
ಮೈಸೂರು; ನಗರದ ವಿ.ವಿ ಪುರಂ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ `ಅಪಘಾತ ಸಂತ್ರಸ್ತರ ದಿನಾಚರಣೆ’ಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳು ಸಂತ್ರಸ್ತರ ಅಹವಾಲುಗಳನ್ನು ಆಲಿಸಿ, ಅವರ ಪ್ರಕರಣಗಳ ಸದ್ಯದ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಟ್ಟರು. ಜೊತೆಗೆ ಸಂಚಾರ ನಿಯಮಗಳ ಪಾಲನೆ ಹಾಗೂ ಅಪಘಾತ ಮುಕ್ತ ರಸ್ತೆ ನಿರ್ಮಾಣದಲ್ಲಿ ಸಾರ್ವಜನಿಕರ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸಿದರು.