 ಮರಗಳನ್ನು ಕಡಿದಿರುವ ಆರೋಪ ಹಿನ್ನೆಲೆ ಅರಣ್ಯ ಕಾಯ್ದೆ 1963ರ ಸೆಕ್ಷನ್ 25, 33/2 ಮತ್ತು 33/3ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.