Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅನಗತ್ಯ ಭಯದಿಂದ ಹಾವುಗಳನ್ನು ಸಾಯಿಸಲಾಗುತ್ತಿದೆ, ಎಲ್ಲಾ ಹಾವುಗಳು ವಿಷಕಾರಿಯಲ್ಲ’


ಮೈಸೂರು: ` ಅನಗತ್ಯ ಭಯದಿಂದ ಹಾವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲಾ ಹಾವುಗಳು ವಿಷಕಾರಿಯಲ್ಲ’ ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು.
ಗುರುವಾರ ನಗರದ ಆರ್‌ಟಿಒ ಕಚೇರಿ ಬಳಿ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಪರಿಸರ ಸ್ನೇಹಿ ತಂಡದ ಆಶ್ರಯದಲ್ಲಿ ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ 98 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರಗ ರಕ್ಷಕ ಸ್ನೇಕ್ ಶ್ಯಾಮ್ ಅವರಿಗೆ ಅಭಿನಂದನಾ
ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,
ನಾಗರಹಾವು, ಕಾಳಿಂಗ ಸರ್ಪ ವಿಷಕಾರಿಯಾಗಿದ್ದು, ಹಪ್ಪಟೆ, ಕೇರೆ ಹಾವು, ಹಸಿರು ಹಾವು ಮುಂತಾದವು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ’ ಎಂದು ಸಲಹೆ ನೀಡಿದರು.
ಹಾವು ಕಚ್ಚಿದಾಗ ಬಹುತೇಕ ಜನರು ಭಯದಿಂದ ಹೃದಯಾಘಾತದಿಂದ ಸಾವನ್ನಪುö್ಪತ್ತಾರೆ. ಹಾವು ಕಚ್ಚಿದಾಗ ವ್ಯಕ್ತಿಗೆ ಧೈರ್ಯ ತುಂಬಬೇಕು ಮತ್ತು ಸಾಧ್ಯವಾದಷ್ಟು ಬೇಗ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು’ ಎಂದರು.
ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚಿಕಿತ್ಸೆಗಾಗಿ ಪ್ರತ್ಯಕ್ಯ ಕೊಟ್ಟು ಚಿಕಿತ್ಸಾ ಕೊಟ್ಟಡಿಗಳನ್ನು ಮೀಸಲಿಡಬೇಕು ಎಂದು ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದ್ದೇವೆ. ಅದು ಈ ಕೂಡಲೇ ಜಾರಿಗೆ ಬರಲಿ .
ಅರಣ್ಯ ಇಲಾಖೆ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು
ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ. ಲಿಂಗರಾಜು ಮಾತನಾಡಿ, ಕೋವಿಡ್ ನಂತಹ ಕಷ್ಡಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ, ಸ್ನೇಕ್ ಶ್ಯಾಮ್ ರವರು ಹಾವನ್ನ ಸಂರಕ್ಷಿಸಿದ್ದಾರೆ. 98ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ, ಪರಿಸರ ಸಂರಕ್ಷಣೆ ಜೊತೆಯಲ್ಲೆ ಧಾರ್ಮಿಕ ಕೇಂದ್ರವನ್ನ ಸ್ಥಾಪಿಸಿರುವುದು ಶ್ಲಾಘನೀಯ. ಪರಿಸರ ಸಂರಕ್ಷಣೆ ವಿಚಾರವಾಗಿ ಪಠ್ಯಪುಸ್ತಕಗಳಲ್ಲಿ ಸ್ನೇಕ್ ಶ್ಯಾಮ್ ರವರ ಸೇವೆ ಮತ್ತು ಪರಿಸರ ಕಾಳಜಿಯ ವಿಷಯದ ಬಗ್ಗೆ ರಾಜ್ಯ ಸರ್ಕಾರ ಅಳವಡಿಸಿ, ಸಣ್ಣಮಕ್ಕಳಲ್ಲಿ ಉರಗ ಮತ್ತು ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಇದೇ ಸಂದರ್ಭದಲ್ಲಿ ಮೃಗಾಲಯ ಪ್ರಾಧಿಕಾರ ಮಾಜಿ ಅಧ್ಯಕ್ಷ ಶಿವಕುಮಾರ್, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ಸಂದೇಶ್ ,ಪ್ರಮೋದ್ ಗೌಡ,ವಾಣಿಶ್, ಎಚ್.ಪಿ.ಚೇತನ್, ನಂದಕುಮಾರ್, ಸಂದೇಶ್, ಸುಪ್ರೀತ್, ಮಹಾನ್ ಶ್ರೇಯಸ್, ಹಾಗೂ ಇನ್ನಿತರರು ಹಾಜರಿದ್ದರು