Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರೈತರ ಆದಾಯ ಹೆಚ್ಚಳಕ್ಕೆ ವೈಜ್ಞಾನಿಕ ಕೃಷಿ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆ ಅಗತ್ಯ: ರವಿ ಎಸ್.ಕೆ.


ಮೈಸೂರು: ಹವಾಮಾನ ವೈಪರೀತ್ಯದ ಪ್ರಸ್ತುತ ದಿನಗಳಲ್ಲಿ ರೈತರು ಸಮಗ್ರ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಂಡು, ವೈಜ್ಞಾನಿಕವಾಗಿ ಕೃಷಿ ಮಾಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ನಂಜನಗೂಡು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ರವಿ ಎಸ್.ಕೆ. ಹೇಳಿದರು.
ಮೈಸೂರಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ, 2026-27ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಚಿiÀÄಡಿ, ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿಯ ತೊರವಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ, ಕೃಷಿ ಬೆಳೆಗಳಲ್ಲಿ ಬೀಜೋಪಚಾರದ ಮಹತ್ವ ಮತ್ತು ಶಿಫಾರಸ್ಸಿನನ್ವಯ ರಸಗೊಬ್ಬರಗಳ ಮಿತ ಬಳಕೆ ಕುರಿತ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೆಳೆ ವೈವಿಧ್ಯತೆ, ಹವಾಮಾನ ವೈಪರೀತ್ಯದ ಸಮಯದಲ್ಲಿ ಅನುಸರಿಸಬೇಕಾದ ಪರ್ಯಾಯ ಬೆಳೆಗಳ ಬೇಸಾಯ ಕ್ರಮ, ಕೃಷಿ ಮಾರುಕಟ್ಟೆ ಹಾಗೂ ಕೃಷಿ ಬೆಳೆಗಳಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆಯೊಂದಿಗೆ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬಗ್ಗೆ ರೈತರಿಗೆ ಸಮಗ್ರ ಮಾಹಿತಿ ನೀಡಿದರು.
ಸಾವಯವ ಕೃಷಿ ಸಂಶೋಧನಾ ಕೇಂದ್ರದ ನಿವೃತ್ತ ವಿಜ್ಞಾನಿ ಡಾ. ಗೋವಿಂದರಾಜು ಮಾತನಾಡಿ, ರೈತರು ಭೂಮಿಯ ಆರೋಗ್ಯ ಕಾಪಾಡಲು ಜೈವಿಕ ಗೊಬ್ಬರಗಳನ್ನು ಬಳಸಬೇಕು. ಕೃಷಿ ಬೆಳೆಗಳಲ್ಲಿ ಬೀಜೋಪಚಾರಕ್ಕೆ ಪ್ರಥಮ ಆದ್ಯತೆ ನೀಡಿ, ವಿಜ್ಞಾನಿಗಳು ಶಿಫಾರಸು ಮಾಡಿದ ಪ್ರಮಾಣದಲ್ಲಿ ಮಾತ್ರ ರಸಗೊಬ್ಬರಗಳನ್ನು ಮಿತವಾಗಿ ಬಳಸಬೇಕು ಎಂದು ತಿಳಿಸಿದರು.
ಕೇಂದ್ರೀಯ ತಂಬಾಕು ಸಂಶೋಧನಾ ಕೇಂದ್ರದ ನಿವೃತ್ತ ಹಿರಿಯ ವಿಜ್ಞಾನಿ ಮಹದೇವಸ್ವಾಮಿ ಎಂ. ಮಾತನಾಡಿ, ಹವಾಮಾನ ಏರುಪೇರಾದಾಗ ಪರ್ಯಾಯ ಬೆಳೆ ಯೋಜನೆ ಹಾಗೂ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದರಿಂದ ಹೇಗೆ ಹೆಚ್ಚಿನ ಆದಾಯ ಗಳಿಸಬಹುದು ಎಂದು ಮಾರ್ಗದರ್ಶನ ನೀಡಿದರು.
ದೊಡ್ಡಕವಲಂದೆ ಹೋಬಳಿಯ ಕೃಷಿ ಅಧಿಕಾರಿ ಮಧುರ ಮಾತನಾಡಿ, ಕೃಷಿ ಇಲಾಖೆಯಿಂದ ಸಿಗುವ ವಿವಿಧ ಯೋಜನೆಗಳು ಮತ್ತು ಸಬ್ಸಿಡಿಗಳ ಕುರಿತು ರೈತರಿಗೆ ಮಾಹಿತಿ ಹಂಚಿಕೊAಡರು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಗಜೇಂದ್ರಕುಮಾರ್, ರೈತ ಮುಖಂಡರಾದ ವೀರಭದ್ರಸ್ವಾಮಿ, ಮಹದೇವಸ್ವಾಮಿ, ಬಸವಣ್ಣ, ಕೂಸಣ್ಣ, ರಮೇಶ್ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ನೂರಕ್ಕೂ ಹೆಚ್ಚು ಪ್ರಗತಿಪರ ರೈತರು ಹಾಗೂ ರೈತ ಮಹಿಳೆಯರು ಭಾಗವಹಿಸಿ ಕೃಷಿ ತಜ್ಞರಿಂದ ಅಗತ್ಯ ಮಾಹಿತಿ ಪಡೆದುಕೊಂಡರು.