Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಿಂದ ಮತದಾರರ ಸೌಲಭ್ಯ ಕೇಂದ್ರದ ಸ್ಥಳ ಪರಿಶೀಲನೆ

ಮೈಸೂರು: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ. ಎಸ್. ವಸ್ತçದ್ ಅವರು ಸೋಮವಾರ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವಲಯ ಕಚೇರಿ 9ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 39ರ ಎಂಸಿಸಿ ಕಾಲೋನಿಯಲ್ಲಿರುವ ಮತಗಟ್ಟೆ ಸಂಖ್ಯೆ 144, 145, 146 ಹಾಗೂ 147ರ ಮತದಾರರ ಅನುಕೂಲಕ್ಕಾಗಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಸ್ಥಾಪಿಸಲಾಗಿರುವ ಮತದಾರರ ಸೌಲಭ್ಯ ಕೇಂದ್ರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕೇಂದ್ರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಲಾಗಿರುವ ಸೌಲಭ್ಯಗಳು, ಅರ್ಜಿಗಳ ಸ್ವೀಕಾರ, ದಾಖಲೆಗಳ ಪರಿಶೀಲನೆ ಹಾಗೂ ಎಸ್‌ಐಆರ್ ಕಾರ್ಯದ ಪ್ರಗತಿಯನ್ನು ಅವಲೋಕಿಸಿದರು. ಮತದಾರರೊಂದಿಗೆ ನೇರವಾಗಿ ಸಂವಾದ ನಡೆಸಿ, ಕೇಂದ್ರದಲ್ಲಿ ದೊರೆಯುತ್ತಿರುವ ಸೇವೆಗಳ ಕುರಿತು ಮಾಹಿತಿ ಪಡೆದು ಅವರ ಅಭಿಪ್ರಾಯಗಳನ್ನು ಆಲಿಸಿದರು. ಅಲ್ಲದೆ, ಬಿಎಲ್‌ಒ ಗಳು ಹಾಗೂ ಸೂಪರ್ ವೈಸರ್‌ಗಳು ಹಾಗೂ ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಎಸ್‌ಐಆರ್ ಕಾರ್ಯವನ್ನು ಗುಣಮಟ್ಟದೊಂದಿಗೆ, ಪಾರದರ್ಶಕವಾಗಿ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಗತ್ಯ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಿ ಅಧಿಕಾರಿ ವೆಂಕಟೇಶ್ ಸಿ., ಎಇಆರ್‌ಒಗಳು, ಕಂದಾಯ ಅಧಿಕಾರಿಗಳು, ಬಿಎಲ್‌ಒ ಸೂಪರ್ ವೈಸರ್‌ಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿ ಉಪಸ್ಥಿತರಿದ್ದರು.