Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ರಫ್ತು ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿ ಪರಿಶೀಲನೆ


ಮೈಸೂರು; ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ನಿರ್ದೇಶಕ ಆರ್ ರಮೇಶ್ ಮೈಸೂರು ಕೈಗಾರಿಕೆಗಳ ಸಂಘದ ಯೋಜಿತ ಮೈಸೂರು ರಫ್ತು ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿ ನಿರ್ಮಾಣ ಪ್ರಗತಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಹಾಜರಿದ್ದ ನಿರ್ಮಾಣ ಸಂಸ್ಥೆಯಾದ ಕೆ ಐ ಎ ಡಿ ಬಿ ಅ ಭಿವೃದ್ಧಿ ಅಧಿಕಾರಿ ಮಾದೇಶ್ ಅವರಿಗೆ ಈಗಾಗಲೇ ಬಿಡುಗಡೆಯಾಗಿರುವ ಹಣದ ಕಾಮಗಾರಿಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸಲು ಸೂಚಿಸಿದರು .
ಇದೇ ಸಂದರ್ಭದಲ್ಲಿ ಹಾಜರಿದ್ದ ಮೈಸೂರು ಕೈಗಾರಿಕೆಗಳ ಸಂಘದ ಅಧ್ಯಕ್ಷ ಪಿ.ವಿಶ್ವನಾಥ್ ಮತ್ತು ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ ರವರು, ರಫುö್ತ ಕೇಂದ್ರದ ಮೂಲ ಯೋಜನೆಯಂತೆ ರಾಜ್ಯ ಸರ್ಕಾರದ ಪಾಲಿನ ಬಾಕಿ ಮೂರು ಕೋಟಿ ರೂಪಾಯಿಗಳ ಬಿಡುಗಡೆಗೆ ಪೂರಕವಾಗಿ ರಾಜ್ಯ ಸರ್ಕಾರದ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆಯನ್ನು ಕರೆಯಲು ವಿನಂತಿಸಿದರು.
ಈ ಸಂದರ್ಭದಲ್ಲಿ ಮೈಸೂರು ವಿಟಿಪಿಸಿ ಉಪನಿರ್ದೇಶಕಿ ಮೇಗಲ, ಕೆಎಡಿಬಿ ಇಂಜಿನಿಯರ್‌ಗಳು ಹಾಜರಿದ್ದರು.