
ಮೈಸೂರು: ಈ ಬಾರಿ ನಡೆಯಲಿರುವ ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸಿದರೆ, ನನಗೆ ಬಹಳ ಖುಷಿಯಾಗುತ್ತದೆ’ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನಮ್ಮ ವರುಣ ಕ್ಷೇತ್ರದಲ್ಲಿರುವ ಮಠದವರು. ಅವರು ಎಲ್ಲ ಕ್ಷೇತ್ರದಲ್ಲೂ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ’. ಶ್ರೀಗಳನ್ನು ಆಹ್ವಾನಿಸಬೇಕು ಎಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಉನ್ನತಮಟ್ಟದ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಯಿತು. ಪ್ರತಿ ವರ್ಷದಂತೆ, ಉದ್ಘಾಟಕರ ಆಯ್ಕೆಯನ್ನು ಸಿಎಂ ವಿವೇಚನೆಗೇ ಬಿಡಲಾಗಿದೆ’ ಎಂದು ತಿಳಿಸಿದರು.