Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳು ಕೃಷಿಯ ಮಹತ್ವ ಅರಿಯಬೇಕು: ಹಾರ್ಟ್ ಸಂಸ್ಥೆಯ ಅಧ್ಯಕ್ಷ ಶಿವಕುಮಾರ

ಮೈಸೂರು: ಸೇಂಟ್ ಮರಿಯಾ ಡಿ ಮ್ಯಾಟಿಯಾಸ್ ಶಾಲೆ, ಮೈಸೂರು ಹಾಗೂ ಹಾರ್ಟ್ ಸಂಸ್ಥೆಯ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ “ಅಣಬೆ ಕೃಷಿ ಮತ್ತು ಅಣಬೆಯ ಮಹತ್ವ” ಕುರಿತು ಪರಿಚಯಾತ್ಮಕ ಹಾಗೂ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಾರ್ಟ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಿವಕುಮಾರ ಮಾತನಾಡಿ, ವಿದ್ಯಾರ್ಥಿಗಳು ಕೃಷಿಯ ಜ್ಞಾನ ಮತ್ತು ಅದರ ಮಹತ್ವವನ್ನು ಅರಿತುಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು. ಕೃಷಿ ನಮ್ಮ ದೇಶದ ಆರ್ಥಿಕತೆಯ ಪ್ರಮುಖ ಆಧಾರವಾಗಿದ್ದು, ಅಣಬೆ ಕೃಷಿಯಂತಹ ವೈಜ್ಞಾನಿಕ ಮತ್ತು ಲಾಭದಾಯಕ ಕೃಷಿ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳು ಅರಿವು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಶಾಲೆಯಲ್ಲಿ ಶಿಕ್ಷಣ ಪಡೆದ ಎಲ್ಲರೂ ಕೆ.ಎ.ಎಸ್, ಐ.ಎ.ಎಸ್, ಐ.ಪಿ.ಎಸ್ ಮಾಡಲು ಸಾಧ್ಯವಾಗುವುದಿಲ್ಲ. ಈ ರೀತಿಯ ಕೌಶಲ್ಯಗಳನ್ನು ಕಲಿತು ಜೀವನದಲ್ಲಿ ಅಳವಡಿಸಿ ಕೊಳ್ಳುವುದರಿಂದ ಯಶಸ್ವಿ ಉದ್ಯಮಿಯಾಗಲು ಸಾಧ್ಯವಿದ್ದು, ಈಗಿನಿಂದಲೇ ಇಂತಹ ಕೌಶಲ್ಯಗಳನ್ನು ಅಳವಡಿಸಿ ಕೊಳ್ಳಲು ಮುಂದಾಗುವAತೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ಶಾಲೆಯ ಪ್ರಾಂಶುಪಾಲರಾದ ಮಿನಿ ಮಾತನಾಡಿ, ದ್ವಿತೀಯ ಹಂತದ ಶಿಕ್ಷಣದ ಜೊತೆಗೆ ಮಕ್ಕಳಿಗಲ್ಲಿ ಕಾಶಲ್ಯ ಆಧಾರಿತ ತರಬೇತಿಗಳನ್ನು ನೀಡುವ ಮೂಲಕ ಸ್ವ ಉದ್ಯೋಗದ ಕಲ್ಪನೆಯ ಬಗ್ಗೆ ಮಕ್ಕಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಪ್ರಸನ್ನ ಮಾತನಾಡಿ, ಅಣಬೆಯ ಪೌಷ್ಟಿಕಾಂಶ, ಆರೋಗ್ಯದಲ್ಲಿ ಅದರ ಪಾತ್ರ, ಅಣಬೆ ಬೆಳೆಯುವ ವಿಧಾನ, ನಿರ್ವಹಣೆ ಹಾಗೂ ಉದ್ಯಮಶೀಲತೆಯ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಅಣಬೆ ಕೃಷಿಯು ಪೌಷ್ಠಿಕ ಆಹಾರವಾಘಿದ್ದು, ಕಡಿಮೆ ಬಂಡವಾಳದಲ್ಲಿ ಉತ್ತಮ ಆದಾಯ ಗಳಿಸಬಹುದಾದ ಸ್ವಯಂ ಉದ್ಯೋಗದ ಮಾರ್ಗವಾಗಿದೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಅಣಬೆ ಕೃಷಿಯ ಕುರಿತು ವಿವಿಧ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮತ್ತು ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿತು.
ಈ ಸಂದರ್ಭದಲ್ಲಿ ಹಾರ್ಟ್ ಸಂಸ್ಥೆಯ ಸಂಯೋಜಕರಾದ ಶಿವಲಿಂಗ, ಶಾಲೆಯ ಶಿಕ್ಷಕ ವೃಂದ ಹಾಗೂ 120 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸಿದರು.