
ಪಿರಿಯಾಪಟ್ಟಣ : ಪಕ್ಷ ಸಂಘಟನೆಯ ಮೂಲಕ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಮಾಜಿ ಶಾಸಕ ಕೆ ಮಹದೇವ್ ತಿಳಿಸಿದರು.
ಪಟ್ಟಣದ ಶ್ರೀ ಮಂಜುನಾಥ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜೆಡಿಎಸ್ ಕಾರ್ಯಕರ್ತರ ಬೂತ್ ಕಮಿಟಿ ಸಭೆ ಯನ್ನು ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷವು ಜೆಡಿಎಸ್ ಮತ್ತು ಬಿಜೆಪಿ ಯವರು ಮತ ಕಳ್ಳತನ ಮಾಡುತ್ತಿದ್ದಾರೆ ಎಂದು ಆರೋಪಿಸುವುದರ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ರವರು ಮತದಾರರಿಗೆ ಅನ್ಯಾಯವಾಗಬಾರದು ಎಂದು ಎಸ್ಐಆರ್ ಪ್ರಕ್ರಿಯೆಯನ್ನು ಬೆಂಬಲಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಪ್ರಾಮಾಣಿಕವಾಗಿ ಮತ್ತು ಬದ್ಧತೆಯಿಂದ ಪಕ್ಷ ಸಂಘಟನೆ ಮಾಡುವುದರ ಮೂಲಕ ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವಂತೆ ಶ್ರಮಿಸಬೇಕು. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಕಾರ್ಯಕರ್ತರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಇದನ್ನು ಅರಿತು ಕಾರ್ಯಕರ್ತರು ಶಿಸ್ತಿನ ಮೂಲಕ ಕಾರ್ಯ ನಿರ್ವಹಿಸಬೇಕು ಎಂದು ಎಚ್ಚರಿಸಿದರು.
ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ.ಪ್ರಸನ್ನ
,ಮೈಸೂರು ಜಿಲ್ಲಾ ಅಧ್ಯಕ್ಷೆ ದಾಕ್ಷಯಿನಿ,ತಾಲ್ಲೂಕು ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮಾತನಾಡಿದರು.
ಈ ಸಂದರ್ಭದಲ್ಲಿ ಮೈಮುಲ್ ಮಾಜಿ ನಿರ್ದೇಶಕ ಹೆಚ್.ಡಿ.ರಾಜೇಂದ್ರ,ಮುಖಂಡರಾದ
ದೊರೆಕೆರೆ ನಾಗೇಂದ್ರ, ವಕೀಲ ನಾಗರಾಜ್,ಸತೀಶ್,ಐಲಾಪುರ ರಾಮು, ಎಂ.ಜೆ.ಸ್ವಾಮಿ,ಮೈಲಾರಪ್ಪ,ಶಿವಣ್ಣ,ನಿರಂಜನ್,ಕುಮಾರ್,ತಿಮ್ಮ ನಾಯಕ, ಸುನೀತಾ,ಮಂಜುನಾಥ್ ಸಿಂಗ್, ಸೋಮಶೇಖರ್ ಆವರ್ತಿ,ಗಗನ್,ರಾಮಚಂದ್ರ ಸೇರಿದಂತೆ ಇತರರಿದ್ದರು.