
ಮೈಸೂರು: ರಾಜ್ಯದಲ್ಲಿ ಮಾದಕ ವಸ್ತುಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸಲಾಗುತ್ತಿದ್ದು, 2028ರೊಳಗೆ ಕರ್ನಾಟಕವನ್ನು ಮಾದಕ ವ್ಯಸನ ಮುಕ್ತ ರಾಜ್ಯವನ್ನಾಗಿಸುವ ಗುರಿ ಹೊಂದಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದರು.
ತಮ್ಮ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಪರೇಷನ್ ರೈಸ್ ಮತ್ತು `ಃಇಆಂ ಃಖಔ’ ಅಭಿಯಾನದ ಕುರಿತು ಮಾತನಾಡಿ,
ಆಪರೇಷನ್ ರೈಸ್ ಅಡಿಯಲ್ಲಿ ನಿರಾಕರಿಸಿ ಹಾಗೂ ಮಾಹಿತಿ ನೀಡಿ, ಬೆಂಬಲ ನೀಡಿ ಹಾಗೂ ಸಬಲೀಕರಿಸಿ ಎಂಬ ನಾಲ್ಕು ಅಂಶಗಳಿಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಶಾಲೆ-ಕಾಲೇಜುಗಳು, ಹಾಸ್ಟೆಲ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳು, ಡಮ್ ಡ್ರಗ್ ಟೆಸ್ಟ್, ಕೌನ್ಸೆಲಿಂಗ್ ಹಾಗೂ ಸಹಾಯವಾಣಿ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದೆ ಎಂದು ಹೇಳಿದರು.
ಅಧಿಕೃತ ಅಂಕಿಅAಶಗಳ ಪ್ರಕಾರ, 2023-2026ರ ಅವಧಿಯಲ್ಲಿ ರಾಜ್ಯದಲ್ಲಿ 22,892 ಎನ್ ಡಿಪಿಎಸ್ ಪ್ರಕರಣಗಳು ದಾಖಲಾಗಿದ್ದು, 31,271 ಆರೋಪಿಗಳನ್ನು ಬಂಧಿಸಲಾಗಿದೆ. ಈ ಅವಧಿಯಲ್ಲಿ 28,292 ಕೆ.ಜಿ. ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಮೌಲ್ಯ 794.55 ಕೋಟಿಯಾಗಿದೆ ಎಂದು ಮಾಹಿತಿ ನೀಡಿದರು.
ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಮಾದಕ ಜಾಲದ ವಿರುದ್ಧ ವಿಶೇಷ ಕಾರ್ಯಾಚರಣೆ, ಜಾಗೃತಿ ಅಭಿಯಾನ ಮತ್ತು ಪೆಡ್ಲರ್ ಗಳ ವಿರುದ್ಧ ಕಠಿಣ ಕ್ರಮ ಮುಂದುವರಿಸಲಾಗುತ್ತಿದೆ ಎಂದು ತಿಳಿಸಿದರು.
ಮಾದಕ ವಸ್ತುಗಳ ಕುರಿತು ಸಾರ್ವಜನಿಕರು ವಾಟ್ಸ್ಆಪ್ ಸಹಾಯವಾಣಿ ಮತ್ತು ಕ್ಯೂಆರ್ ಕೋಡ್ ಮೂಲಕ ಮಾಹಿತಿ ನೀಡಬಹುದು ಎಂದು ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು. ಇದೇ ವೇಳೆ ಅಭಿಯಾನದ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಯಿತು.