Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಾವೇರಿ ಕಣಿವೆಯ ಜಲಾಶಯ ವ್ಯಾಪ್ತಿಯಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ಕೂಡಲೇ ನೀರು ಹರಿಸಿ; ಎಸ್.ಜಯಪ್ರಕಾಶ್ ಆಗ್ರಹ

ಮೈಸೂರು: ಕಾವೇರಿ ಕಣಿವೆಯ ವ್ಯಾಪ್ತಿಯಲ್ಲಿರುವ ಜಲಾಶಯಗಳಲ್ಲಿ ಮೈಸೂರು,ಮಂಡ್ಯ, ಬೆಂಗಳೂರು ಸೇರಿದಂತೆ ಇನ್ನಿತರೆ ನಗರಗಳಿಗೆ ಕುಡಿಯುವ ನೀರು ಒದಗಿಸಲು ಒಂದು ವರ್ಷಕ್ಕಾಗುವಷ್ಟು ಸಂಗ್ರಹಿಸಿಟ್ಟುಕೊAಡು, ಉಳಿದ ನೀರನ್ನು ರೈತರ ಬೆಳೆಗಳಿಗೆ ಒದಗಿಸ ಬೇಕು ಎಂದು ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್.ಜಯಪ್ರಕಾಶ್ (ಜೆಪಿ) ಒತ್ತಾಯಿಸಿದರು.
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಡಿ.ಕೆ.ಶಿವಕುಮಾರ್ ಅವರು ಈ ವಿಚಾರದಲ್ಲಿ ಯಾವುದೇ ರಾಜಿ, ಮುಲಾಜಿಗೆ ಒಳಗಾಗದೆ ನಮ್ಮ ರೈತರ ಹಿತ ಕಾಯಬೇಕು ಎಂದು ಆಗ್ರಹಿದರು.
2024ರಲ್ಲಿ ಇಂಥದ್ದೇ ಸಂದರ್ಭ ಎದುರಾ ದಾಗ ಸರ್ಕಾರ ಕೃಷಿಗೆ ನೀರು ಕೊಡುವುದಿಲ್ಲ ಎಂದಿದ್ದರಿAದ ರೈತರು ಬೆಳೆ ಬೆಳೆಯಲಿಲ್ಲ. ಆದರೆ, ನಮ್ಮ ಜಲಾಶಯಗಳಲ್ಲಿ ಸಂಗ್ರಹವಾಗಿದ್ದ ನೀರನ್ನು ಕಾವೇರಿ ನೀರು ನಿರ್ವಹಣಾ ಸಮಿತಿ ಸುಮಾರು 15 ಬಾರಿ ಸಭೆ ಸೇರಿ ಪ್ರತಿ ಬಾರಿಯೂ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದನ್ನು ಕರ್ನಾಟಕ ಸರ್ಕಾರ ಪಾಲಿಸಿತು. ಈ ಬಾರಿ ಹಾಗಾಗದಂತೆ ಸರ್ಕಾರ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.
ಈಗಿರುವ ಕಾವೇರಿ ನೀರಿನ ಅಳತೆ ಮಾಪನ ಕೇಂದ್ರದಿAದ ತಮಿಳುನಾಡಿಗೆ ಹರಿದು ಹೋಗುತ್ತಿರುವ ನೀರಿನ ಲೆಕ್ಕ ಸರಿಯಾಗಿ ಸಿಗುತ್ತಿಲ್ಲ. ಇದರಿಂದಾಗಿ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೆ, ತಮಿಳುನಾಡಿಗೆ ಭಾರೀ ಲಾಭವಾಗುತ್ತಿದೆ. ಹಾಗಾಗಿ ಈಗಿರುವ ಸ್ಥಳದಿಂದ ಬಿಳಿಗುಂಡ್ಲು ಬಳಿ ಜಲ ಮಾಪನ ಕೇಂದ್ರವನ್ನು ಸ್ಥಾಪಿಸಬೇಕು. ಇದರಿಂದಾಗಿ ಕರ್ನಾಟಕ ರಾಜ್ಯದಿಂದ ತಮಿಳುನಾಡಿಗೆ ಎಷ್ಟು ನೀರು ಹರಿದು ಹೋಗುತ್ತಿದೆ ಎಂಬ ನಿಖರ ಮಾಹಿತಿ ಸಿಗುತ್ತದೆ ಎಂದು ಹೇಳಿದರು.
ತಮಿಳುನಾಡಿಗೆ ವಾರ್ಷಿಕವಾಗಿ 180 ಟಿಎಂಸಿ ನೀರು ಬಿಡಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅವೈಜ್ಞಾನಿಕವಾಗಿದೆ. ಕರ್ನಾಟಕದಲ್ಲಿ ಬರಪರಿಸ್ಥಿತಿ ತಲೆದೋರಿದರೆ, ಆಗ ಏನು ಮಾಡಬೇಕು ಎಂಬ ಸ್ಪಷ್ಟತೆಯಿಲ್ಲ, ಸಂಕಷ್ಟ ಸೂತ್ರವೂ ಇಲ್ಲ. ಹಾಗಾಗಿ ಆದೇಶವನ್ನು ಮರು ಪರಿಶೀಲಿಸಿ, ವ್ಶೆಜ್ಞಾನಿಕವಾದ ತೀರ್ಮಾನ ನೀಡಬೇಕು ಎಂದು ಆಗ್ರಹಿಸಿದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪದೇ ಪದೇ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಹೊರಡಿಸುತ್ತಲೇ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹಾಗಾಗಿ ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ದೊರಕಿಸಿಕೊಳ್ಳಲೆಂದು ರಾಜ್ಯ ಸರ್ಕಾರ ಪ್ರತ್ಯೇಕ ಸಚಿವಾಲಯ ರಚಿಸಿ, ಅದಕ್ಕೆ ಕೂಡಲೇ ಸಚಿವರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಕಾವೇರಿ ಕಣಿವೆಯ ಜಲಾಶಯದಲ್ಲಿರುವ ಅಧಿಕಾರಿಗಳು ತಮಿಳುನಾಡಿಗೆ ನೀರು ಹರಿಸುವುದಕ್ಕೆಂದು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಸಂಬAಳ ಕೊಡುವುದು ರಾಜ್ಯದ ಜನರು ಎಂಬುದನ್ನು ಮರೆತಿದ್ದಾರೆ. ಕೂಡಲೇ ಜಲಾಶಯ ವ್ಯಾಪ್ತಿಯಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ನೀರು ಹರಿಸಬೇಕು, ಇಲ್ಲದಿದ್ದರೆ ಹೋರಾಟವನ್ನು ಆರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮೈಸೂರು ನಗರದಲ್ಲಿ ಜನರಿಗೆ ನಗರಪಾಲಿಕೆಯವರು ಕಬಿನಿ, ಕಾವೇರಿ ನೀರನ್ನು ಸರಿಯಾಗಿ ಪೂರೈಸದೆ ಬೋರ್‌ವೆಲ್ ನೀರನ್ನು ಬಿಡುತ್ತಿದ್ದಾರೆ. ಸಂಕಷ್ಟದ ಸಮಯದಲ್ಲಿ ಮಾತ್ರ ಬೋರ್ ವೆಲ್ ನೀರನ್ನು ಪೂರೈಕೆ ಮಾಡಬೇಕೆ ವಿನಃ ಈಗಲ್ಲ, ಕೂಡಲೇ ಕಾವೇರಿ, ಕಬಿನಿ ನೀರು ಪೂರೈಸಬೇಕು, ಬೋರ್‌ವೆಲ್ ನೀರು ಪೂರೈಕೆಯನ್ನು ಸ್ಥಗಿತಗೊಳಿಸಬೇಕು, ಇಲ್ಲದಿದ್ದರೆ ಪ್ರತಿಭಟನೆ ನಡೆಸಿ ಬಿಸಿ ಮುಟ್ಟಿಸಬೇಕಾಗುತ್ತದೆ ಎಂದು ನಗರಪಾಲಿಕೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷ ಎಂ.ಜೆ.ಸುರೇಶ್ ಗೌಡ, ರೈತ ಮುಖಂಡರಾದ ಸಿಂಧುವಳ್ಳಿ ಶಿವಕುಮಾರ್, ಕೃಷ್ಣಗೌಡ, ಆನಂದ್‌ಕುಮಾರ್, ಸೋಮೇ ಗೌಡ, ಹೊನ್ನೇಗೌಡ, ಬೋಗಾದಿ ಸಿದ್ದೇಗೌಡ, ಚೇತನ್, ರಮೇಶ್ ಹಾಜರಿದ್ದರು.