Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಾಜಿ ಸಚಿವ ರಾಮಚಂದ್ರಗೌಡ ನಿಧನಕ್ಕೆ ಸುತ್ತೂರು ಶ್ರೀಗಳಿಂದ ಸಂತಾಪ


ಮೈಸೂರು; ಮಾಜಿ ಸಚಿವ ರಾಮಚಂದ್ರೇಗೌಡರು ದೈವಾಧೀನರಾಗಿರುವುದು ವಿಷಾದನೀಯ ಸಂಗತಿ ಎಂದು ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಮಚಂದ್ರೇಗೌಡರು ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. ವಿಧಾನಪರಿಷತ್ತಿಗೆ ಬೆಂಗಳೂರು ಪದವೀಧರರ ಕ್ಷೇತ್ರದಿಂದ ಐದು ಬಾರಿ ಆಯ್ಕೆಯಾಗಿದ್ದು ಅವರ ಜನಪ್ರಿಯತೆಯ ದ್ಯೋತಕ. ಆರ್‌ಎಸ್‌ಎಸ್ ಹಿನ್ನೆಲೆಯಿಂದ ಬಂದಿದ್ದವರು. ನಾಲ್ಕು ದಶಕಗಳ ರಾಜಕಾರಣದಲ್ಲಿ ದಕ್ಷತೆಗೆ ಮತ್ತೊಂದು ಹೆಸರಾಗಿದ್ದವರು. ಸರಳ ಸಜ್ಜನಿಕೆಗೆ ಹೆಸರಾಗಿದ್ದರು. ಅಜಾತಶತ್ರುಗಳ. ಪಕ್ಷಾತೀತವಾಗಿ ಮಿತ್ರರ ಬಳಗವನ್ನು ಹೊಂದಿದ್ದರು. ರೇಷ್ಮೆ, ವಿಜ್ಞಾನ ಹಾಗೂ ತಂತ್ರಜ್ಞಾನ ಮತ್ತು ವೈದ್ಯಕೀಯ ಸಚಿವರಾಗಿದ್ದಾಗ ಇಲಾಖೆಗಳಿಗೆ ಹೊಸ ಮೆರುಗನ್ನು ತಂದುಕೊಟ್ಟಿದ್ದರು. ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯಶಸ್ವಿಯಾಗಿದ್ದರು. ಸಾರ್ವಜನಿಕ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆ ಸದಾ ಸ್ಮರಣೀಯ. ಅವರ ಅಗಲುವಿಕೆಯಿಂದ ಕರ್ನಾಟಕವು ಒಬ್ಬ ಸಂಭಾವಿತ ರಾಜಕೀಯ ಮುಖಂಡರನ್ನು, ಶಿಕ್ಷಣ ತಜ್ಞರನ್ನು ಕಳೆದುಕೊಂಡAತಾಗಿದೆ.
ದಿವAಗತರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬವರ್ಗದವರು, ಬಂಧು-ಬಾAಧವರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲೆಂದು ಹಾರೈಸುತ್ತೇವೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.