Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ; ವರ್ಷ ಪೂರ್ತಿ ಅಮ್ಯೂಸ್ಮೆಂಟ್ ಪಾರ್ಕ್ ಮಾಡಲು ಯೋಜನೆ; ಡಾ. ಯತೀಂದ್ರ ಸಿದ್ದರಾಮಯ್ಯ


ಮೈಸೂರು: ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು ವರ್ಷಪೂರ್ತಿ ಕಾರ್ಯನಿರ್ವಹಿಸುವ ಅಮ್ಯೂಸ್ಮೆಂಟ್ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆ ಪ್ರಾಧಿಕಾರದ ಮುಂದಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಭಾಂಗಣದಲ್ಲಿ 2026ರ ದಸರಾ ವಸ್ತು ಪ್ರದರ್ಶನ ಆಯೋಜನೆಯ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ವಸ್ತು ಪ್ರದರ್ಶನವು ದಸರಾ ಹಬ್ಬದಿಂದ ಆರಂಭವಾಗಿ ಒಟ್ಟು 90 ದಿನಗಳ ಕಾಲ, ಅಂದರೆ 2027ರ ಜನವರಿ 8, ರವರೆಗೆ ಸಾರ್ವಜನಿಕರಿಗೆ ಮುಕ್ತವಾಗಿರಲಿದ್ದು, ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಅವಧಿಯನ್ನು ಮತ್ತಷ್ಟು ವಿಸ್ತರಿಸುವ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಕಳೆದ ವರ್ಷಗಳಲ್ಲಿ 8 ಮತ್ತು 9 ಲಕ್ಷದಷ್ಟಿದ್ದ ಪ್ರವಾಸಿಗರ ಸಂಖ್ಯೆಯು ಪ್ರಸ್ತುತ ಸಾಲಿನಲ್ಲಿ ಅಧಿಕಾರಿಗಳ ಉತ್ತಮ ನಿರ್ವಹಣೆಯಿಂದಾಗಿ ಬರೋಬ್ಬರಿ 15 ಲಕ್ಷದ ಗಡಿಯನ್ನು ದಾಟಿ ದಾಖಲೆ ಬರೆದಿದೆ. ಪ್ರವಾಸಿಗರ ಭೇಟಿಯನ್ನು ಮತ್ತಷ್ಟು ಸುಲಭ ಹಾಗೂ ಆರಾಮದಾಯಕವಾಗಿಸಲು 4 ಕೋಟಿ ರೂಪಾಯಿ ವೆಚ್ಚದಲ್ಲಿ 32 ಶಾಶ್ವತ ಮಳಿಗೆಗಳನ್ನು ಹಾಗೂ ಮಳೆ-ಬಿಸಿಲಿನಿಂದ ರಕ್ಷಣೆ ನೀಡುವ ಅತ್ಯಾಧುನಿಕ ಶೆಲ್ಟರ್ ಒಳಗೊಂಡ ಶಾಶ್ವತ ಫುಡ್ ಕೋರ್ಟ್ ವ್ಯವಸ್ಥೆಯನ್ನು ಆವರಣದಲ್ಲಿ ನಿರ್ಮಿಸಲಾಗುತ್ತಿದೆ ಎಂದರು.
ಪ್ರತಿ ವರ್ಷ ತಾತ್ಕಾಲಿಕ ಮಳಿಗೆಗಳನ್ನು ನಿರ್ಮಿಸುವ ವೆಚ್ಚವನ್ನು ತಪ್ಪಿಸಲು ಸಿದ್ದರಾಮಯ್ಯ ಪ್ರದರ್ಶನ ಅಂಗಳದಲ್ಲಿ ಈಗಾಗಲೇ ಕಾಯಂ ಮಳಿಗೆಗಳನ್ನು ಕಲ್ಪಿಸಲಾಗಿದೆ. ಇದರೊಂದಿಗೆ ಸಾರ್ವಜನಿಕರ ನೆಚ್ಚಿನ ಆಕರ್ಷಣೆಗಳಾದ ಸಂಗೀತ ಕಾರಂಜಿ ಹಾಗೂ ಲೇಸರ್ ಶೋ, ಬೋಟಿಂಗ್ ಮತ್ತು ಬೆಂಕಿ ಉಗುಳುವ ಡ್ರಾ÷್ಯಗನ್ ಪ್ರದರ್ಶನ ಒಳಗೊಂಡ, ರಾಜೀವ್ ಗಾಂಧಿ ಡ್ರಾ÷್ಯಗನ್ ಪಾಂಡ್ ಮನರಂಜನಾ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುತ್ತಿದ್ದು, ಮೈದಾನದ ಒಳಭಾಗದಲ್ಲಿ ರಸ್ತೆ ಮತ್ತು ಕುಡಿಯುವ ನೀರಿನಂತಹ ಮೂಲಸೌಕರ್ಯಗಳನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಹೇಳಿದರು.
ಮೈಸೂರು ನಗರದ ಮಧ್ಯಭಾಗದಲ್ಲಿರುವ ಜಾಗಗಳಲ್ಲಿ ರ‍್ಯಾಲಿಗಳು, ಖಾಸಗಿ ಕಾರ್ಯಕ್ರಮಗಳು ಹಾಗೂ ಸಂಗೀತ ಕಚೇರಿಗಳನ್ನು ನಡೆಸುವ್ಯದರಿಂದ, ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ನಗರದ ಹೊರವಲಯದಲ್ಲಿ ಇಂತಹ ಸಾರ್ವಜನಿಕ ಕಾರ್ಯಕ್ರಮಗಳಿಗಾಗಿ ಪ್ರತ್ಯೇಕ ಮೈದಾನವೊಂದನ್ನು ಮೀಸಲಿಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.
ಕಳೆದ ಬಾರಿಯಂತೆ ಈ ಬಾರಿಯೂ ದಸರಾ ವಸ್ತುಪ್ರದರ್ಶನಕ್ಕೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ವಸ್ತುಪ್ರದರ್ಶನವು ಪ್ರಮುಖ ಆಕರ್ಷಣೆಯಾಗಿದ್ದು, ಲಕ್ಷಾಂತರ ಜನ ಭೇಟಿ ನೀಡುವುದರಿಂದ ಅದರ ಅಭಿವೃದ್ಧಿಗೆ ಅನುದಾನದ ಅಗತ್ಯವಿದೆ.
ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳನ್ನು ಈ ವರ್ಷದ ನವೆಂಬರ್ನಲ್ಲಿ ನಡೆಸಲಾಗುವುದು, ಹಾಗೆಯೇ ಗ್ರಾಮ ಪಂಚಾಯಿತಿ ಚುನಾವಣೆಗಳನ್ನೂ ಇದೇ ವರ್ಷ ನಡೆಸಲು ಗ್ರಾಮೀಣಾಭಿವೃದ್ಧಿ ಸಚಿವರು ಒಲವು ತೋರಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಚುನಾವಣೆ ವಿಳಂಬಕ್ಕೆ ಕಾರಣ ಮೈಸೂರನ್ನು ಬೃಹತ್ ಮೈಸೂರು ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಸೆನ್ಸಸ್ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ಯಾವುದೇ ಬದಲಾವಣೆ ಮಾಡಲು ಬರುವುದಿಲ್ಲ ಎಂದು ರಾಜ್ಯಪಾಲರು ತಿಳಿಸಿದ್ದರಿಂದ ಚುನಾವಣೆ ವಿಳಂಬವಾಗಿದೆ. ಈಗ ಸೆನ್ಸಸ್ ಮುಗಿಯುವವರೆಗೆ ಕಾಯುವುದು ಬೇಡ ಎಂದು ತೀರ್ಮಾನಿಸಿದ್ದು, ಶೀಘ್ರದಲ್ಲೇ ಸಿಎಂ ಹಾಗೂ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಚುನಾವಣೆ ನಡೆಸಲಾಗುವುದು ಎಂದರು.
ಬೆAಗಳೂರಿನಲ್ಲಿ ಫುಟ್ಪಾತ್ ಅತಿಕ್ರಮಣ ತೆರವುಗೊಳಿಸುವುದು ಸಂಚಾರ ದಟ್ಟಣೆ ನಿಯಂತ್ರಿಸಲು ಅನಿವಾರ್ಯವಾಗಿದೆ. ಆದರೆ ಇತರೆ ನಗರಗಳಲ್ಲಿ ಮಾನವೀಯತೆಯ ದೃಷ್ಟಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ತೊಂದರೆಯಾಗದoತೆ ನೋಟಿಸ್ ನೀಡಿ, ಪರ್ಯಾಯ ಜಾಗ ಕಲ್ಪಿಸಿ ನಂತರ ತೆರವು ಮಾಡಲಾಗುವುದು. ಮೈಸೂರಿನಲ್ಲಿ ಫುಡ್ ಸ್ಟಿçÃಟ್ ಮತ್ತು ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರದರ್ಶನ ಪ್ರಾಧಿಕಾರದ ಅಧಕ್ಷ ಅಯೂಬ್ ಖಾನ್ ಮತ್ತು ವಿಜಯ ಕುಮಾರ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಮತ್ತಿತರರು ಉಪಸ್ಥಿತರಿದ್ದರು.