Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್, ಉಪವಾಸನಿರತ ಹೋರಾಟಗಾರರನ್ನು ಬಲವಂತವಾಗಿ ಎಳೆದುಕೊಂಡು ಹೋಗಿರುವ ಸರ್ಕಾರ ಕ್ರಮ ಖಂಡಿಸಿ ಪ್ರತಿಭಟನೆ


ಮೈಸೂರು: ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಹಾಗೂ ಇತರ ಉಪವಾಸನಿರತ ಹೋರಾಟಗಾರರನ್ನು ಬಲವಂತವಾಗಿ ಎಳೆದುಕೊಂಡು ಹೋಗಿರುವ ಸರ್ಕಾರ ಹಾಗೂ ಪೊಲೀಸರ ಕ್ರಮವನ್ನು ಖಂಡಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರಸರ್ಕಾರದ ವಿರುದ್ದ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.ದೇಶದಲ್ಲಿ ನಡೆಯುತ್ತಿರುವ ಚಳುವಳಿಯ ಭಾಗವಾಗಿ ಖ್ಯಾತ ಶಿಕ್ಷಣ ತಜ್ಞ, ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಮತ್ತು ಇತರೆ ಹೋರಾಟಗಾರರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹವು 20ನೇ ದಿನಕ್ಕೆ ಕಾಲಿಟ್ಟಿದೆ. ಈಗಾಗಲೇ ಅವರ ಆರೋಗ್ಯ ತೀರಾ ಹದಗೆಟ್ಟಿದೆ. 9 ಕೆಜಿ ತೂಕ ಇಳಿದಿದೆ. ಇಷ್ಟಾದರೂ ಕೇಂದ್ರ ಸರ್ಕಾರವಾಗಿರಲಿ ಅಥವಾ ಶಿಕ್ಷಣ ಸಚಿವರಾಗಿರಲಿ ಅವರೊಂದಿಗೆ ಯಾವುದೇ ಪ್ರಜಾತಾಂತ್ರಿಕ ಸಂವಾದವನ್ನು ಮಾಡದಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ರೀತಿಯ ಪ್ರಜಾತಾಂತ್ರಿಕ ಚರ್ಚೆ ನಡೆಸದೆ ಸೋನಂ ವಾಂಗ್ಚುಕ್ ಹಾಗೂ ಇತರ ಉಪವಾಸನಿರತ ಹೋರಾಟಗಾರರನ್ನು ಬಲವಂತವಾಗಿ ಎಳೆದುಕೊಂಡು ಹೋಗಿರುವ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಸರ್ವಾಧಿಕಾರಿ ಧೋರಣೆಯನ್ನು ಎಐಡಿಎಸಓ ಅತ್ಯುಗ್ರವಾಗಿ ಖಂಡಿಸುತ್ತದೆ ಎಂದರು.
ಪ್ರತಿಭಟನೆಯಲ್ಲಿ ವಿಶ್ರಾಂತ ಕುಲಪತಿ ಸಬಿಹಾ ಭೂಮಿಗೌಡ,
ಮೇಲುಕೋಟೆ ಜನಪದ ಸೇವಾ ಟ್ರಸ್ಟ್ ಸಂತೋಷ್ ಕೌಲಗಿ, ಎಐಡಿಎಸ್‌ಓ ರಾಜ್ಯ ಉಪಾಧ್ಯಕ್ಷ ದಿವಾಕರ್, ಜಿಲ್ಲಾ ಕಾರ್ಯದರ್ಶಿನಿತಿನ್, ಜಿಲ್ಲಾಧ್ಯಕ್ಷರಾದ ಚಂದ್ರಕಲಾ, ಉಪಾಧ್ಯಕ್ಷೆ ಸ್ವಾತಿ, ಪದಾಧಿಕಾರಿಗಳಾದ ಹೇವಾ ಚಂದ್ರಿಕಾ ,ಅಂಜಲಿ, ದಿಶಾ, ಅಭಿಷೇಕ್ ಸೇರಿದಂತೆ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಬೇಡಿಕೆಗಳು;
*ಕೇಂದ್ರ ಸರ್ಕಾರವು ಸೋನಂ ವಾಂಗ್ಚುಕ್ ಮತ್ತು ಇತರ ಎಲ್ಲಾ ಉಪವಾಸ ಸತ್ಯಾಗ್ರಹಿಗಳೊಂದಿಗೆ ಪ್ರಜಾಸತ್ತಾತ್ಮಕ ಚರ್ಚೆಗಳಿಗಾಗಿ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು.
*ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
*ಸಂಪೂರ್ಣವಾಗಿ ವಿಫಲವಾಗಿರುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಯನ್ನು ರದ್ದುಗೊಳಿಸಬೇಕು