Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಿಕ್ಷಣದಿಂದ ವ್ಯಕ್ತಿತ್ವ ಬೆಳೆವಣಿಗೆ ಸಾಧ್ಯ; ಶ್ರೀ ಸೋಮೇಶ್ವರನಾಥ ಸ್ವಾಮೀಜಿ 

ಆದಿಚುಂಚನಗಿರಿ ಕಾಲೇಜಿನಲ್ಲಿ ಸಿಇಟಿ ಹಾಗೂ ನೀಟ್ ಪರೀಕ್ಷೆಗೆ ತರಗತಿ ಪ್ರಾರಂಭ

ಪಿರಿಯಾಪಟ್ಟಣ: ಸಂಸ್ಕಾರಯುತ ಶಿಕ್ಷಣದಿಂದ ವ್ಯಕ್ತಿತ್ವ ಬೆಳೆವಣಿಗೆ ಸಾಧ್ಯವಾಗುತ್ತದೆ ಎಂದು ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಕಾರ್ಯದರ್ಶಿ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ತಿಳಿಸಿದರು 

ಪಟ್ಟಣದ ಶ್ರೀ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ರಾಷ್ಟ್ರೀಯ ಸೇವಾ ಯೋಜನೆ ಘಟಕ ಉದ್ಘಾಟನೆ ಹಾಗೂ ಸಿಇಟಿ, ನೀಟ್ ತರಬೇತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು

ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣ ಪಡೆಯುವುದರ ಮೂಲಕ ಉತ್ತಮ ವ್ಯಕ್ತಿತ್ವ ಮೈಗೂಡಿಸಿಕೊಳ್ಳಬೇಕು 

ಪದವಿ ಪೂರ್ವ ಹಂತದಲ್ಲಿ ವಿದ್ಯಾರ್ಥಿಗಳು ಹೆಚ್ಚು ಚಂಚಲತೆ ಇರುತ್ತದೆ ಆದ್ದರಿಂದ ವಿದ್ಯಾರ್ಥಿಗಳು ಬೇರೆ ಕಡೆಗೆ ಗಮನಕೊಡದೆ ಶ್ರದ್ದೆಯಿಂದ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಶ್ರೀ ಆದಿಚುಂಚನಗಿರಿ ಮಠವು ಶಿಕ್ಷಣ ಸಂಸ್ಥೆಗಳನ್ನು ತೆರೆಯುವುದರ ಮೂಲಕ ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದೆ ಈ ವರ್ಷದಿಂದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳೂರು ಇನ್ಸ್ಪೈರ್ ಅಕಾಡೆಮಿ ವತಿಯಿಂದ ಸಿಇಟಿ ಹಾಗೂ ನೀಟ್ ಪರೀಕ್ಷೆಗೆ ತರಗತಿ ಪ್ರಾರಂಭವಾಗಿದ್ದು ಈ ಅವಕಾಶವನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣವನ್ನು ಪಡೆದು ಉತ್ತಮ ವ್ಯಕ್ತಿಗಳಾಗಬೇಕು ಎಂದು ಹೇಳಿದರು.

ಮಂಗಳೂರು ಇನ್ಸ್ಪೈರ್ ಅಕಾಡೆಮಿಯ ರಾಜೇಶ್ ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಹಾಗೂ ಸತತ ಅಧ್ಯಯನದಿಂದ ಓದಿದರೆ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬಹುದು ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಏಕಾಗ್ರತೆಯಿಂದ ಆತ್ಮ ವಿಶ್ವಾಸ ದಿಂದ ಅಭ್ಯಾಸಮಾಡಿದಾಗ ಉತ್ತಮ ಅಂಕಗಳನ್ನು ಪಡೆಯಲು ಸಹಾಯಕವಾಗುತ್ತದೆ

 ತಂದೆ ತಾಯಿ, ಉಪನ್ಯಾಸಕರು ನಿಮಗಾಗಿ ಶ್ರಮ ಪಡುತ್ತಿರುತ್ತಾರೆ ನೀವು ಉತ್ತಮ ಫಲಿತಾಂಶ ಪಡೆಯುವುದರ ಮೂಲಕ ಅವರಿಗೆ ಹೆಮ್ಮೆ ತರಬೇಕು ಹೇಳಿದರು .

ಮೈಸೂರು ನಗರ ಪಾಲಿಕೆ ಮಾಜಿ ಸದಸ್ಯ ಪಿ ಪ್ರಶಾಂತ್ ಗೌಡ ಮಾತನಾಡಿ ಶಿಕ್ಷಣದಿಂದ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಬೆಳವಣಿಗೆಯಾಗುತ್ತದೆ ಶಿಕ್ಷಣದ ಜೊತೆಗೆ ಮಾನವೀಯತೆ, ಸಂಸ್ಕಾರಗಳನ್ನು ಕಲಿತುಕೊಳ್ಳಬೇಕು ಶ್ರೀ ಆದಿಚುಂಚನಗಿರಿ ಮಠವು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದೆ ಎಂದು ಹೇಳಿದರು 

 ಕಾಲೇಜಿನಲ್ಲಿ ಸಿಇಟಿ ಹಾಗೂ ನೀಟ್ ಪರೀಕ್ಷೆಗೆ ತರಗತಿ ಪ್ರಾರಂಭ ಮಾಡಲಾಯಿತು 

ಈ ಸಂದರ್ಭದಲ್ಲಿ ನಗರಪಾಲಿಕೆ ಮಾಜಿ ಸದಸ್ಯ ಪಿ. ಪ್ರಶಾಂತ್ ಗೌಡ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮುಖ್ಯಶಿಕ್ಷಕ ಮಹಾದೇವಯ್ಯ, ಕಾಲೇಜಿನ ವ್ಯವಸ್ಥಾಪಕ ಹೆಚ್ ಎನ್ ಸುಧಾಕರ್, ಪ್ರಾಂಶುಪಾಲರಾದ ಪ್ರವೀಣ್, ಕಿರಣ್, ಮುಖ್ಯ ಶಿಕ್ಷಕಿ ದಿವ್ಯ, ಉಪನ್ಯಾಸಕರಾದ ಸ್ವಾಮಿಗೌಡ, ಮಂಜುನಾಥ್, ಪ್ರೀತು, ಪಲ್ಲವಿ, ಸೌಮ್ಯಶ್ರೀ, ಚನ್ನಕೇಶವ, ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷ ಆನಂದ್ ಬಸಲಾಪುರ, ಕಾರ್ಯದರ್ಶಿ ಮೋಹನ್, ಮನು ಸೇರಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳು ಇದ್ದರು